ವಾಲ್ಮೀಕಿ ಸಮುದಾಯದ ಸಮಾವೇಶ: ಗೌಡರ ಪೂರ್ವಭಾವಿ ಚರ್ಚೆ


Team Udayavani, Apr 25, 2017, 12:12 PM IST

devegowda.jpg

ಬೆಂಗಳೂರು: ಮುಂದಿನ ವಿಧಾನಸಭೆಯಲ್ಲಿ ಸಮುದಾಯವಾರು ಬೆಂಬಲ ಪಡೆಯುವ ನಿಟ್ಟಿನಲ್ಲಿ ನಿರಂತರ ಸಮಾವೇಶ ನಡೆಸಲು ಮುಂದಾಗಿರುವ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ, ವಾಲ್ಮೀಕ ಸಮುದಾಯದ ಸಮಾವೇಶ ನಡೆಸುವ ಸಂಬಂಧ ಮುಖಂಡರ ಜತೆ ಸಮಾಲೋಚನೆ ನಡೆಸಿದರು.

ಸೋಮವಾರ ಪಕ್ಷದ ಕಚೇರಿ ಜೆಪಿ ಭವನದಲ್ಲಿ ವಾಲ್ಮೀಕಿ ಸಮುದಾಯದ ಮುಖಂಡರ ಜತೆ ಪೂರ್ವಭಾವಿ ಸಭೆ ನಡೆಸಿದ ಗೌಡರು, ಸಮಾವೇಶ ಎಲ್ಲಿ ನಡೆಸಬೇಕು ಎಂಬುದರ ಬಗ್ಗೆ ಸಲಹೆ ಪಡೆದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಾಡಬಹುದೇ? ಅಥವಾ ಆ ಸಮುದಾಯ ಹೆಚ್ಚಾಗಿರುವ ಜಿಲ್ಲಾ ಕೇಂದ್ರದಲ್ಲಿ ಮಾಡಬಹುದೇ? ಎಂಬ ಬಗ್ಗೆ ಚರ್ಚಿಸಿದರು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ಅಕಾರಕ್ಕೆ ಬಂದರೆ ವಾಲ್ಮೀಕಿ ಸಮುದಾಯದ ಅಭಿವೃದ್ಗೆ ಕ್ರಮ ಕೈಗೊಳ್ಳಲಾಗುವುದು. ಸಮುದಾಯದ ಎಲ್ಲ ಬೇಡಿಕೆಗಳ ಬಗ್ಗೆಯೂ ಸ್ಪಂದಿಸಲಾಗುವುದು ಎಂದು ಭರವಸೆ ನೀಡಿದರು.

ಮೇ ವೇಳೆಗೆ ಸಮಾವೇಶ ಸಾಧ್ಯತೆ: ಮೇ ಮೊದಲ ವಾರ ಅಥವಾ ಕೊನೇ ವಾರದಲ್ಲಿ ವಾಲ್ಮೀಕಿ ಸಮುದಾಯದ ಸಮಾವೇಶ ಆಯೋಜಿಸುವ ಕುರಿತು ಸಭೆಯಲ್ಲಿ ನಿರ್ಧರಿಸಲಾಯಿತು. ಇದರ ಜತೆಗೆ ಹಿಂದುಳಿದ ವರ್ಗಗಳ ಸಮಾವೇಶದ ಬಗ್ಗೆಯೂ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ. ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ದೇವೇಗೌಡರು, ವಾಲ್ಮೀಕಿ ಒಬ್ಬ ಮಹಾನ್‌ ವ್ಯಕ್ತಿ. ಆ ಸಮುದಾಯದಕ್ಕೆ ಸೇರಿದವರ ಸ್ಥಿತಿ ಇಂದು ಕಷ್ಟವಾಗಿದೆ. ನಮ್ಮ ಪಕ್ಷಕ್ಕೆ ಶಕ್ತಿ ಬಂದರೆ ಆ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂಬ ಆಸೆ ಇದೆ. ಸಮುದಾಯದ ಮುಖಂಡರ ಜತೆ ಮಾತನಾಡಿದ್ದೇನೆ. ಸಮಾವೇಶಗಳ ಬಗ್ಗೆಯೂ ಚರ್ಚೆ ನಡೆಯಿತು ಎಂದು ಹೇಳಿದರು.

