Namma Metro: ಇಂದಿನಿಂದ ಹಸಿರು ಮೆಟ್ರೋ ಸೇವೆಯಲ್ಲಿ ವ್ಯತ್ಯಯ
Team Udayavani, Aug 20, 2024, 10:12 AM IST
ಬೆಂಗಳೂರು: “ನಮ್ಮ ಮೆಟ್ರೋ’ ವಿಸ್ತರಿತ ನಾಗಸಂದ್ರ- ಮಾದಾವರ ನಡುವಿನ ರೈಲ್ವೆ ಸಿಗ್ನಲಿಂಗ್ ಪರೀಕ್ಷೆ ಕಾರ್ಯ ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ಮಂಗಳವಾರದಿಂದ ತಿಂಗಳಾಂತ್ಯದವರೆಗೆ ಮೆಟ್ರೋ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಇದರ ಬಿಸಿ ಹಸಿರು ಮಾರ್ಗದ ಸಾವಿರಾರು ಪ್ರಯಾಣಿಕರಿಗೆ ತಟ್ಟಲಿದೆ.
ಸೆಪ್ಟೆಂಬರ್ ಅಂತ್ಯದಲ್ಲಿ “ನಮ್ಮ ಮೆಟ್ರೋ’ ಎರಡನೇ ಹಂತದ ಕೊನೆಯ ವಿಸ್ತರಿತ ಮಾರ್ಗ ನಾಗಸಂದ್ರ- ಮಾದಾವರ ಮೆಟ್ರೋ ಸೇವೆ ಮುಕ್ತಗೊಳಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಉದ್ದೇಶಿಸಿದೆ. ಇದರ ಭಾಗವಾಗಿ ಈಗ ಸಿಗ್ನಲಿಂಗ್ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ (ಆ. 20)ದಿಂದ ಆಗಸ್ಟ್ 30ರವರೆಗೆ ಆಯ್ದ ಮೂರು ದಿನಗಳು ಹಾಗೂ ಸೆಪ್ಟೆಂಬರ್‌ನ ಮೊದಲ ವಾರದಲ್ಲಿ ಎರಡು ದಿನಗಳು ಪೀಣ್ಯ ಇಂಡಸ್ಟ್ರಿ-ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ಸಂಚಾರ ಸೇವೆ ಸ್ಥಗಿತಗೊಳ್ಳಲಿದೆ.
ಅಂದರೆ, ಆಸ್ಟ್ 20, 23, 30ರಂದು ಹಾಗೂ ಸೆಪ್ಟೆಂಬರ್ 6 ಮತ್ತು 11ರಂದು ಇಡೀ ದಿನ ರೈಲು ಸೇವೆ ಇರುವುದಿಲ್ಲ. ಅದರಂತೆ ಜಾಲಹಳ್ಳಿ, ದಾಸರಹಳ್ಳಿ, ನಾಗಸಂದ್ರ ನಿಲ್ದಾಣಗಳಿಗೆ ರೈಲು ಸಂಚರಿಸುವುದಿಲ್ಲ. ಇನ್ನು ಆಗಸ್ಟ್ 24ರಂದು ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ಪೀಣ್ಯ ಇಂಡಸ್ಟ್ರಿ ಕಡೆಗೆ ಕೊನೆಯ ರೈಲು ಸೇವೆ ರಾತ್ರಿ 11.5ರ ಬದಲಿಗೆ 10 ಗಂಟೆಗೆ ತೆರಳಲಿದೆ. ಆಗಸ್ಟ್ 25ರಂದು ಮೊದಲ ರೈಲು ಸೇವೆ ಬೆಳಗ್ಗೆ 7 ಗಂಟೆಗೆ ಪ್ರಾರಂಭವಾಗಲಿದೆ. ಆಗಸ್ಟ್ 24ರಂದು ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆವರೆಗೆ ಕೊನೆಯ ರೈಲು ಸೇವೆ 11.12ಕ್ಕೆ ಆರಂಭವಾಗಲಿದೆ. 25ರಂದು ಮೊದಲ ರೈಲು ಸೇವೆ ಬೆಳಗ್ಗೆ 5ಕ್ಕೆ ಪ್ರಾರಂಭವಾಗಲಿದೆ. ಉಳಿದಂತೆ ನೇರಳೆ ಮಾರ್ಗದ ಮೆಟ್ರೋ ಸೇವೆ ಹಾಗೂ ಹಸಿರು ಮಾರ್ಗದಲ್ಲಿ ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಮಂಡಳಿವರೆಗೂ ರೈಲುಗಳ ಸಂಚಾರ ಎಂದಿನಂತೆ ಇರುತ್ತದೆ ಎಂದು ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.