![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, May 13, 2018, 6:15 AM IST
ಬೆಂಗಳೂರು: ರಾಜ್ಯದ 222 ವಿಧಾನಸಭಾ ಕ್ಷೇತ್ರಗಳಲ್ಲಿ ಶನಿವಾರ ನಡೆದ ಮತದಾನ ಬಹುತೇಕ ಶಾಂತಿಯುತವಾಗಿದ್ದರೂ, ರಾಜ್ಯದ ಕೆಲವೆಡೆ ಸಣ್ಣ, ಪುಟ್ಟ ಘರ್ಷಣೆಗಳು ನಡೆದಿವೆ. ಹಾಸನ,ಬೆಂಗಳೂರು, ಬೆಂಗಳೂರು ಗ್ರಾಮಾಂತರ ಹಾಗೂ ವಿಜಯಪುರದಲ್ಲಿ ನಡೆದ ನಾಲ್ಕು ಪ್ರತ್ಯೇಕ ಗಂಭೀರ ಪ್ರಕರಣಗಳಲ್ಲಿ ಐವರನ್ನು ಬಂಧಿಸಲಾಗಿದೆ.
ಬೆಂಗಳೂರಿನ ವಿಜಯನಗರದ ಹಂಪಿನಗರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು, ಬಿಜೆಪಿ ಕಾರ್ಪೋರೇಟರ್ ಮೇಲೆ ಹಲ್ಲೆಯಾಗಿದೆ. ಈ ಸಂಬಂಧ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಅತ್ತಿಬೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಎಎಸ್‌ಐ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ವಿಜಯಪುರದಲ್ಲಿ ನಕಲಿ ಮತ ಚಲಾಯಿಸಲು ಮುಂದಾಗಿದ್ದ ಯುವಕನಿಗೆ ಸ್ಥಳೀಯರು ಹಿಗ್ಗಾಮುಗ್ಗ ಥಳಿಸಿದ ಪ್ರಕರಣ ನಡೆದಿದ್ದು, ಕೆಲ ಕಿಡಿಗೇಡಿಗಳನ್ನು ಬಂಧಿಸಲಾಗಿದೆ.
ದಾವಣಗೆರೆಯಲ್ಲಿ ಮತಗಟ್ಟೆಗೆ ಮತದಾರರನ್ನು ಕರೆ ತರುವ ವಿಚಾರವಾಗಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಮಹಾನಗರ ಪಾಲಿಕೆ 25ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯ ಜೆ.ಎನ್. ಶ್ರೀನಿವಾಸ್ ಮತ್ತು ಇಬ್ಬರು ಸಹೋದರರನ್ನು ಪೊಲೀಸರು ಬಂಧಿಸಿದರು.
ಬಿಜೆಪಿ ಅಭ್ಯರ್ಥಿ ವಜ್ಜಲ್ ವಿರುದ್ಧ ದೂರು: ಈ ಮಧ್ಯೆ, ಮತದಾರರಿಗೆ ಹಣ ಹಂಚಿಕೆ ಆರೋಪದ ಮೇಲೆ ಹಟ್ಟಿ ಚಿನ್ನದ ಗಣಿಯ ರೋಡಲಬಂಡಾ (ತವಗ) ಕ್ಷೇತ್ರದ ಜೆಡಿಎಸ್ ತಾಪಂ ಸದಸ್ಯೆ ಬಸಮ್ಮ ಪರಮೇಶ ಯಾದವ ಹಾಗೂ ಬಿಜೆಪಿ ಅಭ್ಯರ್ಥಿ ಮಾನಪ್ಪ ವಜ್ಜಲ್ ವಿರುದ್ಧ ಪ್ರಕರಣ ದಾಖಲಾಗಿದೆ.
ಮತಗಟ್ಟೆ ಅಧಿಕಾರಿ ಜತೆ ವಾಗ್ವಾದ: ನರಗುಂದದ ಅಧ್ಯಾಪಕ ನಗರದ ಮತಗಟ್ಟೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪಿಆರ್‌ಒ ಮತಯಂತ್ರ ಬಳಿ ನಿಂತು ಮತದಾರರಿಂದ ಮತ ಹಾಕಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಅಭ್ಯರ್ಥಿ ಸಿ.ಸಿ. ಪಾಟೀಲ ಅವರು ಪಿಆರ್‌ಒ ಅವರನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಜಿಲ್ಲಾಧಿಕಾರಿ ಮನೋಜ್
ಜೈನ್, ಕ್ಷೇತ್ರ ಚುನಾವಣಾಧಿಕಾರಿ ಸದಾಶಿವ ಮರ್ಜಿಗೆ ದೂರವಾಣಿ ಕರೆ ಮಾಡಿ ಕೂಡಲೇ ಪಿಆರ್‌ಒ ಬದಲಾಯಿಸುವಂತೆ ಒತ್ತಾಯಿಸಿದರು.
ಕಾಶಪ್ಪನವರ, ಬಿಜೆಪಿ ಕಾರ್ಯಕರ್ತರ ಮಧ್ಯೆ ಗಲಾಟೆ: ಬಾಗಲಕೋಟೆ ಜಿಲ್ಲೆ ಇಳಕಲ್ಲ ಪಟ್ಟಣದ ನೇಕಾರ ಕಾಲೋನಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಸಕ ವಿಜಯಾನಂದ ಕಾಶಪ್ಪನವರ ಮತಗಟ್ಟೆಗೆ ಬಂದಾಗ ಬಿಜೆಪಿ ಕಾರ್ಯಕರ್ತರು ಬಿಜೆಪಿ ಪರ ಘೋಷಣೆ ಕೂಗಿದರು. ಈ ವೇಳೆ, ಶಾಸಕರು ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದಿದ್ದು, ಕೈ ಕೈ ಮಿಲಾಯಿಸಿದರು. ಗಾಯ ಗೊಂಡ ಇಬ್ಬರು ಬಿಜೆಪಿ ಕಾರ್ಯಕರ್ತರು ಇಳಕಲ್ಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು. ಇದೇ ವೇಳೆ, ಬಾದಾಮಿಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು.
ಕಾರಿನ ಗಾಜು ಪುಡಿಪುಡಿ
ಹೊಳೆನರಸೀಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಪಿ. ಮಂಜೇಗೌಡ ಅವರು ಪರಸನಹಳ್ಳಿ ಮತಗಟ್ಟೆಗೆ ಆಗಮಿಸುತ್ತಿದ್ದಂತೆ ಅವರ ವಿರುದಟಛಿ ಜೆಡಿಎಸ್ ಕಾರ್ಯಕರ್ತರು, ಕಾರಿನ ಮೇಲೆ ಕಲ್ಲುಗಳನ್ನು ಬೀಸಿದರು. ಅವರ ಕಾರಿನ ಹಿಂಭಾಗದ ಇಂಡಿಕೇಟರ್ ಗಳು, ಬಲಭಾಗದ ಬಾಗಿಲ ಗಾಜು ಪುಡಿಯಾಗಿದೆ.ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ರಮಾಬಾಯಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಣ ಹಂಚುತ್ತಿದ್ದಾರೆಂದು ಆರೋಪಿಸಿ, ಜೆಡಿಎಸ್ ಕಾರ್ಯಕರ್ತರು ಪೊಲೀಸರ ಜತೆ ಮಾತಿನ ಚಕಮಕಿ ನಡೆಸಿದರು.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.