ಲೋಕಸಭೆಗೆ ವಾಟಾಳ್ ನಾಗರಾಜ್ ಸ್ಪರ್ಧೆ
Team Udayavani, Mar 15, 2019, 6:14 AM IST
ಬೆಂಗಳೂರು: ಕನ್ನಡ ಚಳವಳಿ ವಾಟಾಳ್ ಪಕ್ಷದಿಂದ ಲೋಕಸಭಾ ಚುನಾವಣೆಯಲ್ಲಿ ತಾವು ಸ್ಪರ್ಧೆ ಮಾಡುವುದಾಗಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆಯಲ್ಲಿ ರಾಜ್ಯವನ್ನು ಪ್ರತಿನಿಧಿಸುವಂತಹ ಅಭ್ಯರ್ಥಿಗಳು ಬೇಕು. ಕರ್ನಾಟಕದ ಸಮಸ್ಯೆಗಳ ಬಗ್ಗೆ ತೀವ್ರವಾದಂತಹ ಚರ್ಚೆ, ಪ್ರತಿಭಟನೆ ನಡೆಸಿ ದೇಶದ ಗಮನ ಸೆಳೆಯುವ ನಾಯಕರು ಅಗತ್ಯವಿದ್ದಾರೆ.
ಆದರೆ ಈಗ ರಾಜ್ಯದ ಯಾವುದೇ ಪಕ್ಷದಲ್ಲೂ ಅಂತಹ ಪ್ರಬುದ್ಧ ನಾಯಕರಿಲ್ಲ. ಈ ಬಗ್ಗೆ ಮತದಾರರು ಎಚ್ಚರ ವಹಿಸಬೇಕು. ಪ್ರಾಮಾಣಿಕರನ್ನು ಆಯ್ಕೆ ಮಾಡಬೇಕು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾನು ಕೂಡ ಸ್ಪರ್ಧೆ ಮಾಡುವೆ. ಯಾವ ಕ್ಷೇತ್ರದಿಂದ ಹಾಗೂ ಚುನಾವಣಾ ಪ್ರಣಾಳಿಕೆಯ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದರು.
ಬೇರೆ ರಾಜ್ಯದ ಸಂಸದರು ತಮ್ಮ ರಾಜ್ಯದ ಸಮಸ್ಯೆಗಳು ಎದುರಾದಾಗ ತೀವ್ರವಾಗಿ ಹೋರಾಟ ಮಾಡಿದ್ದಾರೆ. ಧರಣಿ, ಸಭಾ ತ್ಯಾಗ ಮಾಡುವ ಮೂಲಕ ತಮ್ಮ ರಾಜ್ಯದ ಬೇಡಿಕೆಗಳ ಬಗ್ಗೆ ದೇಶದ ಗಮನ ಸೆಳೆದಿದ್ದಾರೆ. ಕರ್ನಾಟಕದಿಂದ ಆಯ್ಕೆಯಾದ ಲೋಕಸಭಾ ಸದಸ್ಯರು ಅಷ್ಟು ಚೈತನ್ಯ ಪೂರ್ಣವಾಗಿ ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲಿಲ್ಲ.
ನದಿ, ರೈಲ್ವೆ, ಗಡಿನಾಡು, ಹಣಕಾಸು ಹಾಗೂ ಉದ್ಯೋಗ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಸಂಸತ್‌ನಲ್ಲಿ ಒತ್ತಾಯ ಮಾಡಲಿಲ್ಲ. ಈಗ ಇಂತಹ ನಾಯಕರನ್ನೇ ಲೋಕಸಭೆಗೆ ಕಳುಹಿಸಲು ರಾಷ್ಟ್ರೀಯ ಪಕ್ಷಗಳು ಚಿಂತಿಸಿವೆ ಎಂದು ಬೇಸರ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.