ಸಾ.ರಾ.ಗೋವಿಂದುಗೆ ಚುನಾವಣೆಗೆ ಸ್ಪರ್ಧಿಸುವ ಆಸೆ
Team Udayavani, Mar 30, 2018, 6:25 AM IST
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಹಾಗೂ ಕನ್ನಡ ಪರ ಹೋರಾಟಗಾರ ಸಾ.ರಾ.ಗೋವಿಂದು ಅವರು ವಿಧಾನಸಭಾ ಚುನಾವಣೆಯಲ್ಲಿ ರಾಜಾಜಿನಗರ ಕ್ಷೇತ್ರದಿಂದ ಕಣಕ್ಕಿಳಿಯಲು ಬಯಸಿದ್ದು ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಕಳೆದ ಕೆಲ ದಿನಗಳಿಂದಲೂ ಸಾ.ರಾ.ಗೋವಿಂದು ಅವರು ರಾಜಕೀಯ ಪ್ರವೇಶಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿತ್ತಾದರೂ ಗುರುವಾರ ಖುದ್ದು ಸಾ.ರಾ.ಗೋವಿಂದು ಅವರೇ ಚುನಾವಣಾ ಕಣಕ್ಕೆ ಇಳಿಯುವ ಬಗ್ಗೆ ಸ್ಪಷ್ಟಪಡಿಸಿದ್ದು, ರಾಜಾಜಿನಗರದಿಂದ ಸ್ಪರ್ಧೆಗಿಳಿಯುವುದಾಗಿ ತಿಳಿಸಿದ್ದಾರೆ.
ಆದರೆ, ರಾಜಾಜಿನಗರ ಕ್ಷೇತ್ರದಿಂದ ಜೆಡಿಎಸ್ ಆಕಾಂಕ್ಷಿಗಳು ಹೆಚ್ಚಾಗಿದ್ದು, ಈಗಾಗಲೇ ಕೆಲವರು ಪ್ರಚಾರ ಕಾರ್ಯವನ್ನೂ ಆರಂಭಿಸಿದ್ದಾರೆ. ಹೀಗಾಗಿ, ಪಕ್ಷದ ವರಿಷ್ಠರು ಯಾರಿಗೆ ಟಿಕೆಟ್ ನೀಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.
ಈ ಬಗ್ಗೆ “ಉದಯವಾಣಿ’ಯೊಂದಿಗೆ ಮಾತನಾಡಿದ ಸಾ.ರಾ.ಗೋವಿಂದು, “ನಾನು ಯಾವ ಪಕ್ಷ ಹಾಗೂ ಯಾವ ಕ್ಷೇತ್ರದಿಂದ ಈ ಬಾರಿಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂಬ ವಿಷಯ ಬಹುತೇಕ ಅಂತಿಮವಾಗಿದೆ. ಆದರೆ, ಸಣ್ಣಪುಟ್ಟ ಸಮಸ್ಯೆಗಳಿರುವುದರಿಂದ ಈಗಲೇ ಆ ಬಗ್ಗೆ ಏನನ್ನೂ ಹೇಳಲಾರೆ. ಶುಕ್ರವಾರ ಎಲ್ಲವೂ ಅಂತಿಮವಾಗಲಿದೆ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು