ವನಮಾಲ ಸಂಪನ್ನ ಕುಮಾರ್‌ ಲೇಖಕಿಯರ ಸಂಘದ ಅಧ್ಯಕ್ಷೆ


Team Udayavani, Mar 5, 2018, 6:35 AM IST

Sampanna-Kumar.jpg

ಬೆಂಗಳೂರು: ಪ್ರತಿಷ್ಠಿತ ಕರ್ನಾಟಕ ಲೇಖಕಿಯರ ಸಂಘದ ನೂತನ ಅಧ್ಯಕ್ಷರಾಗಿ ಸಂಘದ ಹಾಲಿ ಉಪಾಧ್ಯಕ್ಷೆ ವನಮಾಲ ಸಂಪನ್ನ ಕುಮಾರ್‌ ಆಯ್ಕೆಯಾಗಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್‌ನ ಕೇಂದ್ರ ಕಚೇರಿಯಲ್ಲಿ ಭಾನುವಾರ ನಡೆದ ಚುನಾವಣೆಯಲ್ಲಿ ವನಮಾಲ ಸಂಪನ್ನ ಕುಮಾರ್‌ 20 ಮತಗಳ ಅಂತರದಿಂದ ಆಯ್ಕೆಗೊಂಡರು. ಅಧ್ಯಕ್ಷ ಸ್ಥಾನಕ್ಕೆ ಪತ್ರಕರ್ತೆ ಡಾ.ಆರ್‌.ಪೂರ್ಣಿಮಾ ಹಾಗೂ ವನಮಾಲಾ ಸಂಪನ್ನಕುಮಾರ್‌ ನಡುವೆ ತೀವ್ರ ಸ್ಪರ್ಧೆ ಇತ್ತು. ಭಾನುವಾರ ಬೆಳಗ್ಗೆ 10.35 ರಿಂದ 3.35 ರವರೆಗೆ ಚುನಾವಣೆ ನಡೆಯಿತು.

ವನಮಾಲಾ ಅವರಿಗೆ 198 ಮತಗಳು ಬಂದರೆ, ಡಾ.ಆರ್‌.ಪೂರ್ಣಿಮಾ 178 ಮತ ಪಡೆದರು. ಚುನಾವಣಾಧಿಕಾರಿಯಾಗಿದ್ದ ಲೇಖಕಿ ಡಾ.ಅಂಜಲಿ ರಾಮಣ್ಣ ನೂತನ ಅಧ್ಯಕ್ಷರ ಆಯ್ಕೆ ಘೋಷಿಸಿದರು. ಒಟ್ಟು 379 ಮತಗಳು ಚಲಾವಣೆಯಾಗಿದ್ದು, ಆ ಪೈಕಿ ಅಂಚೆಯ ಮೂಲಕ 188 ಮತ್ತು ಚುನಾವಣಾ ಕೇಂದ್ರಕ್ಕೆ ಬಂದು 191 ಮಂದಿ ಮತದಾರರು ಮತ ಚಲಾಯಿಸಿದರು. ಆ ಪೈಕಿ ಮೂರು ಮತಗಳು ತಿರಸ್ಕೃತಗೊಂಡವು. ಬೆಂಗಳೂರಿನಲ್ಲಿ ಚಲಾವಣೆಗೊಂಡಿದ್ದ ಮತಗಳಲ್ಲಿ ಒಂದು ಮತ್ತು ಅಂಚೆ ಮೂಲಕ ಕಳಿಸಲಾದ ಮತ ಪತ್ರಗಳಲ್ಲಿ 2 ಮತಗಳು ಅಮಾನ್ಯಗೊಂಡಿದ್ದವು. ಕರ್ನಾಟಕ ಲೇಖಕಿಯರ ಸಂಘದ ಒಟ್ಟು ಸದಸ್ಯರ ಸಂಖ್ಯೆ 913. ಇದರಲ್ಲಿ ಬೆಂಗಳೂರಿನಲ್ಲಿರುವ ಸದಸ್ಯರ ಸಂಖ್ಯೆ 529.

