ವಾಲ್ಮೀಕಿ ಜಯಂತಿಗೆ ಸಿಎಂ, ಡಿಸಿಎಂ ಗೈರು

Team Udayavani, Oct 25, 2018, 12:31 PM IST

blore10.jpg

ಬೆಂಗಳೂರು: ಸಮಾಜವನ್ನು ನಾವೇ ವಿಭಜಿಸಿಕೊಂಡು ಸರ್ವ ಜನಾಂಗದವರ ಕಲ್ಯಾಣಕ್ಕೆ ಶ್ರಮಿಸಿದ ಮಹನೀಯರನ್ನು ಆಯಾ ಜಾತಿ, ಸಮುದಾಯಕ್ಕೆ ಸೀಮಿತ ಗೊಳಿಸಲಾಗುತ್ತಿದೆ. ಇನ್ನಾದರೂ ಮನಪರಿವರ್ತನೆ ಆಗಬೇಕಿದ್ದು, ನಮ್ಮಿಂದಲೇ ಶುರುವಾಗಬೇಕಿದೆ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ ನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ಮಾತನಾಡಿದ ಅವರು, ಸಮಾಜದ ಒಳಿತಿನ ಸಂದೇಶ ಸಾರಿದ ಮಹಾನುಭಾವರ  ತತ್ವ, ಆದರ್ಶಗಳನ್ನು ಅನುಷ್ಠಾನಗೊಳಿಸುವ, ಪಾಲಿಸುವ ಇಚ್ಛಾಶಕ್ತಿ ಕೊರತೆ ಕಾಣುತ್ತಿದೆ. ಸಮಾಜವನ್ನು ನಾವೇ ವಿಭಜಿಸಿಕೊಂಡಿದ್ದೇವೆ. ಕೆಲವು ಪಕ್ಷವು ಶ್ರೀರಾಮನನ್ನು ಬಳಸಿಕೊಳ್ಳುತ್ತವೆ. ಆದರೆ ರಾಮಾಯಣ ಕೃತಿ ರಚಿಸಿದ ವಾಲ್ಮೀಕಿ ಅವರನ್ನು ಸ್ಮರಿಸುವುದಿಲ್ಲ. 

ಡಾ.ಬಿ.ಆರ್‌.ಅಂಬೇಡ್ಕರ್‌ ಅವರನ್ನು ದಲಿತರ ನಾಯಕ, ರವೀಂದ್ರನಾಥ ಟ್ಯಾಗೋರ್‌ ಅವರು ಪಶ್ಚಿಮ ಬಂಗಾಳಕ್ಕೆ ಸೀಮಿತ, ಶ್ರೀರಾಮ ಎಂದರೆ ಬಿಜೆಪಿ, ವಾಲ್ಮೀಕಿ ಅವರನ್ನು ಪರಿಶಿಷ್ಟ ಪಂಗಡಕ್ಕೆ ಸೀಮಿತಗೊಳಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಮೈತ್ರಿ ಸರ್ಕಾರಕ್ಕೆ ರಾಮಾಯಣದಲ್ಲಿನ ರಾಜಧರ್ಮವು ಸ್ಫೂರ್ತಿಯಾಗಿದೆ.

ಸಾನಿಧ್ಯ ವಹಿಸಿದ್ದ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ, ಕೀಳರಿಮೆಯಿಂದ ಹೊರಬಂದ ಆವಿಕವಿ ಮಹರ್ಷಿ ವಾಲ್ಮೀಕಿ ಸಮುದಾಯದವರಾಗಿರುವುದಕ್ಕೆ ಹೆಮ್ಮೆ ಪಡಬೇಕು. ರಾಮರಾಜ್ಯದ ಪರಿಕಲ್ಪನೆಯಡಿ ಮಾನವ ಹಕ್ಕುಗಳ ಪಾಲನೆಗೆ ಡಾ.ಬಿ.ಆರ್‌.ಅಂಬೇಡ್ಕರ್‌ ಆದ್ಯತೆ ನೀಡಿದ್ದರೂ ಜಾದಿವಾದಿಗಳು ಮಾನವ ಹಕ್ಕು ಪಾಲನೆಗೆ ಅವಕಾಶ ನೀಡುತ್ತಿಲ್ಲ ಎಂದು ಹೇಳಿದರು.

ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನ್‌ದಾಸ್‌, ಕುವೆಂಪು ಹೆಸರಿನ ಪ್ರಶಸ್ತಿಯನ್ನು ಒಕ್ಕಲಿಗರಿಗೆ, ಬಸವೇಶ್ವರ ಪ್ರಶಸ್ತಿಯನ್ನು ಲಿಂಗಾಯಿತರಿಗೆ , ಕನಕ ಪ್ರಶಸ್ತಿಯನ್ನು ಕುರುಬ ಸಮುದಾಯವರಿಗೆ, ವಾಲ್ಮೀಕಿ ಪ್ರಶಸ್ತಿಯನ್ನು ವಾಲ್ಮೀಕಿ ಸಮುದಾಯದ ಸಾಧಕರಿಗೆ ನೀಡುವುದಕ್ಕಿಂತ ಆ ಸಮುದಾಯದವರ ಕಲ್ಯಾಣಕ್ಕೆ ಶ್ರಮಿಸಿದ ಇತರರಿಗೂ ಪ್ರಶಸ್ತಿ ನೀಡಿ ಸತ್ಕರಿಸುವಂತಾಗಬೇಕು. ಆ ಹಿನ್ನೆಲೆಯಲ್ಲಿ ವಾಲ್ಮೀಕಿ ಸಮುದಾಯಕ್ಕೆ ಸಾಕಷ್ಟು ಕೊಡುಗೆ ನೀಡಿದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅನಿವಾರ್ಯ ಕಾರಣಗಳಿಂದ ಆಗಮಿಸಲಾಗದ ದೇವೇಗೌಡರಿಗೆ ಇನ್ನೊಂದು ದಿನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸುವುದು ಸೂಕ್ತ ಎಂದು ಸಲಹೆ ನೀಡಿದರು.

ಪೂರ್ವಯೋಜಿತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಎಚ್‌.ಡಿ.ದೇವೇಗೌಡರು ಬುಧವಾರ ಬೆಳಗ್ಗೆ ಲಂಡನ್‌ಗೆ ಪ್ರಯಾಣ ಬೆಳೆಸಿದ್ದರಿಂದ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿರಲಿಲ್ಲ. ಇದೇ ವೇಳೆ ಎಸ್‌ಎಸ್‌ಎಲ್‌ಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳಾದ ಚಿತ್ರದುರ್ಗದ ಪ್ರದೀಪ್‌, ಬೆಳಗಾವಿಯ ದೀಪಾ ನಾಯ್ಕರ್‌, ತುಮಕೂರಿನ ರವಿತೇಜ ಅವರಿಗೆ ಕ್ರಮವಾಗಿ 5,000 ರೂ, 4,500 ರೂ. ಹಾಗೂ 4000 ರೂ. ಪ್ರೋತ್ಸಾಹ ಧನ ನೀಡಿ ಅಭಿನಂದಿಸಲಾಯಿತು.

ಮೇಯರ್‌ ಗಂಗಾಬಿಕೆ, ವಿಧಾನ ಪರಿಷತ್‌ ಸದಸ್ಯರಾದ ಎಂ.ಎ.ಗೋಪಾಲಸ್ವಾಮಿ, ಎಂ.ಸಿ.ವೇಣುಗೋಪಾಲ್‌, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಗಂಗಾರಾಮ್‌ ಬಡೇರಿಯಾ, ಪರಿಶಿಷ್ಟ ಜಾತಿ ಮತ್ತು  ಗಡದ ಉಪಯೋಜನೆ ಸಲಹೆಗಾರ ಡಾ.ಇ.ವೆಂಕಟಯ್ಯ, ಪಾಲಿಕೆ ಸದಸ್ಯರಾದ ಕೆ.ನರಸಿಂಹ ನಾಯಕ, ನೇತ್ರ ಪಲ್ಲವಿ ಇತರರು ಉಪಸ್ಥಿತರಿದ್ದರು. 

ಮುಖ್ಯಮಂತ್ರಿ ಗೈರು ಹಾಜರಿಗೆ ಗರಂ
ಪೂರ್ವಯೋಜಿತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಕಾರ್ಯಕ್ರಮಕ್ಕೆ ಗೈರಾಗಿದ್ದರು. ದಿಢೀರ್‌ ಅನಾರೋಗ್ಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಉಪಚುನಾವಣೆ ಪ್ರಚಾರ ದಲ್ಲಿರುವ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಿರುವುದಕ್ಕೆ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು. 

ಗಣ್ಯರ ಗೈರು ಹಾಜರಿಯಿಂದ ಕೋಪಗೊಂಡ ಮುಖಂಡರು ವಿಧಾನಸೌಧದ ಮೊಗಸಾಲೆಯಲ್ಲಿ ಧರಣಿ ನಡೆಸಿ ಧಿಕ್ಕಾರ ಕೂಗಿದರು. ಸಚಿವ ಪ್ರಿಯಾಂಕ್‌ ಖರ್ಗೆ ವೇದಿಕೆ ಬಳಿ ಬಂದಾಗಲೂ ಈ ಬಗ್ಗೆ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು. ಸಂಜೆವರೆಗೂ ಕಾಯಲು ಸಿದ್ಧವಿದ್ದು,
ಮುಖ್ಯಮಂತ್ರಿಗಳು ಬರುವವರೆಗೆ ಕಾರ್ಯಕ್ರಮ ಆರಂಭಿಸುವುದು ಬೇಡ ಎಂದು ಪಟ್ಟು ಹಿಡಿದರು. 

