ಆಸ್ತಿಗಳ ಜಪ್ತಿಗೆ ವಾರೆಂಟ್‌!

Team Udayavani, Dec 14, 2018, 11:24 AM IST

astigala.jpg

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಆಸ್ತಿ ಮಾಲೀಕರು ಹಾಗೂ ಅವರ ಸಹಾಯಕ್ಕೆ ನಿಂತಿರುವ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲು ಮುಂದಾಗಿರುವ ಬಿಬಿಎಂಪಿ, ತೆರಿಗೆ ಪಾವತಿಸದ ಆಸ್ತಿಗಳಿಗೆ ಜಪ್ತಿ ವಾರೆಂಟ್‌ ಜಾರಿಗೊಳಿಸುವಂತೆ ಆದೇಶಿಸಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 19.50 ಲಕ್ಷಕ್ಕೂ ಹೆಚ್ಚಿನ ಆಸ್ತಿಗಳಿವೆ ಎಂಬುದು ಜಿಐಎಸ್‌ ಪದ್ಧತಿಯಿಂದ ತಿಳಿದುಬಂದಿದೆ. ಆದರೆ, ಎಲ್ಲ ಆಸ್ತಿಗಳಿಗೆ ಪಾಲಿಕೆಗೆ ತೆರಿಗೆ ಸಂಗ್ರಹವಾಗುತ್ತಿಲ್ಲ. ತೆರಿಗೆ ಪಾವತಿಸುವಂತೆ ಹಲವಾರು ಬಾರಿ ನೋಟಿಸ್‌ ಜಾರಿಗೊಳಿಸಿದರೂ, ಆಸ್ತಿದಾರರು ಮಾತ್ರ ತೆರಿಗೆ ಪಾವತಿಗೆ ಮುಂದಾಗುತ್ತಿಲ್ಲ. ಜತೆಗೆ ಪಾಲಿಕೆಯ ಅಧಿಕಾರಿಗಳು ಸಹ ಅಂತಹವರ ವಿರುದ್ಧ ಕ್ರಮಕ್ಕೆ ಮುಂದಾಗದಿರುವುದು ಕಂಡುಬಂದಿದೆ. 

ಆ ಹಿನ್ನೆಲೆಯಲ್ಲಿ ಇತ್ತೀಚೆಗೆ ವಲಯ ಜಂಟಿ ಆಯುಕ್ತರು ಹಾಗೂ ಕಂದಾಯ ವಿಭಾಗದ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿರುವ ಕಂದಾಯ ವಿಭಾಗದ ಜಂಟಿ ಆಯುಕ್ತರು, ನೋಟಿಸ್‌ ಜಾರಿಗೊಳಿಸಿದ ನಂತರವೂ ತೆರಿಗೆ ಪಾವತಿಗೆ ಮುಂದಾಗದ ಆಸ್ತಿಗಳಿಗೆ ಜಪ್ತಿ ವಾರೆಂಟ್‌ ನೀಡಬೇಕು. ಒಂದೊಮ್ಮೆ ಅಧಿಕಾರಿಗಳು ತೆರಿಗೆ ಸಂಗ್ರಹಕ್ಕೆ ಮುಂದಾಗದಿದ್ದರೆ ಅಂತಹವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. 