ಬೇರೆ ಬೇರೆ ಜಿಲ್ಲೆಗಳಲ್ಲಿ 384 ಸದಸ್ಯರಿದ್ದಾರೆ. ಲೇಖಕಿಯರ ಸಂಘಕ್ಕೆ ಸದಸ್ಯರಾಗಿ ಒಂದು ವರ್ಷ ಪೂರೈಸಿದವರಿಗೆ ಮತದಾನ ಮಾಡಲು ಹಕ್ಕು ನೀಡಲಾಗಿತ್ತು ಎಂದು ಚುನಾಣಾಧಿಕಾರಿ ಅಂಜಲಿ ರಾಮಣ್ಣ ತಿಳಿಸಿದ್ದಾರೆ.

ಅಭಿನಂದನೆ: ಆಯ್ಕೆ ಘೋಷಣೆಯಾಗುತ್ತಿದ್ದಂತೆ ನೂತನ ಅಧ್ಯಕ್ಷೆ ವನಮಾಲಾ ಸಂಪನ್ನಕುಮಾರ್‌ ಅವರನ್ನು ನಿರ್ಗಮಿತ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಸೇರಿ ಹಲವಾರು ಸದಸ್ಯರು ಅಭಿನಂದಿಸಿದರು. ಈ ಸಂದರ್ಭದಲ್ಲಿ ವನಮಾಲಾ ಅವರು, ಲೇಖಕಿಯರ ಸಂಘದ ಬೆಳವಣಿಗೆಗೆ ಎಲ್ಲ ರೀತಿಯ ಸಹಕಾರ ನೀಡುವಂತೆ ಕೋರಿದರು.

ಟಾಪ್ ನ್ಯೂಸ್

7-

ಹುಂಡಿ ಒಡೆದು ನಗದು ದೋಚಿ ಪರಾರಿಯಾದ ದುಷ್ಕರ್ಮಿಗಳು; ಎರಡು ಪ್ರತ್ಯೇಕ ಘಟನೆ ದಾಖಲು

1-qwwqewq

Udupi; ಬಜೆ ಡ್ಯಾಂ ಬಳಿ ಶಿಲಾಯುಗದ ನಿಲಿಸುಗಲ್ಲು ಪತ್ತೆ

US Result: ಡೊನಾಲ್ಡ್‌ ಟ್ರಂಪ್  ಗೆ‌ ಮತ್ತೊಮ್ಮೆ‌ ಅಧ್ಯಕ್ಷ ಪಟ್ಟ; ಪ್ರಧಾನಿ ಮೋದಿ ಅಭಿನಂದನೆ

US Result: ಡೊನಾಲ್ಡ್‌ Trumpಗೆ‌ ಮತ್ತೊಮ್ಮೆ‌ ಅಧ್ಯಕ್ಷ ಪಟ್ಟ; ಪ್ರಧಾನಿ ಮೋದಿ ಅಭಿನಂದನೆ

6-bantwala

ಬಸ್- ಸ್ಕೂಟರ್ ಢಿಕ್ಕಿ ಪ್ರಕರಣ: ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಸವಾರ ಕೂಡ ಮೃತ್ಯು

5-muthalik

Hubli: ಮುಖ್ಯಮಂತ್ರಿ ನೀತಿ ಗೆಟ್ಟು ಲೋಕಾಯುಕ್ತ ತನಿಖೆಗೆ ಹೋಗುತ್ತಿರುವುದು ನಾಚಿಗೇಡಿನ ಸಂಗತಿ

Hubballi: ಮುಖ್ಯಮಂತ್ರಿ ಸಿದ್ದರಾಮಯ್ಯ ಪೇ ಡಬಲ್ ಸಿಎಂ ಆಗಿದ್ದಾರೆ… :ಬೊಮ್ಮಾಯಿ

Hubballi: ಮುಖ್ಯಮಂತ್ರಿ ಸಿದ್ದರಾಮಯ್ಯ ಪೇ ಡಬಲ್ ಸಿಎಂ ಆಗಿದ್ದಾರೆ… :ಬೊಮ್ಮಾಯಿ

hk-patil

MUDA; ಕಾಂಗ್ರೆಸ್ ಗೊಂದು, ಬಿಜೆಪಿಗೊಂದು‌ ಕಾನೂನು ಇದೆಯೇ?: ಎಚ್.ಕೆ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-muthalik

