ಯುವಕರ ವಲಸೆಯಿಂದ ಹಳ್ಳಿಗಳು ವೃದ್ಧಾಶ್ರಮವಾಗುತ್ತಿವೆ

Team Udayavani, Oct 25, 2017, 1:01 PM IST

yuvakara-valase.jpg

ಬೆಂಗಳೂರು: ಕೃಷಿ ಲಾಭದಾಯಕ ಉದ್ಯಮವಲ್ಲ ಎಂಬ ಭಾವನೆ ಗ್ರಾಮೀಣ ಯುವಕರಲ್ಲಿದ್ದು, ನಗರ ಪ್ರದೇಶಗಳಿಗೆ ವಲಸೆ ಹೋಗುತ್ತಿದ್ದಾರೆ. ಇದರಿಂದಾಗಿ ಹಳ್ಳಿಗಳು ಯುವಕರಿಲ್ಲದೆ ವೃದ್ಧಾಶ್ರಮಗಳಂತಾಗುತ್ತಿವೆ ಎಂದು ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಎಚ್‌.ಶಿವಣ್ಣ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ (ಜಿಕೆವಿಕೆ) ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಆಹಾರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕೃಷಿ ಉದ್ಯಮವನ್ನು ಲಾಭದಾಯಕ ಮಾಡುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೃಷಿಗೆ ಆದ್ಯತೆ ನೀಡಬೇಕು. ಹೆಚ್ಚು ಅನುದಾನ ನೀಡುವ ಮೂಲಕ ಕೃಷಿ ಸಂಶೋಧನೆ, ಅಭಿವೃದ್ಧಿ, ಶಿಕ್ಷಣ ಮತ್ತು ವಿಸ್ತರಣೆಯನ್ನು ಹೆಚ್ಚಿಸಿದರೆ, ಉದ್ಯೋಗಕ್ಕಾಗಿ ಗ್ರಾಮೀಣ ಪ್ರದೇಶದ ಯುವಜನರು ಪಟ್ಟಣ, ನಗರಗಳಿಗೆ ವಲಸೆ ಹೋಗುವುದನ್ನು ತಪ್ಪಿಸಬಹುದು ಎಂದು ಸಲಹೆ ನೀಡಿದರು. 

ಹಳ್ಳಿಗಾಡು ಪ್ರದೇಶಗಳಲ್ಲಿ ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಕೈಗೊಳ್ಳಬೇಕು. ಸರ್ಕಾರಿ ಯೋಜನೆಗಳು ಕೃಷಿ ಕೆಲಸಗಾರರನ್ನು ಸೋಮಾರಿಗಳನ್ನಾಗಿ ಮಾಡುವಂತಿರಬಾರದು. ಅವರು ಸ್ವಯಂ ಉದ್ಯೋಗಿಗಳಾಗುವಂತೆ ಸುಲಭವಾಗಿ ಸಾಲ ಸೌಲಭ್ಯ ಸಿಗಬೇಕು ಎಂದರು.

ವಿಶ್ವ ಆಹಾರ ದಿನಾಚರಣೆಯ ಈ ವರ್ಷದ ಘೋಷ ವಾಕ್ಯ “ವಲಸೆ ಬದಲಾಯಿಸಲು ಆಹಾರ ಭದ್ರತೆ ಮತ್ತು ಗ್ರಾಮೀಣಾಭಿವೃದ್ಧಿಯಲ್ಲಿ ಬಂಡವಾಳ ಹೂಡಿಕೆ’ ಎಂಬುದಾಗಿದೆ.  ಸ್ವಾತಂತ್ರ್ಯ ಬಂದಾಗ ದೇಶದ ಒಟ್ಟು ಕೃಷಿ ಉತ್ಪಾದನೆ 5.18 ದಶಲಕ್ಷ ಮೆಟ್ರಿಕ್‌ ಟನ್‌ ಇತ್ತು. ಕಳೆದ ವರ್ಷ ದಾಖಲೆಯ 27.6 ದಶಲಕ್ಷ ಟನ್‌ಗೆ ಏರಿಕೆಯಾಗಿದೆ.

ಇದಕ್ಕೆ ಕೃಷಿ ಕ್ಷೇತ್ರದಲ್ಲಿ ನಡೆದಿರುವ ಸಂಶೋಧನೆ, ಶಿಕ್ಷಣ, ತಂತ್ರಜ್ಞಾನ ಕಾರಣವೆನ್ನಬಹುದು ಎಂದು ಹೇಳಿದರು.  ಕೃಷಿ ತಂತ್ರಜ್ಞಾನ ಅಳವಡಿಕೆ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ. ಶ್ರೀನಾಥ್‌ ದೀಕ್ಷಿತ್‌ ಮಾತನಾಡಿ, ಶಿಕ್ಷಣ, ಉದ್ಯೋಗಕ್ಕಾಗಿ ವಲಸೆ ಹೋದರೆ ಒಳ್ಳೆಯದು.

ಆದರೆ, ಬರಗಾಲ, ಕೃಷಿಯಲ್ಲಿ ನಷ್ಟ, ವಾತಾವರಣ ಬದಲಾವಣೆ ಇತ್ಯಾದಿ ನಕಾರಾತ್ಮಕವಾದ ವಲಸೆ ಒಳ್ಳೆಯದಲ್ಲ. ಕೃಷಿಯನ್ನ  ಲಾಭದಾಯಕ ಉದ್ಯಮವಾಗಿ ಪರಿವರ್ತಿಸಿಕೊಂಡು ಆರ್ಥಿಕವಾಗಿ ಸಬಲರಾಗುವ ನಿಟ್ಟಿನಲ್ಲಿ ಕೃಷಿ ಸಂಶೋಧನೆ, ತಂತ್ರಜ್ಞಾನಗಳನ್ನು ರೈತರು ಬಳಕೆ ಮಾಡಿಕೊಳ್ಳಬೇಕು ಎಂದರು. 

ಕೃಷಿ ವಿವಿ ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಶ್ರೀನಿವಾಸ್‌ಗೌಡ ಮಾತನಾಡಿ, ಭಾರತ ಗ್ರಾಮಗಳ ದೇಶ. ಆದರೆ, ಇತ್ತೀಚಿನ ದಿನಗಳಲ್ಲಿ ದೇಶದ ಪಟ್ಟಣಗಳು ಬೆಳೆಯುತ್ತಿರುವ ವೇಗ ಜಾಸ್ತಿ ಇದೆ. ವಿಶ್ವದ ವೇಗ 0.9 ಇದ್ದು, ಭಾರತದಲ್ಲಿ 1.1ರಷ್ಟಿದೆ. 2050ನೇ ಇಸವಿಗೆ ಭಾರತ ಪಟ್ಟಣಗಳ ದೇಶ ಆಗಲಿದೆ.

ಸುಮಾರು 81.4 ಕೋಟಿ ಭಾರತೀಯರು ಪಟ್ಟಣದಲ್ಲಿ ನೆಲೆಸಿದರೆ 80.5 ಕೋಟಿ ಗ್ರಾಮೀಣ ಪ್ರದೇಶದಲ್ಲಿ ನೆಲೆಸುತ್ತಾರೆ ಎಂದು ಹೇಳಿದರು. ಸಮಾರಂಭದಲ್ಲಿ ಕೃಷಿ ವಿವಿ ವಿಸ್ತರಣಾ ನಿರ್ದೇಶಕ ಡಾ.ಎಂ.ಎಸ್‌.ನಟರಾಜ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.