ಪತಿ ಸಾವು, ಪೆರೋಲ್ ಮೇಲೆ ಶಶಿಕಲಾ ಬಿಡುಗಡೆ
Team Udayavani, Mar 21, 2018, 6:20 AM IST
ಬೆಂಗಳೂರು: ಅನಾರೋಗ್ಯದಿಂದ ಮೃತಪಟ್ಟ ಎಂ. ನಟರಾಜನ್ ಅವರ ಧಾರ್ಮಿಕ ವಿಧಿ ವಿಧಾನ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸಲುವಾಗಿ ಅವರ ಪತ್ನಿ ಶಶಿಕಲಾ ನಟರಾಜನ್ 15 ದಿನಗಳ ಪೆರೋಲ್ ಅನುಮತಿ ಮೇರೆಗೆ ಮಂಗಳವಾರ ಚೆನ್ನೈಗೆ ತೆರಳಿದರು.
ನಟರಾಜನ್ (74) ಅವರನ್ನು ಮಾ. 16ರಂದೇ ಹೃದಯ ಸಂಬಂಧಿ ಕಾಯಿಲೆ ಉಲ್ಬಣಿಸಿದ ಹಿನ್ನೆಲೆಯಲ್ಲಿ ಚೆನ್ನೈಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ತಡರಾತ್ರಿ 1.35ರ ವೇಳೆಗೆ ನಟರಾಜನ್ ನಿಧನಹೊಂದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ತತ್‌ಕ್ಷಣ ಶಶಿಕಲಾ ಅವರಿಗೂ ಈ ಬಗ್ಗೆ ಮಾಹಿತಿ ನೀಡಲಾಗಿತ್ತು. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಸಜಾ ಕೈದಿಯಾಗಿರುವ ಶಶಿಕಲಾ ಪತಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ, ಕೆಲಕಾಲ ದಿಗ್ಭ್ರಾಂತರಾಗಿದ್ದರು. ಬಹಳ ಹೊತ್ತು ಯಾರೊಂದಿಗೂ ಮಾತನಾಡಿಲ್ಲ.
ಈ ಅವಧಿಯಲ್ಲಿ ಯಾವುದೇ ರೀತಿಯ ರಾಜಕೀಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬಾರದು. ಸಭೆಗಳನ್ನು ನಡೆಸಬಾರದು. ಪತಿಯ ಪಾರ್ಥಿವ ಶರೀರದ ಅಂತ್ಯಕ್ರಿಯೆ ಸೇರಿ ಅಂತಿಮ ವಿಧಿ ವಿಧಾನ, ಇನ್ನಿತರ ಕಾರ್ಯಗಳನ್ನು ಮುಗಿಸಿಕೊಂಡು ವಾಪಸ್ ಆಗಬೇಕು ಎಂಬ ಷರತ್ತುಗಳನ್ನು ವಿಧಿಸಿ ಪೆರೋಲ್ ನೀಡಲಾಗಿದೆ. ಅಪರಾಹ್ನ 1.45ರ ಸುಮಾರಿಗೆ ಬೆಂಬಲಿಗರ ಜತೆ ಚೆನ್ನೈ ಕಡೆ ಪಯಣ ಬೆಳೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
MUST WATCH
ಹೊಸ ಸೇರ್ಪಡೆ
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.