ಸಿರಿಧಾನ್ಯ ಮೇಳದ ವೆಬ್‌ಸೈಟ್ ಅನಾವರಣ
Team Udayavani, Nov 7, 2017, 1:27 PM IST
ಬೆಂಗಳೂರು: ಸಿರಿಧಾನ್ಯಗಳಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆ ಕಲ್ಪಿಸುವ ಉದ್ದೇಶದಿಂದ 2018ರ ಜನವರಿಯಲ್ಲಿ ಆಯೋಜಿಸಿರುವ “ಅಂತಾರಾಷ್ಟ್ರೀಯ ಸಿರಿಧಾನ್ಯ ವ್ಯಾಪಾರ ಮೇಳ’ದ ಲಾಂಛನ ಮತ್ತು ವೆಬ್‌ಸೈಟ್‌ಅನ್ನು ಕೃಷಿ ಸಚಿವ ಕೃಷ್ಣಭೈರೇಗೌಡ ನಗರದ ಹೋಟೆಲೊಂದರಲ್ಲಿ ಸೋಮವಾರ ಅನಾವರಣಗೊಳಿಸಿದರು.
ಜ.19ರಿಂದ 21ರವರೆಗೆ ನಡೆಯಲಿರುವ ಸಿರಿಧಾನ್ಯ ಮೇಳದ ವಿವರ ಹೊಂದಿರುವ ವೆಬ್‌ಸೈಟ್ ಹಾಗೂ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಅವರು, “ವಿಶ್ವ ಮಟ್ಟದಲ್ಲಿ ಸಿರಿಧಾನ್ಯಗಳಿಗೆ ಮಾರುಕಟ್ಟೆ ಒದಗಿಸಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದೇವೆ. ಬೇಡಿಕೆ ಹೆಚ್ಚಾದಂತೆ ಸಿರಿಧಾನ್ಯಗಳ ದರವೂ ಸಹಜ ಸ್ಥಿತಿಗೆ ಬರುವ ಜತೆಗೆ ರೈತರ ಆರ್ಥಿಕ ಸ್ವಾವಲಂಬನೆಗೂ ಸಹಕಾರಿಯಾಗಲಿದೆ,’ ಎಂದು ಅಭಿಪ್ರಾಯಪಟ್ಟರು.
“ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಹೆಸರು ಗಳಿಸಿರುವ ಬೆಂಗಳೂರು, ಇದೀಗ ಸಾವಯವ ಹಾಗೂ ಸಿರಿಧಾನ್ಯಗಳ ರಾಜಧಾನಿಯೂ ಆಗುತ್ತಿದೆ. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟಕ್ಕೆ ಸಾವಯವ ಮತ್ತು ಸಿರಿಧಾನ್ಯ ಕ್ರಾಂತಿಯನ್ನು ಕೊಂಡೊಯ್ಯಲು ಕರ್ನಾಟಕವೇ ಅಡಿಪಾಯವಾಗಿದ್ದು, ಅದನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ಸಿರಿಧಾನ್ಯ ವಾಣಿಜ್ಯ ಮೇಳ ಆಯೋಜಿಸಲಾಗುತ್ತಿದೆ. ಸಾವಯವ ಮತ್ತು ಸಿರಿಧಾನ್ಯ ಬೆಳೆ ಬೆಳೆಯಲು ರೈತರಿಗೆ ಉತ್ತೇಜಿಸುವ ಜತೆಗೆ ಬೆಳೆಗೆ ಅತ್ಯುತ್ತಮ ಮಾರುಕಟ್ಟೆ ಒದಗಿಸಲಾಗುತ್ತಿದೆ,’ ಎಂದು ಹೇಳಿದರು.
“ರೈತರ ಪರವಾದ, ಪರಿಸರ ಸ್ನೇಹಿ ಮತ್ತು ಜನರ ಆರೋಗ್ಯಕ್ಕೆ ಪೂರಕವಾದ ಸಿರಿಧಾನ್ಯಗಳನ್ನು ನಮ್ಮ ಪಾರಂಪರಿಕ ಅಡುಗೆ ಶೈಲಿಯಲ್ಲಿ ಬಳಸಲಾಗುತ್ತಿದೆ. ಇದಕ್ಕೆ ರಾಗಿ, ಸಜ್ಜೆ, ನವಣೆ, ಸೆಣಬು ಸೇರಿದಂತೆ ವಿವಿಧ ಸಿರಿಧಾನ್ಯಗಳಿಂದ ಚಕ್ಕಲಿ, ನಿಪ್ಪಟ್ಟು, ರೊಟ್ಟಿ ಇತ್ಯಾದಿ ಪದಾರ್ಥ ತಯಾರಿಸಿ ಹೆಚ್ಚು ಬೇಡಿಕೆ ಬರುವಂತೆ ಕ್ರಮಕೈಗೊಳ್ಳಬೇಕು,’ ಎಂದರು.
ಸಿರಿಧಾನ್ಯ ದಿನ ಘೋಷಣೆ
ಈಗಾಗಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗ ದಿನಾಚರಣೆ ಘೋಷಣೆ ಮಾಡಲಾಗಿದೆ. ಅದೇ ರೀತಿ ಸಿರಿಧಾನ್ಯ ಮೇಳವನ್ನು ಘೋಷಣೆ ಮಾಡಬೇಕು ಎಂದು ಕೇಂದ್ರ ಸರ್ಕಾರ ಮತ್ತು ವಿಶ್ವಸಂಸ್ಥೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಯೋಗದಿಂದ ಆರೋಗ್ಯ ರಕ್ಷಣೆಯಾದಂತೆ ಸಿರಿಧಾನ್ಯಗಳು ಆರೋಗ್ಯ ರಕ್ಷಕಗಳಾಗಿವೆ. ಹೀಗಾಗಿ ಸರ್ಕಾರ ಅಂತಾರಾಷ್ಟ್ರೀಯ ಸಿರಿಧಾನ್ಯ ದಿನ ಘೋಷಣೆ ಮಾಡಬೇಕು ಎಂದು ಅಭಿಪ್ರಾಯಪಟ್ಟರು.
ವಿದೇಶಿಗರು ಭಾಗಿ
ಸಿರಿಧಾನ್ಯ ಮೇಳಕ್ಕೆ ಅಮೇರಿಕ, ಯೂರೋಪ್, ದುಬೈ ಸೇರಿದಂತೆ ಹಲವು ದೇಶಗಳ ಸಾವಯವ ಮತ್ತು ಕೃಷಿಧಾನ್ಯ ಕ್ಷೇತ್ರದ ಪ್ರತಿನಿಧಿಗಳು, ನೀತಿ ರೂಪಿಸುವವರು, ರೈತರು, ಉದ್ದಿಮೆದಾರರು, ಗ್ರಾಹಕರು ಭಾಗಹವಿಸಲಿದ್ದಾರೆ. ರಾಷ್ಟ್ರ ಮತ್ತು ರಾಜ್ಯದ ಅನೇಕ ರೈತರು, ಉದ್ದಿಮೆದಾರರು ಪಾಲ್ಗೊಳ್ಳಲಿದ್ದು, ಕಳೆದ ವರ್ಷಕ್ಕಿಂತಲೂ ಈ ಬಾರಿ ಹೆಚ್ಚಿನ ಪ್ರತಿಕ್ರಿಯೆ ಸಿಗುವ ನಿರೀಕ್ಷೆ ಇದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕೃಷಿ ಆಯುಕ್ತ ಸತೀಶ್, ಕೃಷಿ ನಿರ್ದೇಶಕ ಸೋಮಶೇಖರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.