ಸಮಸ್ಯೆ ಪರಿಹಾರಕ್ಕಾಗಿ ವಾಕಥಾನ್
Team Udayavani, Dec 4, 2017, 12:37 PM IST
ಬೆಂಗಳೂರು: ಮಳೆಯಿಂದ ಹಾನಿಗೊಳಗಾದ ಎಚ್‌ಎಸ್‌ಆರ್ ಬಡಾವಣೆಯಲ್ಲಿ ಮುಂದೆ ಇಂತಹ ಸಮಸ್ಯೆಯಾಗದಂತೆ ಶಾಶ್ವತ ಪರಿಹಾರ ಒದಗಿಸುವಂತೆ ಒತ್ತಾಯಿಸಿ ನಾಗರಿಕ ಕ್ಷೇಮಾಭಿವೃದ್ಧಿ ಸಂಘಗಳು ಹಮ್ಮಿಕೊಂಡಿದ್ದ ವಾಕಥಾನ್‌ಗೆ ಮೇಯರ್ ಆರ್.ಸಂಪತ್‌ರಾಜ್ ಚಾಲನೆ ನೀಡಿದರು.
ಈ ವೇಳೆ ನಾಗರಿಕರು ಮಳೆ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಿ, ರಸ್ತೆ-ಒಳಚರಂಡಿ ದುರಸ್ತಿ ಕಾರ್ಯ, ಮೂಲಸೌಕರ್ಯ, ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಎನ್ನುವಂತಹ ಫಲಕಗಳನ್ನು ಪ್ರದರ್ಶಿಸಿದರು.
ವಾಕಥಾನ್ ಉದ್ದೇಶಿಸಿ ಮಾತನಾಡಿದ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ, ಎಚ್‌ಎಸ್‌ಆರ್ ಬಡಾವಣೆ ಮಳೆಯಿಂದ ಅನಾಹುತಕ್ಕೆ ಸಿಲುಕಬೇಕಾದರೆ, ಕಳೆದ ಹತ್ತು ವರ್ಷಗಳಿಂದ ಪಾಲಿಕೆಯಲ್ಲಿ ಆಡಳಿತ ನಡೆಸಿದ ಸರ್ಕಾರಗಳೇ ಕಾರಣವಾಗಿವೆ. ಈಗಲಾದರೂ ಪಾಲಿಕೆಯ ಆಡಳಿತ ಎಚ್ಚೆತ್ತು ಸೂಕ್ತ ಕ್ರಮ ಜರುಗಿಸಬೇಕು ಎಂದು ಹೇಳಿದರು.
ಬಳಿಕ ಮೇಯರ್ ಮಾತನಾಡಿ, ಎಚ್‌ಎಸ್‌ಆರ್ ಬಡಾವಣೆಯ ಹಲವಾರು ಭಾಗಗಳು ಮಳೆಯಿಂದ ಹಾನಿಗೆ ಒಳಗಾಗಿವೆ. ಇದಕ್ಕೆ ಶಾಶ್ವತ ಪರಿಹಾರಕ್ಕೆ ಚಿಂತಿಸಲಾಗುವುದು. ಹಾನಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದರು. ಈ ವೇಳೆ ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ, ಶಾಸಕ ಸತೀಶ್ ರೆಡ್ಡಿ, ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಮೇಜರ್ ಗಿರೀಶ್ ರಾಷ್ಟ್ರ ಸೇವೆ ಪ್ರತಿಯೊಬ್ಬರಿಗೂ ಮಾದರಿ: ಸಾಡೇಹಳ್ಳಿಯಲ್ಲಿ ದಿವಂಗತ ಮೇಜರ್ ಅಕ್ಷಯ್ ಗಿರೀಶ್ ಸ್ಮರಣಾರ್ಥ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರ ಭಾವಚಿತ್ರಕ್ಕೆ ಮೇಯರ್ ಸಂಪತ್‌ರಾಜ್ ಪುಷ್ಪನಮನ ಸಲ್ಲಿಸಿದರು.
ಯುವಕರು ಗಿರೀಶ್‌ರಂತವಹರನ್ನು ಮಾದರಿಯಾಗಿಟ್ಟುಕೊಂಡು ಗುರಿ ಸಾಧನೆಗೆ ಮುಂದಾಗಬೇಕು ಎಂದು ತಿಳಿಸಿದರು. ಈಗಾಗಲೇ ಬಿಬಿಎಂಪಿ ವತಿಯಿಂದ ಗಿರೀಶ್ ಹೆಸರನ್ನು ರಸ್ತೆಯೊಂದಕ್ಕೆ ನಾಮಕರಣ ಮಾಡಲು ಚಿಂತಿಸಿದ್ದು, ಸರ್ಕಾರದ ಮಟ್ಟದಲ್ಲಿ ಅನುಮತಿ ಪಡೆದು ಶೀಘ್ರ ನಾಮಕರಣ ಮಾಡಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.