ಮೌಲ್ಯಮಾಪನ ಬಹಿಷ್ಕಾರದ ಎಚ್ಚರಿಕೆ

Team Udayavani, Feb 25, 2019, 6:30 AM IST

moulya.jpg

ಬೆಂಗಳೂರು: ಮೇ 2ರಿಂದಲೇ ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲು ಹೊರಟಿರುವ ನಿರ್ಧಾರದಿಂದ ಸರ್ಕಾರ  ಕೂಡಲೇ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಮೌಲ್ಯಮಾಪನ ಬಹಿಷ್ಕಾರಕ್ಕೆ ಕರೆ ನೀಡಬೇಕಾಗುತ್ತದೆ ಎಂದು ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯಪುರ್ಲೆ, ಸಚಿವ ವೆಂಕಟರಾವ್‌ ನಾಡಗೌಡ ಎದುರೇ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜು ಉಪನ್ಯಾಸಕರ ಸಂಘ ಶಾಸಕರ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಂಘದ ನೂತನ ಜಿಲ್ಲಾ ಘಟಕದ ಪದಾಧಿಕಾರಿಗಳ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ತಿಮ್ಮಯ್ಯ ಪುರ್ಲೆ, ಸರ್ಕಾರವನ್ನು ದಿಕ್ಕು ತಪ್ಪಿಸುವ ಕೆಲಸದಲ್ಲಿ ಐಎಎಸ್‌ ಅಧಿಕಾರಿಗಳು ನಿರತರಾಗಿದ್ದಾರೆ. ಮುಖ್ಯಮಂತ್ರಿಗಳು ಈ ಅಧಿಕಾರಿಗಳ ಮಾತಿಗೆ ಮಣೆ ಹಾಕಬಾರದು ಎಂದು ಮನವಿ ಮಾಡಿದರು.

ಕಳೆದ ವರ್ಷದಿಂದಲೇ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ತರಗತಿಗಳನ್ನು ಮೇ 2ರಿಂದ ಆರಂಭಿಸಿದೆ. ಆದರೆ ಉಪನ್ಯಾಸಕರು ತರಗತಿಗೆ ಹೋದರೂ ವಿದ್ಯಾರ್ಥಿಗಳು ತರಗತಿಗೆ ಬರಲಿಲ್ಲ. ಬಹುತೇಕ ಉಪನ್ಯಾಸಕರು ಈ ಬಗ್ಗೆ ಅಪಸ್ವರ ಎತ್ತಿದ್ದು, ಖಾಸಗಿ ಸಂಸ್ಥೆಗಳಲ್ಲಿನ ಈ ವ್ಯವಸ್ಥೆಯನ್ನು ಸರ್ಕಾರ ಯಾವುದೇ ಕಾರಣಕ್ಕೂ ಸರ್ಕಾರಿ ಕಾಲೇಜುಗಳಲ್ಲಿ ಜಾರಿಗೆ ತರಬಾರದು. ಒಂದೊಮ್ಮೆ ಸರ್ಕಾರ ಇದರ ಕಾರ್ಯಗತಕ್ಕೆ ಮುಂದಾದರೆ ನ್ಯಾಯಾಲಯದ ಮೆಟ್ಟಿಲೇರುವುದಾಗಿ ಪ್ರಕಟಿಸಿದರು.

ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಈಗಾಗಲೇ ಸರ್ಕಾರ ಉಪನ್ಯಾಸಕ ವಲಯದ ಹಲವು ಸಮಸ್ಯೆಗಳಿಗೆ ಸ್ಪಂದಿಸಿದ್ದು ಇನ್ನೂ ಹಲವು ಬೇಡಿಕೆಗಳನ್ನು ಈಡೇರಿಸ ಬೇಕಾಗಿದೆ. ಕಾಲ್ಪನಿಕ ವೇತನ ಸೇರಿದಂತೆ ಹಲವು ಸೌಲಭ್ಯಗಳು ಉಪನ್ಯಾಸಕರ ವಲಯಕ್ಕೆ ದೊರಕಿಲ್ಲ. ಸರ್ಕಾರ  ಕೂಡಲೇ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಬೇಡಿಕೆಗಳ ಈಡೇರಿಕೆಗೆ ಮುಂದಾಗಬೇಕು. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಗಳು ಹಿರಿಯ ಅಧಿಕಾರಿಗಳ ಮಾತನ್ನು ಕೇಳಬಾರದು ಎಂದು ಮನವಿ ಮಾಡಿದರು.

