ವಾಟಾಳ್ರನ್ನು ಪರಿಷತ್ತಿಗೆ ನಾಮನಿರ್ದೇಶನ ಮಾಡಿ
Team Udayavani, Apr 19, 2017, 11:59 AM IST
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ರಾಜ್ಯಸರ್ಕಾರ ವಿಧಾನಪರಿಷತ್ತಿಗೆ ನಾಮನಿರ್ದೇಶನಗೊಳಿಸಬೇಕು ಎಂದು ಮಾಜಿ ಕೇಂದ್ರ ಸಚಿವ ಎಂ.ವಿ ರಾಜಶೇಖರನ್ ಒತ್ತಾಯಿಸಿದ್ದಾರೆ.
ನಗರದ ವುಡ್ಲ್ಯಾಂಡ್ ಹೋಟೆಲ್ನಲ್ಲಿ ಎಸ್ಸೆನ್ ಕೆಂಗಲ್ ವಿಚಾರ ವೇದಿಕೆ ಆಯೋಜಿಸಿದ್ದ “ಸದನದಲ್ಲಿ ವಾಟಾಳ್ ನಾಗರಾಜ್ 50 ವರ್ಷಗಳ ಅನುಭವ, ಹೋರಾಟಗಳ ಮೆಲುಕು ”ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಾಜಿ ಸಚಿವ ರಾಜಶೇಖರನ್, “ಹೋರಾಟಗಾರ ವಾಟಾಳ್ ನಾಗರಾಜ್, ಕನ್ನಡ ಮತ್ತು ಕರ್ನಾಟಕದ ಅಭಿವೃದ್ಧಿಗೆ ಗಣನೀಯ ಸೇವೆ ಸಲ್ಲಿಸಿದ್ದಾರೆ.
ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋವಕಾಶಗಳು ದೊರೆಯುತ್ತಿರುವುದರ ಹಿಂದೆ ನಾಗರಾಜ್ ಹೋರಾಟವಿದೆ. ಕನ್ನಡಕ್ಕಾಗಿ ಅವಿರತ ಹೋರಾಟ ನಡೆಸುತ್ತಿರುವ ಅವರ ಸೇವೆ ಪರಿಗಣಿಸಿ, ರಾಜ್ಯ ಸರ್ಕಾರ ವಿಧಾನಪರಿಷತ್ತಿಗೆ ನಾಮನಿರ್ದೇಶನಗೊಳಿಸಲಿ,’ ಎಂದು ಆಗ್ರಹಿಸಿದರು.
ನಿವೃತ್ತ ನ್ಯಾಯಮೂರ್ತಿ ಎಸ್.ಆರ್. ನಾಯಕ್ ಮಾತನಾಡಿ, “ನೆಲ-ಜಲ, ಸಂಸ್ಕೃತಿಗೆ ಧಕ್ಕೆಯುಂಟಾದಾಗ ವಾಟಾಳ್ ನಾಗರಾಜ್ ಸಿಡಿದೆದ್ದು ಹೋರಾಟ ಮಾಡುತ್ತಾರೆ.ಕನ್ನಡಕ್ಕಾಗಿ ಅವರು ಸಲ್ಲಿಸಿರುವ ಹೋರಾಟ, ತ್ಯಾಗ ಅವಿಸ್ಮರಣೀಯ,’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ನಿವೃತ್ತ ನ್ಯಾಯಮೂರ್ತಿ ಎಂ. ರಾಮಕೃಷ್ಣ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.