ಜನ ಸೇರುವಲ್ಲಿ ಮತದಾನ ಜಾಗೃತಿ ಅಭಿಯಾನ


Team Udayavani, Mar 29, 2018, 2:34 PM IST

jana-seruvalli.jpg

ಬೆಂಗಳೂರು: ನಗರದ ಮಾಲ್‌, ಕಾಲೇಜು, ಮಾರುಕಟ್ಟೆ ಸೇರಿದಂತೆ ಹೆಚ್ಚು ಜನ ಸೇರುವ ಪ್ರದೇಶಗಳಲ್ಲಿ ಮತದಾನದ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ಬಿಬಿಎಂಪಿ ಆಯುಕ್ತರೂ ಆಗಿರುವ ನಗರ ಜಿಲ್ಲಾ ಚುನಾವಣಾಧಿಕಾರಿ ಎನ್‌.ಮಂಜುನಾಥ ಪ್ರಸಾದ್‌ ತಿಳಿಸಿದ್ದಾರೆ.

ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆ ವತಿಯಿಂದ ಬುಧವಾರ ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದ ಅವರು, ಮತದಾನ ಮಹತ್ವದ ಕುರಿತು ಜನರಿಗೆ ತಿಳಿಸುವ ಉದ್ದೇಶದಿಂದ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದೇ ವೇಳೆ ಮತದಾರರ ಪಟ್ಟಿಯಿಂದ ಹೊರಗುಳಿದವರು ಪಟ್ಟಿಗೆ ಸೇರುವಂತೆಯೂ ಸಲಹೆ ನೀಡಲಾಗುವುದು ಎಂದು ಹೇಳಿದರು.

ಮತದಾರರ ಪಟ್ಟಿಗೆ ಹೆಸರು ಸೇರಿಸಲು ಏಪ್ರಿಲ್‌ 14ರವರೆಗೆ ಅವಕಾಶ ಕಲ್ಪಿಸಲಾಗಿದ್ದು, ಮತದಾರರ ಪಟ್ಟಿಗೆ ಸೇರಿಸಬಯಸುವವರು ಪಾಲಿಕೆಯ ವಾರ್ಡ್‌, ಕಂದಾಯ ಕಚೇರಿ ಅಥವಾ ವೆಬ್‌ಸೈಟ್‌ಗಳ ಮೂಲಕ ಅರ್ಜಿ ಪಡೆದು ಮತ ಪಟ್ಟಿಗೆ ಸೇರಿಸಬಹುದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಯಾಗಿರುವುದನ್ನು ಸಹ ನಾಗರಿಕರು ಆನ್‌ಲೈನ್‌ ಮೂಲಕ ಪರಿಶೀಲಿಸಬಹುದಾಗಿದೆ ಎಂದು ಹೇಳಿದರು. 

ಚುನಾವಣೆಗೆ ಏಳು ದಿನಗಳ ಮುಂಚಿತವಾಗಿ ಚುನಾವಣಾ ಸಿಬ್ಬಂದಿ ಎಲ್ಲ ಮನೆಗಳಿಗೆ ತೆರಳಿ ಭಾವಚಿತ್ರವುಳ್ಳ ಮತದಾರರ ಸ್ಲಿಪ್‌ ವಿತರಿಸಲಿದ್ದು, ನಗರದಲ್ಲಿ ಒಟ್ಟು 8,787 ಮತಗಟ್ಟೆಗಳ ಬಳಿ ಸಹ ಸ್ಲಿಪ್‌ಗ್ಳನ್ನು ಮತದಾರರು ಪಡೆಯಬಹುದಾಗಿದೆ ಎಂದು ಮಾಹಿತಿ ನೀಡಿದರು. 

ಜಾಗೃತಿ ರಾಯಭಾರಿಗಳಾಗಿ: ಸ್ಕೌಟ್ಸ್‌ ಮತ್ತು ಗೈಡ್ಸ್‌ ಕೆಡೆಟ್ಸ್‌, ಎನ್‌ಸಿಸಿ ಸ್ವಯಂ ಸೇವಕರು, ರೇಂಜರ್ಸ್‌ಗಳು ತಮ್ಮ ವ್ಯಾಪ್ತಿಗಳಲ್ಲಿ ಮತದಾನ ಜಾಗೃತಿಯ ರಾಯಭಾಗಿಗಳಾಗಿ ಕಾರ್ಯನಿರ್ವಹಿಸುವ ಜವಾಬ್ದಾರಿ ವಹಿಸಿಕೊಳ್ಳಬೇಕು. ಜತೆಗೆ ಮತದಾನ ಮಾಡುವಂತೆ ನಾಗರಿಕರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಆಯುಕ್ತರು ತಿಳಿಸಿದರು. ಈ ವೇಳೆ ನೋಡಲ್‌ ಅಧಿಕಾರಿ ಎಸ್‌.ಜಿ.ರವೀಂದ್ರ, ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ ಆನಂದ, ಪ್ರಾಧ್ಯಾಪಕರಾದ ವನುಜಾ, ಎಂ.ಎ.ಚಲ್ಲಯ್ಯ  ಉಪಸ್ಥಿತರಿದ್ದರು.