ಸೂಚಿಸಿದರೂ ಕ್ರಮವಿಲ್ಲ: ಪಾಲಿಕೆಗೆ ಹೆಚ್ಚಿನ ತೆರಿಗೆ ಬಾಕಿ ಉಳಿಸಿಕೊಂಡಿರುವ ಆಸ್ತಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಹಲವಾರು ಸಭೆಗಳಲ್ಲಿ ಸೂಚನೆ ನೀಡಲಾಗಿದೆ. ಉಪವಿಭಾಗದ ಮಟ್ಟದಲ್ಲಿ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಹಾಗೂ ಬಾಕಿದಾರರಿಗೆ ಸಹಾಯ ಮಾಡುವುದು ಕಂಡುಬಂದಿದ್ದು, ತೆರಿಗೆ ಬಾಕಿದಾರರಿಗೆ ಜಪ್ತಿ ವಾರೆಂಟ್‌ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಆಯುಕ್ತರಿಗೆ ಶಿಫಾರಸ್ಸು ಮಾಡುವುದಾಗಿ ಆತಂರಿಕ ಕಚೇರಿ ಟಿಪ್ಪಣಿಯಲ್ಲಿ ಎಚ್ಚರಿಕೆ ನೀಡಿಲಾಗಿದೆ. 

ವಲಯದ 100 ಆಸ್ತಿಗಳಿಗೆ ಜಪ್ತಿ ವಾರೆಂಟ್‌: ಹಲವಾರು ವರ್ಷಗಳಿಂದ ಪಾಲಿಕೆಗೆ ಅತಿಹೆಚ್ಚು ತೆರಿಗೆ ಬಾಕಿ ಉಳಿಸಿಕೊಂಡಿರುವ ಹಾಗೂ ಈಗಾಗಲೇ ಕಾರಣ ಕೇಳಿ ನೋಟಿಸ್‌ ನೀಡಿರುವ ಪ್ರಮುಖ 100 ಆಸ್ತಿಗಳನ್ನು ವಲಯವಾರು ಪಟ್ಟಿ ಮಾಡಿ ಕೂಡಲೇ ಜಪ್ತಿ ವಾರೆಂಟ್‌ ಜಾರಿಗೊಳಿಸಬೇಕು. ಜತೆಗೆ ಅವರ ವಿರುದ್ಧ ಕೈಗೊಂಡ ಕ್ರಮಗಳ ಕುರಿತು ಮಾಹಿತಿಯನ್ನು ಕೇಂದ್ರ ಕಚೇರಿಗೆ ವಲಯ ಜಂಟಿ ಆಯುಕ್ತರುಗಳ ಸಹಿಯೊಂದಿಗೆ ಕಳುಹಿಸುವಂತೆ ಸೂಚನೆ ನೀಡಲಾಗಿದೆ.

ಗುರಿ ಮುಟ್ಟುವ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ: ಪಾಲಿಕೆಯಿಂದ ನೀಡಲಾಗಿದ ಆಸ್ತಿ ತೆರಿಗೆ ಸಂಗ್ರಹ ಗುರಿಯನ್ನು ಶೇ.100 ಸಾಧನೆ ಮಾಡುವ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಲು ಕ್ರಮಕೈಗೊಳ್ಳಬೇಕೆಂದು ಮೇಯರ್‌ಗೆ ಬಿಬಿಎಂಪಿ ಆಡಳಿತ ಪಕ್ಷ ನಾಯಕ ಎಂ.ಶಿವರಾಜು ಅವರು ಪತ್ರ ಬರೆದಿದ್ದಾರೆ. 

ಆಸ್ತಿ ತೆರಿಗೆ ಪಾಲಿಕೆಯ ಪ್ರಮುಖ ಆದಾಯದ ಮೂಲವಾಗಿದೆ. ಅದರೆ, ಅಧಿಕಾರಿಗಳು ಸಮರ್ಪಕವಾಗಿ ತೆರಿಗೆ ಸಂಗ್ರಹ ಮಾಡದ ಹಿನ್ನೆಲೆಯಲ್ಲಿ ಸಂಪನ್ಮೂಲ ಕ್ರೂಢೀಕರಣದ ಕಷ್ಟವಾಗುತ್ತಿದೆ. ಹೀಗಾಗಿ ತೆರಿಗೆ ಸಂಗ್ರಹಿಸುವ ಕಂದಾಯ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ನೀಡುವುದರಿಂದ ಅವರಿಗೂ ತೆರಿಗೆ ಸಂಗ್ರಹಿಸಲು ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ಉಲ್ಲೇಖೀಸಿದ್ದಾರೆ. 