 ಸಂಘದ ಚುನಾವಣೆಯನ್ನು ಬಹಳಷ್ಟು ಪಾರದರ್ಶಕತೆಯಿಂದ ನಡೆಸಲಾಗಿದೆ. ತಾಲೂಕು ಮಟ್ಟದವರೆಗೂ ಚುನಾವಣೆ ವ್ಯವಸ್ಥೆಯನ್ನು ವಿಸ್ತರಿಸಿರುವುದು ಈ ಬಾರಿಯ ವಿಶೇಷವಾಗಿದ್ದು, ಸಂಘವನ್ನು ಮತ್ತಷ್ಟು ಗಟ್ಟಿಗೊಳಿಸಿ ಉಪನ್ಯಾಸಕರ ಹೋರಾಟಗಳಿಗೆ ನ್ಯಾಯ ನೀಡುವುದಾಗಿ ಹೇಳಿದರು. ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌.ಭೋಜೇಗೌಡ ಮಾತನಾಡಿ, ಉಪನ್ಯಾಸಕರ ಹಲವು ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ.

ಮೇ ತಿಂಗಳಲ್ಲಿ ದ್ವಿತೀಯ ಪಿಯುಸಿ ತರಗತಿಗಳನ್ನು ಪ್ರಾರಂಭಿಸುವ ಬಗೆಗಿನ ಸಾಧಕ-ಬಾಧಕಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ಈಗಾಗಲೇ ಮನವರಿಕೆ ಮಾಡಿಕೊಡಲಾಗಿದೆ. ಉಪನ್ಯಾಸಕರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಿ ಬಗೆಹರಿಸಲಿದೆ ಎಂಬ ಭರವಸೆ ನೀಡಿದರು. ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಕಾರ್ಯದರ್ಶಿ ಎಸ್‌.ಆರ್‌.ವೆಂಕಟೇಶ್‌, ಪ್ರಧಾನ ಕಾರ್ಯದರ್ಶಿ ಎ.ಎಚ್‌.ಲಿಂಗೇಗೌಡ, ಕೋಶಾಧ್ಯಕ್ಷ ಜಯಣ್ಣ ಉಪಸ್ಥಿತರಿದ್ದರು.

ಬಹಿಷ್ಕಾರ ಪರಿಹಾರವಲ್ಲ: ಯಾವುದೇ ಸಮಸ್ಯೆಗಳಿಗೆ ಬಹಿಷ್ಕಾರ ಒಂದೇ ಪರಿಹಾರವಲ್ಲ. ಸಮಸ್ಯೆಗಳು ಹೇಗೆ ಹುಟ್ಟಿಕೊಳ್ಳುತ್ತವೆಯೋ, ಹಾಗೆಯೇ ಅದಕ್ಕೆ ಪರಿಹಾರ ಕೂಡ ಇರುತ್ತದೆ. ಯಾವುದೇ ಸಮಸ್ಯೆಗಳಿರಲಿ ಅವುಗಳನ್ನು ಸರ್ಕಾರದ ಗಮನಕ್ಕೆ ತಂದು ಬಗೆಹರಿಸಿಕೊಳ್ಳ ಬೇಕು. ನ್ಯಾಯಯುತ ಬೇಡಿಕೆಗಳಿಗೆ ಸರ್ಕಾರ ಮನ್ನಣೆ ನೀಡಲಿದೆ ಎಂದು ಮೀನುಗಾರಿಕೆ ಸಚಿವ ವೆಂಕಟರಾವ್‌ ನಾಡಗೌಡ ಹೇಳಿದರು.

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.