ಅಂಡರ್‌ಪಾಸ್‌ಗಳಲ್ಲಿ ನೀರು: ಪರದಾಡಿದ ಸವಾರರು
Team Udayavani, May 15, 2018, 12:22 PM IST
ಬೆಂಗಳೂರು: ಸೋಮವಾರ ಸುರಿದ ಭಾರಿ ಮಳೆಗೆ ನಗರದ ಪ್ರಮುಖ ಅಂಡರ್‌ಪಾಸ್‌ಗಳಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಯಿತು. ಇದರೊಂದಿಗೆ ಜೋರಾದ ಗಾಳಿಗೆ 10ಕ್ಕೂ ಹೆಚ್ಚು ಮರಗಳು ಧರೆಗುರುಳಿವೆ.
ಸೋಮವಾರ ಮಧ್ಯಾಹ್ನದಿಂದ ಸುರಿದ ಆಲಿಕಲ್ಲು ಸಹಿತ ಮಳೆಯಿಂದಾಗಿ ಓಕಳೀಪುರ, ಸ್ಯಾಂಕಿ ರಸ್ತೆ, ಕಾವೇರಿ ಚಿತ್ರಮಂದಿರ ಬಳಿ ಅಂಡರ್ ಪಾಸ್‌ಗಳು ಹಾಗೂ ಹೆಬ್ಟಾಳ ಮೇಲ್ಸೇತುವೆ ಸೇರಿದಂತೆ ಪ್ರಮುಖ ಜಂಕ್ಷನ್‌ಗಳಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ಸಮಸ್ಯೆ ಅನುಭವಿಸುವಂತಾಯಿತು.
ವಿಜಯನಗರ, ಮಹಾಲಕ್ಷಿ ಬಡಾವಣೆ, ಎ.ನಾರಾಯಣಪುರ, ಆಸ್ಟಿನ್ ಟೌನ್, ಗಾಂಧಿಪಾರ್ಕ್, ಕಾಕ್ಸ್‌ಟೌನ್ ಸೇರಿದಂತೆ ಹಲವೆಡೆ ಮರ ಹಾಗೂ ಮರದ ಕೊಂಬೆಗಳು ಧರೆಗುರುಳಿವೆ.
ಎಲ್ಲೆಲ್ಲಿ ಎಷ್ಟು ಮಳೆ?: ಅಗ್ರಹಾರ ದಾಸರಹಳ್ಳಿ 20.5 ಮಿ.ಮೀ., ತಾವರೆಕೆರೆ 9.5, ಕೊಡಿಗೇಹಳ್ಳಿ 9, ದಾಸನಪುರ 13, ಕೋಣನಕುಂಟೆ 5.5, ನಾಗರಬಾವಿ 3, ಲಾಲ್‌ಬಾಗ್ ಮತ್ತು ಹೆಸರಘಟ್ಟ ತಲಾ 1, ಬಸವನಗುಡಿಯಲ್ಲಿ 0.5 ಮಿ.ಮೀ. ಮಳೆಯಾಗಿದೆ. ಇನ್ನೂ ಮೂರ್‍ನಾಲ್ಕು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಕೆಎಸ್‌ಎನ್‌ಡಿಎಂಸಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
India: 68 ಮಿಲಿಯನ್ ಟನ್ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.