ಟಿಕೆಟ್ ಮೇಲೆ ಮತದಾನ ಜಾಗೃತಿ ಸಂದೇಶ
Team Udayavani, Apr 22, 2018, 12:21 PM IST
ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಶನಿವಾರ ಪ್ರಯಾಣಿಕರಿಗೆ ಅಚ್ಚರಿ ಕಾದಿತ್ತು. ಬಸ್ ಏರಿದ ತಕ್ಷಣ ನಿರ್ವಾಹಕರು ಟಿಕೆಟ್ ಕೈಗಿಟ್ಟರು. ಅದರಲ್ಲಿ ಎಲ್ಲಿಂದ ಎಲ್ಲಿಗೆ ಪ್ರಯಾಣ ಮತ್ತು ಪ್ರಯಾಣ ದರ ಎಷ್ಟು ಎಂಬುದರ ಜತೆಗೆ ಮತದಾನದ ಹಕ್ಕು ನೆನಪಿಸುವ ಸಂದೇಶವೂ ಇತ್ತು.
ಹೌದು, ಸಾಮಾಜಿಕ ಜಾಲತಾಣ, ಮೊಬೈಲ್ ಸಂದೇಶ, ಜಾಹಿರಾತುಗಳ ನಡುವೆ ಕೆಎಸ್‌ಆರ್‌ಟಿಸಿ ಕೂಡ ಸದ್ದಿಲ್ಲದೆ ಮತದಾನ ಜಾಗೃತಿ ಅಭಿಯಾನ ಆರಂಭಿಸಿದೆ. ಶನಿವಾರದಿಂದ ಬಸ್‌ನಲ್ಲಿ ಪ್ರಯಾಣಿಸುವ ಪ್ರತಿ ಪ್ರಯಾಣಿಕರ ಟಿಕೆಟ್‌ನ ಕೆಳಭಾಗದಲ್ಲಿ “ಮೇ 12ರಂದು ಮತದಾನ ಮಾಡುವ ಮೂಲಕ ನಿಮ್ಮ ಹಕ್ಕನ್ನು ಚಲಾಯಿಸಿ’ ಎಂದು ಸೂಚಿಸಲಾಗಿದೆ.
ನಿತ್ಯ ಕೆಎಸ್‌ಆರ್‌ಟಿಸಿ 8,800 ಬಸ್‌ಗಳು ಕಾರ್ಯಾಚರಣೆ ಮಾಡುತ್ತಿದ್ದು, ಅದರಲ್ಲಿ 28 ಲಕ್ಷ ಜನ ಪ್ರಯಾಣಿಸುತ್ತಾರೆ. ಈ ಪೈಕಿ ಶೇ. 20ರಷ್ಟು ಇ-ಬುಕಿಂಗ್ ಮೂಲಕ ಟಿಕೆಟ್ ಕಾಯ್ದಿರಿಸಲಾಗುತ್ತದೆ. ಉಳಿದ 22 ಲಕ್ಷ ಪ್ರಯಾಣಿಕರು ನೇರವಾಗಿ ನಿರ್ವಾಹಕರಿಂದ ಟಿಕೆಟ್ ಪಡೆದು ಪ್ರಯಾಣಿಸುತ್ತಾರೆ. ಅವರೆಲ್ಲರಿಗೂ ಈ ಜಾಗೃತಿ ಸಂದೇಶ ಮುದ್ರಿತ ರೂಪದಲ್ಲಿ ತಲುಪಲಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಬಿಎಂಟಿಸಿ ಬಸ್‌ಗಳಲ್ಲೂ ಅಭಿಯಾನ?: ಕೆಎಸ್‌ಆರ್‌ಟಿಸಿ ಜಾಗೃತಿ ಅಭಿಯಾನದ ಬೆನ್ನಲ್ಲೇ ಬಿಎಂಟಿಸಿ ಕೂಡ ಈ ನಿಟ್ಟಿನಲ್ಲಿ ಚಿಂತನೆ ನಡೆಸಿದ್ದು, ಬಸ್‌ಗಳಲ್ಲಿ ಮತದಾನದ ಅರಿವು ಮೂಡಿಸುವ ಸಂದೇಶಗಳನ್ನು ಬಿತ್ತರಿಸಲು ಉದ್ದೇಶಿಸಿದೆ. ಬಹುತೇಕ ಬಸ್‌ಗಳ ಒಳಭಾಗದಲ್ಲಿ ಎಲೆಕ್ಟ್ರಾನಿಕ್ ಫಲಕಗಳು ಇವೆ.