Hubli: ಮುಖ್ಯಮಂತ್ರಿ ನೀತಿ ಗೆಟ್ಟು ಲೋಕಾಯುಕ್ತ ತನಿಖೆಗೆ ಹೋಗುತ್ತಿರುವುದು ನಾಚಿಗೇಡಿನ ಸಂಗತಿ

Hubballi: ಮುಖ್ಯಮಂತ್ರಿ ಸಿದ್ದರಾಮಯ್ಯ ಪೇ ಡಬಲ್ ಸಿಎಂ ಆಗಿದ್ದಾರೆ… :ಬೊಮ್ಮಾಯಿ

Hubballi: ಮುಖ್ಯಮಂತ್ರಿ ಸಿದ್ದರಾಮಯ್ಯ ಪೇ ಡಬಲ್ ಸಿಎಂ ಆಗಿದ್ದಾರೆ… :ಬೊಮ್ಮಾಯಿ

hk-patil

MUDA; ಕಾಂಗ್ರೆಸ್ ಗೊಂದು, ಬಿಜೆಪಿಗೊಂದು‌ ಕಾನೂನು ಇದೆಯೇ?: ಎಚ್.ಕೆ.ಪಾಟೀಲ್

siddanna

MUDA; ಲೋಕಾಯುಕ್ತ ಪೊಲೀಸರು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ: ಸಿಎಂ ಕಿಡಿ

eshwarappa

Siddaramaiah ರಾಜೀನಾಮೆ‌ ಕೊಟ್ಟು ವಜ್ರವೆಂದು ಸಾಬೀತುಪಡಿಸಲಿ: ಈಶ್ವರಪ್ಪ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

7-

ಹುಂಡಿ ಒಡೆದು ನಗದು ದೋಚಿ ಪರಾರಿಯಾದ ದುಷ್ಕರ್ಮಿಗಳು; ಎರಡು ಪ್ರತ್ಯೇಕ ಘಟನೆ ದಾಖಲು

6

KPTCL ಕಾಮಗಾರಿ ಅವಾಂತರ; ಸ್ಟೇಟ್‌ಬ್ಯಾಂಕ್‌ ಬಸ್‌ ನಿಲ್ದಾಣ ಬಳಿ ಅಪಾಯ

1-qwwqewq

Udupi; ಬಜೆ ಡ್ಯಾಂ ಬಳಿ ಶಿಲಾಯುಗದ ನಿಲಿಸುಗಲ್ಲು ಪತ್ತೆ

US Result: ಡೊನಾಲ್ಡ್‌ ಟ್ರಂಪ್  ಗೆ‌ ಮತ್ತೊಮ್ಮೆ‌ ಅಧ್ಯಕ್ಷ ಪಟ್ಟ; ಪ್ರಧಾನಿ ಮೋದಿ ಅಭಿನಂದನೆ

US Result: ಡೊನಾಲ್ಡ್‌ Trumpಗೆ‌ ಮತ್ತೊಮ್ಮೆ‌ ಅಧ್ಯಕ್ಷ ಪಟ್ಟ; ಪ್ರಧಾನಿ ಮೋದಿ ಅಭಿನಂದನೆ

6-bantwala

ಬಸ್- ಸ್ಕೂಟರ್ ಢಿಕ್ಕಿ ಪ್ರಕರಣ: ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಸವಾರ ಕೂಡ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.