ಗ್ರಾಮಸಭೆಗೆ ಬಾರದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ


Team Udayavani, Jul 7, 2017, 11:14 AM IST

yelahanka akrosha.jpg

ಯಲಹಂಕ: ಶಿವಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಳ್ಳಿಪುರದಲ್ಲಿ ಗುರುವಾರ ನಡೆದ ಗ್ರಾಮಸಭೆಗೆ ಸರ್ಕಾರದ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳೇ ಗೈರಾದ ಹಿನ್ನೆಲೆಯಲ್ಲಿ ಸಭೆಯನ್ನು ಮುಂದೂಡುವಂತೆ ಗ್ರಾಮಸ್ಥರು ಒತ್ತಾಯಿಸಿದರು. ಈ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಸಭೆಯನ್ನು ಮುಗಿಸಲಾಯಿತು. 

ಬೆಂಗಳೂರು ಉತ್ತರ ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ಅಶ್ವಥ್‌ ರೆಡ್ಡಿ ಅವರೂ ಸೇರಿದಂತೆ 19 ಇಲಾಖೆಗಳ ಅಧಿಕಾರಿಗಳು ಗ್ರಾಮ ಸಭೆಗೆ ಗೈರಾಗಿದ್ದರು. ಇದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಹೀಗಾಗಿ ಜನಪ್ರತಿನಿಧಿಗಳು ಅವಸರವಾಗಿ ತಮ್ಮ ಮಾತು ಮುಗಿಸಿ ಸಭೆಗೆ ಅಂತ್ಯ ಹಾಡಿದರು.  

ಸ್ಪಷ್ಟನೆ ನೀಡಬೇಕೆಂದು ಒತ್ತಾಯ: ಗ್ರಾಮಾಠಾಣಾದ ಕಾನೇಷುಮಾರಿ ಜಾಗದ ಖಾತೆಗಳನ್ನು 2004ರಲ್ಲಿ ತಿದ್ದುಪಡಿ ಮಾಡಲಾಗಿದೆ. ದುಡ್ಡು ಕೊಟ್ಟವರಿಗೆ ಖಾತೆ ಮಾಡಿಕೊಡಲಾಗಿದೆ. ಈ ಹಿಂದೆ ಇದ್ದ ಬಿಲ್‌ ಕಲೆಕ್ಟರ್‌ ಮತ್ತು ಚುನಾಯಿತ ಪ್ರತಿನಿಧಿಗಳು ಸೇರಿ ಗ್ರಾಮ ಠಾಣಾದ ಅನೇಕ ಖಾತೆಗಳನ್ನು ತಿದ್ದುಪಡಿ ಮಾಡಿದ್ದಾರೆ.

ಗ್ರಾಮ ಠಾಣಾದಲ್ಲಿದ್ದ ದಾಖಲೆಗಳನ್ನು ಇ ಖಾತೆ ಮಾಡಿಕೊಡಿ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಗ್ರಾಮಸ್ಥರು ಕೇಳಿದರೆ ನ್ಯಾಯಾಲಯಕ್ಕೆ ಹೋಗಿ ಎಂದು ಹೇಳುತ್ತಿದ್ದಾರೆ. ಆದರೆ, ದುಡ್ಡು ಕೊಟ್ಟವರಿಗೆ ಅವರೇ ಖಾತೆ ಮಾಡಿಕೊಟ್ಟಿದ್ದಾರೆ. ಈ ಕಾರಣಕ್ಕೆ ಅವರು ನಮಗೆ ಸಮಂಜಸ ಉತ್ತರ ಕೊಡಬೇಕು ಎಂದು ಅಂಬೇಡ್ಕರ್‌ ಹಿತ ರಕ್ಷಣಾ ಸಮಿತಿಯ ಅಧ್ಯಕ್ಷರಾದ ಜೈಲಿಂಗಯ್ಯ ಅಗ್ರಹಿಸಿದರು.

ಸರ್ಕಾರದ ಇಲಾಖೆಗಳ ಪೈಕಿ ಅರಣ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಆಹಾರ ಪೂರೈಕೆ ಇಲಾಖೆಗಳ ಅಧಿಕಾರಿಗಳು ಮಾತ್ರ ಗ್ರಾಮಸಭೆಗೆ ಬಂದಿದ್ದರು. ಉಳಿದ ಅಧಿಕಾರಿಗಳು ಗೈರಾಗಿದ್ದರು. ಈ ಅಧಿಕಾರಿಗಳಿಗೆ ನೋಟಿಸ್‌ ನೀಡಿ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಮನವಿ ಮಾಡಿಕೊಂಡರು.

ಇನ್ನು ಹತ್ತು ದಿನದೊಳಗೆ ಸಭೆ ಕರೆದು ಖಾತೆಗಳ ಬಗ್ಗೆ ಇರುವ ಗೊಂದಲಗಳನ್ನು ಬಗೆಹರಿಸುತ್ತೇನೆ. ಅಧಿಕಾರಿಗಳ ಜೊತೆ ಗ್ರಾಮಸ್ಥರೆಲ್ಲ ಕುಳಿತು ಚರ್ಚೆ ನಡೆಸೋಣ ಎಂದು ವಿಧಾನಪರಿಷತ್‌ ಸದಸ್ಯ ನಾರಾಯಣ ಸ್ವಾಮಿ ಭರವಸೆ ನೀಡಿದರು. ಸಭೆಗೆ ಬಾರದ ಅಧಿಕಾರಿಗಳಿಗೆ ನೋಟಿಸ್‌ ಜಾರಿ ಮಾಡುವಂತೆ ಗ್ರಾಮಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಚೊಕ್ಕನ ಹಳ್ಳಿ ವೆಂಕಟೇಶ್‌, ಗ್ರಾ.ಪಂ.ಅಧ್ಯಕ್ಷರಾದ ಮುನಿಅಂಜನಪ್ಪ ಇದ್ದರು. 

ಟಾಪ್ ನ್ಯೂಸ್

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.