ನಿತ್ರಾಣಗೊಂಡ ಗ್ರಾಮ ವಿಕಾಸ ಯೋಜನೆ


Team Udayavani, Mar 15, 2018, 6:00 AM IST

village-evolution-project-s.jpg

ಬೆಂಗಳೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ “ಸಂಸದರ ಆದರ್ಶ ಗ್ರಾಮ’ ಯೋಜನೆಗೆ ಪರ್ಯಾಯ ಎಂಬಂತೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ “ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆ’ ಅತ್ತ ಆದರ್ಶವೂ ಆಗಿಲ್ಲ, ಇತ್ತ ವಿಕಾಸವೂ ಗೊಂಡಿಲ್ಲ.

ರಾಜ್ಯದ ಗ್ರಾಮೀಣ ವಿಧಾನಸಭಾ ಕ್ಷೇತ್ರಗಳ ಒಂದು ಸಾವಿರ ಗ್ರಾಮಗಳ ಮೂಲಸೌಕರ್ಯ ಅಭಿವೃದ್ಧಿಗೆ ಜಾರಿಗೆ ತಂದಿರುವ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಕಾರ್ಯಗತಗೊಂಡಿಲ್ಲ.
ಪ್ರತಿ ಗ್ರಾಮಕ್ಕೆ 1ಕೋಟಿ ರೂ.ಗಳಂತೆ ಒಟ್ಟು ಒಂದು ಸಾವಿರ ಕೋಟಿ ರೂ. ಅನುದಾನದಲ್ಲಿ ಎರಡು ವರ್ಷಗಳ ಅವಧಿಯಲ್ಲಿ ಸಾವಿರ ಗ್ರಾಮಗಳ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು 2017-18ರ ಬಜೆಟ್‌ನಲ್ಲಿ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆ ಘೋಷಿಸಲಾಗಿತ್ತು. ಮೊದಲ ವರ್ಷಕ್ಕೆ 875 ಗ್ರಾಮಗಳಿಗೆ ಅನುಮೋದನೆ ಕೊಟ್ಟು, 300 ಕೋಟಿ ರೂ. ಅನುದಾನ ಮೀಸಲಿಡಲಾಗಿತ್ತು.  ಅದರಲ್ಲಿ 189 ಕೋಟಿ ರೂ. ಹಣ ಬಿಡುಗಡೆಯೂ ಆಗಿತ್ತು. ಆದರೆ, ಖರ್ಚು ಆಗಿದ್ದು ಬರೀ 81 ಕೋಟಿ ರೂ. ಮಾತ್ರ.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 189 ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕರು ತಮ್ಮ ಕ್ಷೇತ್ರದ ಗರಿಷ್ಠ 4 ಗ್ರಾಮಗಳು, ಒಂದು ಪೂರ್ಣ ತಾಲೂಕು ಮತ್ತು ಒಂದು ಭಾಗಶಃ ತಾಲೂಕು ಹೊಂದಿರುವ 33 ಕ್ಷೇತ್ರದ ಶಾಸಕರು ಹೆಚ್ಚುವರಿಯಾಗಿ ತಲಾ 1ಗ್ರಾಮ, ಎರಡು ಪೂರ್ಣ ತಾಲೂಕು ಮತ್ತು ಒಂದು ಭಾಗಶಃ ತಾಲೂಕು ಹೊಂದಿರುವ 6 ಕ್ಷೇತ್ರಗಳ ಶಾಸಕರಿಗೆ 2 ಹಾಗೂ ಎರಡು ಪೂರ್ಣ ಹಾಗೂ 1 ಭಾಗಶಃ ತಾಲೂಕು ಹೊಂದಿರುವ ಶಾಸಕರು ತಲಾ ಎರಡು ಗ್ರಾಮಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಅದೇ ರೀತಿ 74 ವಿಧಾನಪರಿಷತ್‌ ಸದಸ್ಯರಿಗೆ ತಲಾ ಒಂದು ಗ್ರಾಮ ಹಂಚಲಾಗಿದೆ.

