Violation of road rules: ಸದಾಶಿವನಗರಠಾಣೆ ವ್ಯಾಪ್ತಿಯಲ್ಲೇ 5 ತಿಂಗಳಲ್ಲಿ 1 ಲಕ್ಷ ಕೇಸ್!
Team Udayavani, May 28, 2024, 1:43 PM IST
ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸುವವರ ಪತ್ತೆಗಾಗಿ ನಗರ ಸಂಚಾರ ಪೊಲೀಸರು ನಗರದ ಹಲವೆಡೆ ಅತ್ಯಾಧುನಿಕ ಸಿಸಿ ಕ್ಯಾಮೆರಾಗಳ ಅಳವಡಿಸಿದ್ದಾರೆ. ಇದೀಗ ಅವುಗಳು ಸಂಗ್ರಹಿಸುವ ಫೋಟೊಗಳನ್ನು ಆಧರಿಸಿ ಪೊಲೀಸರು ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಿಕೊಳ್ಳುತ್ತಿದ್ದಾರೆ.
ಈ ಮಧ್ಯೆ ಸದಾಶಿವನಗರದ ಸಂಚಾರ ಠಾಣೆ ವ್ಯಾಪ್ತಿಯ ಹಲವೆಡೆ ಡಿಜಿಟಲ್ ಎಫ್ಟಿವಿಆರ್ ಕ್ಯಾಮೆರಾಗಳನ್ನು ಅಳಡಿಸಲಾಗಿದ್ದು, ಈ ಒಂದೇ ಠಾಣೆ ವ್ಯಾಪ್ತಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗ ಸಂಬಂಧಪಟ್ಟಂತೆ 2024ರ ಜನವರಿಯಿಂದ ಮೇ 27ರವರೆಗೆ 1.02 ಲಕ್ಷ ಪ್ರಕರಣ ದಾಖಲಿಸಲಾಗಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚುತ್ತಿದ್ದು, ಅವುಗಳ ಜತೆಗೆ ಸಂಚಾರ ನಿಯಮಗಳ ಉಲ್ಲಂಘನೆ ಪ್ರಮಾಣವೂ ಅಧಿಕವಾಗುತ್ತಿದೆ. ಸಂಚಾರ ನಿಯಮ ಉಲ್ಲಂಘನೆಯಿಂದಾಗಿ ಅಪಘಾತಗಳು ಸಂಭವಿಸುತ್ತಿವೆ. ಈ ನಡುವೆ ನಗರ ಸಂಚಾರ ವಿಭಾಗದಲ್ಲಿ ಸಿಬ್ಬಂದಿ ಕೊರತೆ ಇದ್ದು, ಪ್ರತಿಯೊಂದು ಸಿಗ್ನಲ್‌ಗಳಲ್ಲಿ ಸಂಚರಿಸುವ ವಾಹನಗಳ ಮೇಲೆ ನಿಗಾವಹಿಸಲು ಸಾಧ್ಯವಿಲ್ಲ.
ಹೀಗಾಗಿ ನಗರದ ಪ್ರಮುಖ ವೃತ್ತಗಳು ಹಾಗೂ ರಸ್ತೆಗಳಲ್ಲಿ ಅತ್ಯಾಧುನಿಕ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಸಂಚಾರ ನಿಯಮ ಉಲ್ಲಂಘಿಸುವ ಸಾರ್ವಜನಿಕರ ಫೋಟೋ ಕ್ಯಾಮೆರಾದಲ್ಲಿ ಸೆರೆಯಾಗುತ್ತದೆ.
ವಾಹನಗಳ ನೋಂದಣಿ ಸಂಖ್ಯೆ ಹಾಗೂ ಗುರುತು ಸಹ ಪತ್ತೆ ಹಚ್ಚುವುದು ಸುಲಭ. ಈ ಆಧಾರದ ಮೇಲೆ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗುತ್ತದೆ. ದಂಡ ಬಾಕಿ ಇರುವ ವಾಹನ ಸವಾರರ ಮೊಬೈಲ್ ಹಾಗೂ ಮನೆಗಳಿಗೆ ನೋಟಿಸ್ ನೀಡಲಾಗುತ್ತಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.