ಆಕ್ಷೇಪಣೆಯಿಂದಾಗಿ ವೇದಿಕೆ ಹಿನ್ನೆಲೆಯಲ್ಲಿ ಪ್ರದರ್ಶಿಸಲಾಗುತ್ತಿದ್ದ ಎಲೆಕ್ಟ್ರಾನಿಕ್‌ ಪರದೆಯಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳ ಭಾವಚಿತ್ರವಿದ್ದ ದೃಶ್ಯ ತೆರೆದ ಬಳಿಕ ಮುಖಂಡರು ಧರಣಿ ಹಿಂಪಡೆದರು. ಕಾರ್ಯಕ್ರಮದ ಬಳಿಕವೂ ಪ್ರವೇಶದ್ವಾರದ ಬಳಿ ಮತ್ತೂಂದು ಗುಂಪು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿತು. ವಾಲ್ಮೀಕಿ ಜನಾಂಗವನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಲಾಗುತ್ತಿದೆ. ಇದಕ್ಕೆ ಮುಂದೆ ಸೂಕ್ತ ಉತ್ತರ ನೀಡುತ್ತೇವೆ ಎಂದು ಮುಖಂಡರು ಎಚ್ಚರಿಕೆ ನೀಡಿದರು. ಇದೇ ವೇಳೆ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೂ ಘೇರಾವ್‌ ಹಾಕಿ ಆಕ್ಷೇಪ ವ್ಯಕ್ತಪಡಿಸಿದರು. ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಕೂಡ ತಮ್ಮ ಭಾಷಣದಲ್ಲಿ ಮುಖ್ಯಮಂತ್ರಿಗಳ ಗೈರು ಹಾಜರಿ ಬಗ್ಗೆ ಪ್ರಸ್ತಾಪಿಸಿ, ಅವರು ಬೇಗ ಗುಣಮುಖರಾಗಲಿ ಎಂದು ಆಶಿಸಿದರು.

ಪ್ರಶಸ್ತಿಗೆ ದೇವೇಗೌಡರು ಅರ್ಹರು: ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಆಯ್ಕೆ ಮಾಡಿರುವುದಕ್ಕೆ ಕೆಲವರು ಅಪಸ್ವರ ತೆಗೆದಿದ್ದಾರೆ. ಆಯ್ಕೆ ಸಮಿತಿಯ ಕಾರ್ಯ ನಿರ್ವಹಣೆಯಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ನಿವೃತ್ತ ನ್ಯಾ.ಎಚ್‌.ಎಲ್‌.ನಾಗಮೋಹನ್‌ದಾಸ್‌ ಅವರ ಸಮಿತಿಯು ಪ್ರಶಸ್ತಿಗೆ ದೇವೇಗೌಡರ ಹೆಸರು ಶಿಫಾರಸು ಮಾಡಿತ್ತು. 1984 -85ರಲ್ಲಿ ನಾಯಕ, ವಾಲ್ಮೀಕಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಂಡು ನಂತರ ಕೇಂದ್ರಕ್ಕೆ ಶಿಫಾರಸು ಸಲ್ಲಿಸುವಲ್ಲಿ ದೇವೇಗೌಡರು ಮಹತ್ವದ ಪಾತ್ರ ವಹಿಸಿದ್ದರು. 1981ರಲ್ಲಿ ಸಂಸದರಾಗಿದ್ದಾಗ ಸಾಕಷ್ಟು ಹೋರಾಟ ನಡೆಸಿ ವಾಲ್ಮೀಕಿ, ನಾಯಕ ಎಂಬ ಪರ್ಯಾಯ ಪದ ಬಳಕೆ ಸಂಬಂಧ ಸುಗ್ರೀವಾಜ್ಞೆ ಹೊರಡಿಸುವಲ್ಲಿಯೂ ಅವರ ಪಾತ್ರವಿತ್ತು. ಸಮುದಾಯದ ಗುರುಪೀಠ ಸ್ಥಾಪನೆಗೂ ಅನುಕೂಲ ಮಾಡಿಕೊಟ್ಟಿದ್ದು, ಅವರ ಆಯ್ಕೆ ಸೂಕ್ತವಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸಮರ್ಥಿಸಿಕೊಂಡರು.

ಟಾಪ್ ನ್ಯೂಸ್

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.