ಕಷ್ಟ ಪಟ್ಟರೆ 120 ಸೀಟು ಕಷ್ಟವಲ್ಲ: ನನಗೆ ಮತ್ತೆ ಮುಖ್ಯಮಂತ್ರಿ, ಪ್ರಧಾನ ಮಂತ್ರಿ ಆಗಬೇಕೆಂಬ ಆಸೆಯಿಲ್ಲ. ಜಾತ್ಯತೀತ ಜನತಾದಳ ಮೂಲಕ ಎಲ್ಲ ಸಣ್ಣ ಮತ್ತು ಹಿಂದುಳಿದ ಸಮುದಾಯಗಳಿಗೆ ಶಕ್ತಿ ತುಂಬುವುದು ನನ್ನ ಆಸೆ. ನಮ್ಮ ಕಾರ್ಯಕರ್ತರು ಮತ್ತು ಮುಖಂಡರು ಕಷ್ಟ ಪಟ್ಟರೆ 120 ಸೀಟು ಗೆಲ್ಲವುದು ಕಷ್ಟವಲ್ಲ ಎಂದು ತಿಳಿಸಿದರು. ಯಾರೋ ಮಹಾನುಭಾವರು, ಜೆಡಿಎಸ್‌ 120 ಸೀಟು ಗೆದ್ದರೆ ದೇಶಾನೇ ಬಿಡ್ತೀನಿ ಅಂತ ಹೇಳಿದ್ದಾರೆ. ಅಣಕು ಮಾತು ಕೇಳಿದಾಗ ನೋವಾಗುತ್ತದೆ. ಆದರೆ, ಒಂದು ಮಾತಂತೂ ನಿಜ. ಜೆಡಿಎಸ್‌ಗೆ ರಾಜ್ಯದಲ್ಲಿ ಭವಿಷ್ಯ ಇದೆ. ನೆಲೆಯೂ ಇದೆ. ಇದನ್ನು ಕಾರ್ಯಕರ್ತರು ಸಾಬೀತುಪಡಿಸಬೇಕು ಎಂದು ಹೇಳಿದರು.

ವಿಶ್ವನಾಥ್‌ ಸೇರ್ಪಡೆ ಗುಸು ಗುಸು
ಕಾಂಗ್ರೆಸ್‌ ಮುಖಂಡ ಎಚ್‌.ವಿಶ್ವನಾಥ್‌ ಜೆಡಿಎಸ್‌ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಸುದ್ದಿ ಕುರಿತು ಕೆಲವರು ಮುಖಂಡರು ಗೌಡರ ಬಳಿ ಪ್ರಸ್ತಾಪಿಸಿದರು. ಆದರೆ,  ಆ ಕುರಿತು ನನ್ನ ಜತೆ ಯಾರೂ ಮಾತನಾಡಿಲ್ಲ. ಸ್ಥಳೀಯ ನಾಯಕರು ಮಾತನಾಡಿರಬಹುದೇನೋ? ಆದರೆ, ಸದ್ಯಕ್ಕೆ ಅಂತಹ ಯಾವುದೇ ಬೆಳವಣಿಗೆಗಳು ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು. 

ಟಾಪ್ ನ್ಯೂಸ್

arrested

Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರ ಬಂಧನ

2-ai

Artificial Intelligence: ಎಐ ಯುಗದಲ್ಲಿ ನಾವು ನೀವು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

1-bheesh

Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ

adani

Gautam Adani, ಸೋದರಳಿಯ ಸಾಗರ್ ವಿರುದ್ಧ ಲಂಚದ ಆರೋಪ ಇಲ್ಲ: ಅದಾನಿ ಗ್ರೂಪ್

1-bang

Bangladesh: ಚಿನ್ಮಯ್‌ ಕೃಷ್ಣದಾಸ್‌ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ

Samantha Ruth Prabhu: ನನ್ನ ಸೆಕೆಂಡ್‌ ಹ್ಯಾಂಡ್‌ ಅಂದ್ರು!: ಸಮಂತಾ ದುಃಖದ ಮಾತು

Samantha Ruth Prabhu: ನನ್ನ ಸೆಕೆಂಡ್‌ ಹ್ಯಾಂಡ್‌ ಅಂದ್ರು!: ಸಮಂತಾ ದುಃಖದ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft: ಕೇರ್‌ ಟೇಕರ್‌ ಮಹಿಳೆಯಿಂದ ಕನ್ನ

Theft: ಕೇರ್‌ ಟೇಕರ್‌ ಮಹಿಳೆಯಿಂದ ಕನ್ನ

Arrested: ಗಾಂಜಾ ಮಾರುತ್ತಿದ್ದ ಏರ್‌ಟೆಲ್‌ ಉದ್ಯೋಗಿ ಬಂಧನ

Arrested: ಗಾಂಜಾ ಮಾರುತ್ತಿದ್ದ ಏರ್‌ಟೆಲ್‌ ಉದ್ಯೋಗಿ ಬಂಧನ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

arrested

Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರ ಬಂಧನ

3-aranthodu

Aranthodu: ವಾಹನ ಡಿಕ್ಕಿ ಹೊಡೆದು ಕಾಡು ಹಂದಿ ಸಾವು

2-ai

Artificial Intelligence: ಎಐ ಯುಗದಲ್ಲಿ ನಾವು ನೀವು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

1-bheesh

Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.