ವಿಪ ಸದಸ್ಯ ರಘು ಆಚಾರ್ ರಾಜೀನಾಮೆ ಬೆದರಿಕೆ
Team Udayavani, Oct 9, 2018, 6:00 AM IST
ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ತಮ್ಮ ಕ್ಷೇತ್ರಕ್ಕೆ ಅನುದಾನ ದೊರೆಯುತ್ತಿಲ್ಲ, ಮುಖ್ಯಮಂತ್ರಿ ತಮ್ಮ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ನೀಡಿ ತಮ್ಮ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಲು ವಿಧಾನ ಪರಿಷತ್ ಸದಸ್ಯ ರಘು ಆಚಾರ್ ಮುಂದಾಗಿದ್ದಾರೆ.
ಈಗಾಗಲೇ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಗಮನಕ್ಕೆ ಈ ವಿಷಯ ತರಲಾಗಿದ್ದು, ಅವರು ರಘು ಆಚಾರ್ ಅವರನ್ನು ಮಂಗಳವಾರ ಕರೆದು ಮಾತನಾಡುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಚಿತ್ರದುರ್ಗ ಜಿಲ್ಲೆಗೆ ವೈದ್ಯಕೀಯ ಕಾಲೇಜ್ ಘೋಷಣೆ ಮಾಡಲಾಗಿತ್ತು. ಅದು ಆರಂಭವಾಗುವ ಮೊದಲೇ ರಾಮನಗರಕ್ಕೆ ವೈದ್ಯಕೀಯ ಕಾಲೇಜು ಘೋಷಣೆ ಮಾಡಲಾಗಿದ್ದು, ಚಿತ್ರದುರ್ಗದ ವೈದ್ಯಕೀಯ ಕಾಲೇಜು ಸ್ಥಾಪನೆ ನಿರ್ಲಕ್ಷಿಸಲಾಗಿದೆ ಎಂದು ರಘು ಆಚಾರ್ ಆರೋಪಿಸಿದ್ದಾರೆ.
ಈ ಕುರಿತು ಉದಯವಾಣಿಯೊಂದಿಗೆ ಮಾತನಾಡಿರುವ ರಘು ಆಚಾರ್ ಅವರು, ಶಾಸಕರ ಮನವಿಗೆ ಸ್ಪಂದಿಸಲು ಮುಖ್ಯಮಂತ್ರಿಗೆ ಸಮಯ ಇಲ್ಲದಿದ್ದರೆ, ಅಂತಹ ಸರ್ಕಾರದಿಂದ ಏನೂ ಪ್ರಯೋಜನವಾಗದು. ಅಲ್ಲದೇ ಚಿತ್ರದುರ್ಗದ ಜನತೆ ಆಶೀರ್ವಾದದಿಂದ ಗೆದ್ದು ಬಂದಿದ್ದೇನೆ. ನಾನು ಯಾರ ಋಣದಲ್ಲಿಯೂ ಇಲ್ಲ. ಕ್ಷೇತ್ರದ ಜನ ಬಯಸಿದರೆ, ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಆದರೆ, ಪಕ್ಷದ ಮೂಲಗಳ ಪ್ರಕಾರ ವಿಧಾನ ಪರಿಷತ್‌ನಲ್ಲಿ ಸರ್ಕಾರದ ಮುಖ್ಯ ಸಚೇತಕ ಹುದ್ದೆ ಪಡೆಯಲು ಈ ರೀತಿಯ ಒತ್ತಡ ತಂತ್ರ ಅನುಸರಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.