ಶಾಸಕರಿಂದ ವಿಳಂಬ:
ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ಎರಡು ವರ್ಷಗಳಲ್ಲಿ ಸಾವಿರ ಗ್ರಾಮಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಯೋಜನೆಯ ಕ್ರಿಯಾ ಯೋಜನೆ, ರೂಪುರೇಷೆ ಎಲ್ಲವೂ ಸ್ಪಷ್ಟವಾಗಿದೆ. ಒಂದು ಗ್ರಾಮಕ್ಕೆ 1ಕೋಟಿಯಂತೆ 4 ಗ್ರಾಮಗಳಿಗೆ  ಒಬ್ಬ ಶಾಸಕರಿಗೆ 4 ಕೋಟಿ ರೂ. ಅನುದಾನ ಸಿಗಲಿದೆ. ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು ಪ್ರಸ್ತಾವನೆ ಕೊಟ್ಟರೆ, ಅನುಮೋದನೆ ನೀಡಿ ಯೋಜನೆ ಅನುಷ್ಠಾನಗೊಳಿಸಲು ಸಾಧ್ಯ. ಆದರೆ, ಅನೇಕ ಬಾರಿ ಮನವಿ, ಮನವರಿಕೆ ಮಾಡಿಕೊಟ್ಟರೂ ಗ್ರಾಮಗಳ ಪಟ್ಟಿ ಕೊಡಲು ಶಾಸಕರು ವಿಳಂಬ ಮಾಡಿದ್ದಾರೆ. ಹೀಗಾಗಿ, ಯೋಜನೆ ಅನುಷ್ಠಾನಕ್ಕೆ ವಿಳಂಬವಾಗಿದೆ ಎಂದು ಅಧಿಕಾರಿಗಳು ಸಮಜಾಯಿಷಿ ನೀಡುತ್ತಾರೆ.

ಯೋಜನೆಯ ಉದ್ದೇಶ:
ಆಯ್ಕೆಯಾದ ಗ್ರಾಮಗಳಲ್ಲಿ ಯೋಜನೆಯ ಅನುದಾನದ ಜೊತೆಗೆ ಉದ್ಯೋಗ ಖಾತರಿ ಯೋಜನೆ ಮೂಲಕ ಹೆಚ್ಚುವರಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅವಕಾಶ ನೀಡಲಾಗಿದೆ. ಅಲ್ಲದೇ, ಮುಖ್ಯಮಂತ್ರಿಯವರ 21 ಅಂಶಗಳ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಗೊಳಿಸುವುದು, ಗ್ರಾಮ ಪಂಚಾಯಿತಿಗಳ ಮೂಲಕ ಗ್ರಾಮದ ಸರ್ವಾಂಗೀಣ ಅಭಿವೃದ್ಧಿ ಯೋಜನೆಯ ಉದ್ದೇಶವಾಗಿದೆ.

