ವಿವಿಗಳಲ್ಲಿ ಜಾತಿ, ಉಪಜಾತಿ, ಧರ್ಮದ ಮೇಲಾಟ: ಬರಗೂರು
Team Udayavani, Jun 13, 2019, 3:00 AM IST
ಬೆಂಗಳೂರು: ವಿಶ್ವವಿದ್ಯಾಲಯಗಳಲ್ಲಿ ಜಾತಿ, ಉಪಜಾತಿಗಳ ಗುಂಪುಗಾರಿಕೆ, ಧರ್ಮ ಆಧಾರದಲ್ಲಿ ದ್ವೇಷದ ವಿಷಬೀಜ ಬಿತ್ತಲಾಗುತ್ತಿದೆ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಕಳವಳ ವ್ಯಕ್ತಪಡಿಸಿದರು.
ಬೆಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಡಾ. ಸುಂದರಾಜ್ ಅರಸ್ ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಅವರ ಅಭಿಮಾನಿ ಬಳಗ ಹಮ್ಮಿಕೊಂಡಿದ್ದ ಸ್ನೇಹಜೀವಿ ಅರಸು ಅಭಿನಂದನ ಗ್ರಂಥ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿವಿಯಲ್ಲಿ ನಡೆಯುವ ಜಾತಿ, ಉಪಜಾತಿಗಳ ಗುಂಪುಗಾರಿಕೆ, ಧರ್ಮದ ಆಧಾರದಲ್ಲಿ ದ್ವೇಷದ ವಿಷಬೀಜ ಬಿತ್ತುತ್ತಿರುವುದು ಸಮಾಜದ ಮೇಲೆ ಪರಿಣಾಮ ಬೀರುವಂತೆ, ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯಗಳೆಲ್ಲವೂ ವಿಶ್ವವಿದ್ಯಾಲಯಗಳಲ್ಲೂ ಬಿಂಬಿತವಾಗುತ್ತಿದೆ ಎಂದು ಬೇಸರಗೊಂಡರು.
ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ ಮಾತನಾಡಿ, 60-70ನೇ ದಶಕದಲ್ಲಿ ವಿದ್ಯಾಭ್ಯಾಸ ಮಾಡಿದ ಗ್ರಾಮೀಣ ಭಾಗದ ಬಹುತೇಕ ವಿದ್ಯಾರ್ಥಿಗಳು ಸಾಕಷ್ಟು ಕಷ್ಟಪಟ್ಟು ಜೀವನದಲ್ಲಿ ಉನ್ನತಿ ಸಾಧಿಸಿದ್ದಾರೆ. ಇಂತಹ ವಿದ್ಯಾರ್ಥಿಗಳ ಸಾಲಿನಲ್ಲಿ ಸುಂದರ್‌ರಾಜ್ ಅರಸ್ ಸೇರುತ್ತಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇವರ ಬದುಕು ಮಾರ್ಗದರ್ಶನವಾಗಲಿ ಎಂದು ಹೇಳಿದರು.
ಸಿಕ್ಕ ಅವಕಾಶಗಳನ್ನು ಸರಿಯಾಗಿ ಉಪಯೋಗಿಸಿಕೊಳ್ಳುವವರು ಜೀವನದಲ್ಲಿ ಯಶಸ್ಸು ಸಾಧಿಸುತ್ತಾರೆ. ಸುಂದರ್‌ರಾಜ್ ಅವರು ಸಿಕ್ಕ ಅವಕಾಶವನ್ನು ಚೆನ್ನಾಗಿ ಉಪಯೋಗಿಸಿಕೊಂಡು ವಿಶ್ವವಿದ್ಯಾಲಯ ಹಾಗೂ ವಿದ್ಯಾರ್ಥಿಗಳ ಶ್ರೇಯಾಭಿವೃದ್ಧಿಗೆ ಶ್ರಮಿಸಿದ್ದಾರೆ.
ನಾವಿಬ್ಬರೂ ಜತೆಯಾಗಿ ಶಾಲಾ ಶಿಕ್ಷಣ ಮುಗಿಸಿದ್ದೇವೆ. ಕಾಲೇಜು ಶಿಕ್ಷಣದ ಸಂದರ್ಭದಲ್ಲಿ ಆಗಾಗ ಹಾಸ್ಟೆಲ್‌ನಲ್ಲಿ ಒಟ್ಟು ಸೇರುತ್ತಿದ್ದೇವು ಎಂಬುದನ್ನು ನೆನಪಿಸಿಕೊಂಡರು. ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಬೆಂವಿವಿ ಕುಲಸಚಿವ ಪ್ರೊ.ಬಿ.ಕೆ.ರವಿ, ಸುಂದರ್ ರಾಜ್ ಅರಸ್ ಅಭಿಮಾನ ಬಳಗದ ಗೌರವಾಧ್ಯಕ್ಷ ವೈದ್ಯನಾಥ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.