ಇವಿಎಂ ಹ್ಯಾಕ್‌ ಸಾಧ್ಯವಿಲ್ಲ: ಇವಿಎಂ ಮತಯಂತ್ರಗಳನ್ನು ಹ್ಯಾಕ್‌ ಮಾಡಲಾಗುತ್ತದೆ ಎಂಬುದು ತಪ್ಪು ಕಲ್ಪನೆ. ಇವಿಎಂಗಳನ್ನು ಹ್ಯಾಕ್‌ ಮಾಡಲು ಸಾಧ್ಯವಿಲ್ಲ ಎಂಬುದ ಕುರಿತು ಜನರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಹಲವಾರು ಭಾಗಗಳಲ್ಲಿ ಅಣಕು ಮತದಾನ ಅಭಿಯಾನ ನಡೆಸಲಾಗುತ್ತಿದೆ. ಜತೆಗೆ ಜನರಿಗೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ವಿವಿಪ್ಯಾಟ್‌ಗಳನ್ನು ಅಳವಡಿಸಲಾಗಿದ್ದು, ಇದರಿಂದಾಗಿ ನಾವು ಯಾವ ಪಕ್ಷಕ್ಕೆ ಮತ ಹಾಕಿದ್ದೇವೆ ಎಂಬುದು ತಿಳಿಯಲಿದೆ ಎಂದು ಮಂಜುನಾಥ ಪ್ರಸಾದ್‌ ಹೇಳಿದರು.

ಟಾಪ್ ನ್ಯೂಸ್

High Court: ಜ. 30ರ ವರೆಗೆ ಎಚ್‌ಡಿಕೆ ಮೇಲೆ ಬಲವಂತದ ಕ್ರಮ ಬೇಡ

High Court: ಜ. 30ರ ವರೆಗೆ ಎಚ್‌ಡಿಕೆ ಮೇಲೆ ಬಲವಂತದ ಕ್ರಮ ಬೇಡ

Prajwal Revanna ವಿರುದ್ಧ ಸದ್ಯ ಆರೋಪ ನಿಗದಿ ಮಾಡದಂತೆ ಸೂಚನೆ

Prajwal Revanna ವಿರುದ್ಧ ಸದ್ಯ ಆರೋಪ ನಿಗದಿ ಮಾಡದಂತೆ ಸೂಚನೆ

1-jaya

Legend; ಬಹುಭಾಷಾ ಪ್ರಖ್ಯಾತ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್ ವಿಧಿವಶ

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

1-bel

Nagaland; ವಾಹನ ಕಂದಕಕ್ಕೆ ಬಿದ್ದು ಬೆಳಗಾವಿ ಯೋಧ ಹುತಾತ್ಮ

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

High Court: ಜ. 30ರ ವರೆಗೆ ಎಚ್‌ಡಿಕೆ ಮೇಲೆ ಬಲವಂತದ ಕ್ರಮ ಬೇಡ

High Court: ಜ. 30ರ ವರೆಗೆ ಎಚ್‌ಡಿಕೆ ಮೇಲೆ ಬಲವಂತದ ಕ್ರಮ ಬೇಡ

Prajwal Revanna ವಿರುದ್ಧ ಸದ್ಯ ಆರೋಪ ನಿಗದಿ ಮಾಡದಂತೆ ಸೂಚನೆ

Prajwal Revanna ವಿರುದ್ಧ ಸದ್ಯ ಆರೋಪ ನಿಗದಿ ಮಾಡದಂತೆ ಸೂಚನೆ

1-jaya

Legend; ಬಹುಭಾಷಾ ಪ್ರಖ್ಯಾತ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್ ವಿಧಿವಶ

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

1-bel

Nagaland; ವಾಹನ ಕಂದಕಕ್ಕೆ ಬಿದ್ದು ಬೆಳಗಾವಿ ಯೋಧ ಹುತಾತ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.