ಅವುಗಳಲ್ಲಿ ಪ್ರಯಾಣಿಕರಿಗೆ ಮತದಾನದ ಮಹತ್ವ, ಚುನಾವಣೆ ದಿನ ಮತಗಟ್ಟೆಗೆ ತೆರಳಿ ಹಕ್ಕು ಚಲಾಯಿಸುವಂತೆ ಮನವಿ ಮಾಡುವ ಸಂದೇಶಗಳನ್ನು ನಿರಂತರವಾಗಿ ಬಿತ್ತರಿಸಲು ಉದ್ದೇಶಿಸಿದೆ. ಬಿಎಂಟಿಸಿ ವ್ಯಾಪ್ತಿಯಲ್ಲಿ ಸುಮಾರು 6 ಸಾವಿರ ಬಸ್‌ಗಳಿದ್ದು, ಆ ಪೈಕಿ ಗುತ್ತಿಗೆ ನೀಡಿರುವುದನ್ನು ಹೊರತುಪಡಿಸಿ ಉಳಿದ ಬಸ್‌ಗಳಲ್ಲಿ ಅಳವಡಿಕೆಗೆ ಚಿಂತನೆ ನಡೆದಿದೆ.
ನಗರದ ಬಸ್‌ಗಳಲ್ಲಿ ಪ್ರಯಾಣಿಕರು ತುಂಬಾ ಸಮಯ ಕಳೆಯುವುದರಿಂದ ಇದು ಪರಿಣಾಮಕಾರಿಯೂ ಆಗಲಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ. ಪೊನ್ನುರಾಜ್ ಮಾಹಿತಿ ನೀಡಿದರು. ಟಿಕೆಟ್‌ಗಳಲ್ಲಿ ಈ ರೀತಿ ಮುದ್ರಿಸುವುದು ಕಷ್ಟ. ಯಾಕೆಂದರೆ, ಬಿಎಂಟಿಸಿ ಟಿಕೆಟ್ ವಿತರಣಾ ಯಂತ್ರ ಮತ್ತು ಸ್ಮಾರ್ಟ್‌ಕಾರ್ಡ್ ಹಾಗೂ ಪೂರ್ವಮುದ್ರಿತ ದಿನದ ಪಾಸುಗಳು ಸೇರಿದಂತೆ ಎಲ್ಲ ಕಡೆಗೂ ಬದಲಾವಣೆ ಮಾಡಬೇಕಾಗುತ್ತದೆ. ಇದಕ್ಕೆ ಸಾಕಷ್ಟು ಸಮಯ ಹಿಡಿಯುತ್ತದೆ. ಆದ್ದರಿಂದ ಈ ಆಲೋಚನೆ ಕೈಬಿಡಲಾಗಿದೆ ಎಂದೂ ಅವರು ಸ್ಪಷ್ಟಪಡಿಸಿದರು.
ಸೂಚನೆ ಬಂದರೆ ಪರಿಶೀಲನೆ: ನಗರದಲ್ಲಿ ಸಂಚರಿಸುವ ಉಪನಗರ ರೈಲುಗಳಲ್ಲಿ ಸದ್ಯಕ್ಕೆ ಮತದಾನ ಜಾಗೃತಿ ಮೂಡಿಸುವ ಅಭಿಯಾನದ ಬಗ್ಗೆ ಯಾವುದೇ ಆಲೋಚನೆಗಳಿಲ್ಲ. ಆದರೆ ಚುನಾವಣಾ ಆಯೋಗದಿಂದ ಸೂಚನೆ ಬಂದರೆ, ಈ ನಿಟ್ಟಿನಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ನೈರುತ್ಯ ರೈಲ್ವೆ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಎನ್.ಎಸ್. ಶ್ರೀಧರಮೂರ್ತಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.