ಹಣ ಬಿಡುಗಡೆ ವಿಳಂಬ
ಬೆಳಗಾವಿ ಜಿಲ್ಲೆಯ 17 ಗ್ರಾಮೀಣ ವಿಧಾನಸಭಾ ಕ್ಷೇತ್ರಗಳ 66 ಗ್ರಾಮಗಳಿಗೆ ಬಿಡುಗಡೆಯಾಗಿದ್ದ 17 ಕೋಟಿ ರೂ. ಅನುದಾನದಲ್ಲಿ 10 ಕೋಟಿ ರೂ. ವೆಚ್ಚ ಆಗಿದ್ದು ಬಿಟ್ಟರೆ, ಬೀದರ್‌ ಜಿಲ್ಲೆಯ 25 ಗ್ರಾಮಗಳ 25 ಕೋಟಿ ರೂ. ಅನುದಾನದಲ್ಲಿ 6 ಕೋಟಿ ರೂ. ಹಣ ಬಿಡುಗಡೆಯಾಗಿದೆ. ಹಾಗೇ ಹಣ ಖರ್ಚು ಮಾಡಲಾಗಿದೆ. ತುಮಕೂರು ಮತ್ತು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕ್ರಮವಾಗಿ 5 ಮತ್ತು 4 ಕೋಟಿ ರೂ. ವೆಚ್ಚವಾಗಿದೆ. ಉಳಿದಂತೆ ಏಳು ಜಿಲ್ಲೆಗಳಲ್ಲಿ 3 ಕೋಟಿ, 16 ಜಿಲ್ಲೆಗಳಲ್ಲಿ 2 ಕೋಟಿ, ಚಾಮರಾಜನಗರ ಜಿಲ್ಲೆಯಲ್ಲಿ 1 ಕೋಟಿ ರೂ. ವೆಚ್ಚ ಮಾಡಲಾಗಿದೆ. ಯಾದಗಿರಿ ಜಿಲ್ಲೆಯ 16 ಗ್ರಾಮಗಳಿಗೆ 4 ಕೋಟಿ ರೂ. ಬಿಡುಗಡೆ ಆಗಿದ್ದರೂ, ನಯಾ ಪೈಸೆ ಖರ್ಚಾಗಿಲ್ಲ. ಈ ಮಾಹಿತಿ 2017-18ನೇ ಸಾಲಿನ ಆರ್ಥಿಕ ಸಮೀಕ್ಷೆಯಲ್ಲೇ ನೀಡಲಾಗಿದೆ.

ಗ್ರಾಮಗಳ ಅಭಿವೃದ್ಧಿ ಹೆಸರಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ಮೂಲಕ ಜಾರಿಗೆ ತಂದಿರುವ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆ ಅನುಷ್ಠಾನಗೊಳ್ಳದೇ ವಿಫ‌ಲವಾಗಿರುವುದು ಆಡಳಿತಯಂತ್ರ ಸ್ಥಗಿತಗೊಂಡಿದೆ ಅನ್ನುವುದಕ್ಕೆ ಉದಾಹರಣೆ.
– ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ವಿಧಾನಪರಿಷತ್‌ ಸದಸ್ಯ.

ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ಹಂಚಿಕೆಯಾದ ಗ್ರಾಮಗಳಿಗೆ ಅನುದಾನ ಬಿಡುಗಡೆಯಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ. ಕೊಟ್ಟ ಹಣ ವೆಚ್ಚ ಆಗಿದ್ದು, ಹೊಸ ಕ್ರೀಯಾ ಯೋಜನೆ ಸಿದ್ಧಪಡಿಸಲಾಗುತ್ತಿದೆ.
– ಶಿವರಾಜ್‌ ತಂಗಡಗಿ, ಕಾಂಗ್ರೆಸ್‌ ಶಾಸಕ.

ನನ್ನ ಕ್ಷೇತ್ರದ ಐದು ಗ್ರಾಮಗಳಿಗೆ ತಲಾ 20 ಸಾವಿರ ರೂ.ಗಳಂತೆ 1ಲಕ್ಷ ರೂ. ಹಣ ಬಿಡುಗಡೆಯಾಗಿದೆ. ವೆಚ್ಚದ ದಾಖಲೆಗಳನ್ನು ಸಲ್ಲಿಸಿದರೆ ಮುಂದಿನ ಅನುದಾನ ಬಿಡುಗಡೆ ಆಗಲಿದೆ ಎಂದು ಹೇಳಲಾಗುತ್ತಿದೆ.
– ಎನ್‌.ಎಚ್‌. ಕೋನರೆಡ್ಡಿ, ಜೆಡಿಎಸ್‌ ಶಾಸಕ.

 – ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

accident

Kundapura: ಕಾರು ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.