ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ
Team Udayavani, May 31, 2022, 6:04 PM IST
ಬೆಂಗಳೂರು : ಭಾರತೀಯ ಆಡಳಿತ ಸೇವೆಯ ಹಿರಿಯ ಅಧಿಕಾರಿ ವಂದಿತಾ ಶರ್ಮಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಇಲ್ಲಿ ಇಂದು ಸಂಜೆ ಅಧಿಕಾರ ಸ್ವೀಕರಿಸಿದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ ರವಿಕುಮಾರ್ ಅವರ ವಯೋ ನಿವೃತ್ತಿಯಿಂದ ತೆರವಾದ ಹುದ್ದೆಗೆ ಕರ್ನಾಟಕ ವೃಂದದ ಭಾರತೀಯ ಆಡಳಿತ ಸೇವೆಯ 1986 ನೇ ಸಾಲಿನ ತಂಡದ ವಂದಿತಾ ಶರ್ಮಾ ಉತ್ತರಾಧಿಕಾರಿಯಾಗಿದ್ದಾರೆ.
ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆಯಾಗಿದ್ದಾರೆ. ಅಂತೆಯೇ, ರಾಜ್ಯ ಸರ್ಕಾರದ 39 ನೇ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ.
ಇದನ್ನೂ ಓದಿ :ನಾಲತವಾಡ: ಮೂಲಸೌಕರ್ಯಕ್ಕೆ ಆಗ್ರಹಿಸಿ ಪಟ್ಟಣ ಪಂಚಾಯ್ತಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಮಹಿಳೆಯರ ದರ್ಬಾರ್ !
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಈ ಹಿಂದೆ 2000 ನೇ ಇಸವಿಯಲ್ಲಿ ತೆರೇಸಾ ಭಟ್ಟಾಚಾರ್ಯ, 2006 ನೇ ಇಸವಿಯಲ್ಲಿ ಮಾಲತಿ ದಾಸ್ ಹಾಗೂ 2017 ನೇ ಇಸವಿಯಲ್ಲಿ ಕೆ. ರತ್ನ ಪ್ರಭ ಅವರೂ ಅಲಂಕರಿಸಿದ್ದರು.
ಕೆ ರತ್ನ ಪ್ರಭ ಅವರ ಅಧಿಕಾರಾವಧಿಯಲ್ಲಿ ರಾಜ್ಯ ಪೋಲಿಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಹುದ್ದೆಯನ್ನು ನೀಲಮಣಿ ಎನ್ ರಾಜು ಅಲಂಕರಿಸಿದಾಗ ಎರಡು ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರೇ ಇದ್ದಾರೆ ಎಂಬುದು ಗಮನಾರ್ಹ ಅಂಶವಾಗಿತ್ತು.
ಇದೀಗ ವಂದಿತಾ ಶರ್ಮಾ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸುವುದರೊಂದಿಗೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಇರುವ ಮೂರೂ ಪ್ರಮುಖ ಹುದ್ದೆಗಳನ್ನು ಮಹಿಳೆಯರೇ ಅಲಂಕರಿಸಿದಂತಾಗುತ್ತದೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಹಾಗೂ ರಾಜ್ಯ ವಿಧಾನ ಪರಿಷತ್ ಕಾರ್ಯದರ್ಶಿ ಕೆ ಆರ್ ಮಹಾಲಕ್ಷ್ಮಿ ಶಕ್ತಿ ಕೇಂದ್ರದ ಶಕ್ತಿಯಾಗಿ ಹೊಸ ದಾಖಲೆ ಸ್ಥಾಪಿಸಲಿದ್ದಾರೆ.
ವಂದಿತಾ ಶರ್ಮಾ ಅವರ ನೇಮಕಾತಿಯಲ್ಲಿ ರಾಜ್ಯ ಸರ್ಕಾರವು ಎಂದಿನಂತೆ ಸೇವಾ ಹಿರಿತನವನ್ನು ಪುರಸ್ಕರಿಸಿದೆ. ವಂದಿತಾ ಶರ್ಮಾ ಅವರ ಅಧಿಕಾರಾವಧಿ ನವೆಂಬರ್ 30, 2022 ರವರೆಗೆ ಇದೆ.
ವಂದಿತಾ ಶರ್ಮಾ ಅವರ ಪತಿಯೂ ಕೂಡಾ ಭಾರತೀಯ ಆಡಳಿತ ಸೇವೆಯ ಅಧಿಕಾರಿಯಾಗಿ, ಪ್ರಸ್ತುತ ಹಣಕಾಸು ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ.
ಅಲ್ಲದೆ, ಇದೇ ದಿನದಿಂದು ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರ ಹುದ್ದೆಯ ಅಧಿಕ ಪ್ರಭಾರವನ್ನೂ ವಹಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.