ಮೇಯರ್‌ ಅವರ ಅಧ್ಯಕ್ಷತೆಯಲ್ಲಿ ವಲಯವಾರು ಕಂದಾಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತೆರಿಗೆ ಹೆಚ್ಚಳಕ್ಕೆ ಪ್ರಯತ್ನಿಸಲಾಗುತ್ತಿದೆ. ಜತೆಗೆ ಹೆಚ್ಚಿನ ತೆರಿಗೆ ಸಂಗ್ರಹ ಮಾಡುವಂತಹ ಅಧಿಕಾರಿಗಳಿಗೆ ಕೆಂಪೇಗೌಡ ಜಯಂತಿ ವೇಲೆ ಉತ್ತಮ ನೌಕರ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಇಂತಹ ಕ್ರಮಗಳಿಗೆ ಅಧಿಕಾರಿಗಳಿಗೂ ಹೆಚ್ಚಿನ ತೆರಿಗೆ ಸಂಗ್ರಹಿಸಬೇಕೆಂಬ ಮನೋಭಾವನೆ ಬರುವುದರಿಂದ ವಾರ್ಡ್‌ಗಳಲ್ಲಿ ಶೇ.100 ತೆರಿಗೆ ಸಂಗ್ರಹಿಸುವ ಅಧಿಕಾರಿಗಳಿಗೂ ಪ್ರಶಂಸನಾ ಪತ್ರ ನೀಡುವುದಾಗಿ ಆಯುಕ್ತರ ಮೂಲಕ ಸುತ್ತೋಲೆ ಹೊರಡಿಸಬೇಕು ಎಂದು ಮನವಿ ಮಾಡಿದ್ದಾರೆ.

ಬಾಕಿದಾರರ ಮೇಲೆ ಅಧಿಕಾರಿಗಳಿಗೆ ಪ್ರೀತಿ: ಕೆಎಂಸಿ ಕಾಯ್ದೆಯಂತೆ ಪಾಲಿಕೆಗೆ ತೆರಿಗೆ ಬಾಕಿ ಉಳಿಸಿಕೊಂಡಿರುವ ಆಸ್ತಿದಾರರಿಗೆ ಕಾರಣ ಕೇಳಿ ಒಂದು ಬಾರಿ ನೋಟಿಸ್‌ ಜಾರಿಗೊಳಿಸಬೇಕು. ಆದರೆ, ಪಾಲಿಕೆಯ ಅಧಿಕಾರಿಗಳು ತೆರಿಗೆ ಸಂಗ್ರಹಕ್ಕೆ ಒತ್ತು ನೀಡುವ ಬದಲಿಗೆ, ಬಾಕಿ ಉಳಿಸಿಕೊಂಡವರಿಗೆ ಎರಡು ಮೂರು ಬಾರಿ ಕಾರಣ ಕೇಳಿ ನೋಟಿಸ್‌ ನೀಡಿರುವುದು ಕಂಡುಬಂದಿದೆ.

ಆ ಹಿನ್ನೆಲೆಯಲ್ಲಿ ಒಂದು ಬಾರಿ ನೋಟಿಸ್‌ ಜಾರಿಗೊಳಿಸಿದ ನಂತರವೂ ತೆರಿಗೆ ಪಾವತಿಸದಂತಹ ಆಸ್ತಿಗಳಿಗೆ ಕೂಡಲೇ ಜಪ್ತಿ ವಾರೆಂಟ್‌ ಜಾರಿಗೊಳಿಸುವಂತೆ ಜಂಟಿ ಆಯುಕ್ತ ವೆಂಕಟಾಚಲಪತಿ ಸೂಚಿಸಿದ್ದಾರೆ. 

ಟಾಪ್ ನ್ಯೂಸ್

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RRN-Muni

Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.