3 ತಿಂಗಳಿಂದ ಬಾರದ ವೇತನವಿವಿಧೆಡೆ ತ್ಯಾಜ್ಯ ವಿಲೇವಾರಿ ಸ್ಥಗಿತ
Team Udayavani, May 3, 2018, 11:27 AM IST
ಬೆಂಗಳೂರು: ಬಿಬಿಎಂಪಿ ವತಿಯಿಂದ ಗುತ್ತಿಗೆ ಪೌರಕಾರ್ಮಿಕರಿಗೆ ಕಳೆದ ಮೂರು ತಿಂಗಳಿಂದ ಸಮರ್ಪಕವಾಗಿ ವೇತನ ಬಿಡುಗಡೆಯಾಗದ ಪರಿಣಾಮ ನಗರದ ಹಲವೆಡೆ ತ್ಯಾಜ್ಯ ವಿಲೇವಾರಿ ಸ್ಥಗಿತಗೊಂಡಿದ್ದು, ಎಲ್ಲೆಂದರಲ್ಲಿ ಕಸದ ರಾಶಿ ಸೃಷ್ಟಿಯಾಗಿದೆ.
ಬಿಬಿಎಂಪಿ ವತಿಯಿಂದ ನಗರದ 700 ಜನರಿಗೆ ಒಬ್ಬರಂತೆ ಪೌರಕಾರ್ಮಿಕರನ್ನು ನೇಮಿಸಿಕೊಳ್ಳಲಾಗಿದ್ದು, ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಆದರೆ, ಕಳೆದ 3 ತಿಂಗಳಿಂದ ಕಾರ್ಮಿಕರ ಬ್ಯಾಂಕ್ ಖಾತೆಗೆ ವೇತನ
ಜಮಾ ಆಗಿಲ್ಲ. ಇದರಿಂದಾಗಿ ಕಾರ್ಮಿಕರು ತ್ಯಾಜ್ಯ ವಿಲೇವಾರಿ ಮಾಡುತ್ತಿಲ್ಲ. ಹಲವು ವಾರ್ಡ್‌ಗಳಲ್ಲಿ ಪೌರಕಾರ್ಮಿಕರು ಮನೆ ಮನೆಯಿಂದ ತ್ಯಾಜ್ಯ ಸಂಗ್ರಹಿಸುವುದನ್ನೂ ನಿಲ್ಲಿಸಿದ್ದಾರೆ. ಇದರಿಂದಾಗಿ ನಾಗರಿಕರು ತ್ಯಾಜ್ಯವನ್ನು ರಸ್ತೆ ಬದಿ ಹಾಗೂ ನಿವೇಶನಗಳಲ್ಲಿ ಎಸೆಯುತ್ತಿದ್ದಾರೆ. ಈ ಕಸದೊಂದಿಗೆ ಮಳೆ ನೀರು ಸೇರಿ ಕೊಳೆತು ದುರ್ವಾಸನೆ ಬೀರುತ್ತಿದೆ.
ನಗರದ ಕೆ.ಆರ್.ಮಾರುಕಟ್ಟೆ, ಕಲಾಸಿಪಾಳ್ಯ, ಮೆಜೆಸ್ಟಿಕ್, ರವೀಂದ್ರ ಕಲಾಕ್ಷೇತ್ರ, ಜೆ.ಸಿ.ರಸ್ತೆ ಸೇರಿದಂತೆ ಪಾಲಿಕೆಯ
ಕೇಂದ್ರ ಕಚೇರಿಗೆ ಕೂಗಳತೆ ದೂರದ ಹಲವಾರು ಭಾಗಗಳಲ್ಲಿ ಕಪ್ಪು ಸ್ಥಳಗಳ (ಬ್ಲಾಕ್‌ಸ್ಪಾಟ್) ಸಂಖ್ಯೆ
ಹೆಚ್ಚಾಗುತ್ತಿದ್ದು, ನಗರದಲ್ಲಿ ಮತ್ತೆ ತ್ಯಾಜ್ಯ ಸಮಸ್ಯೆ ಸೃಷ್ಟಿಯಾಗುವ ಆತಂಕ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
MUST WATCH
ಹೊಸ ಸೇರ್ಪಡೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.