ವಾರದಲ್ಲಿ ಸಮಗ್ರ ಮರಳು ನೀತಿ ಪ್ರಕಟ: ಪರಮೇಶ್ವರ್
Team Udayavani, Jan 12, 2019, 12:40 AM IST
ಬೆಂಗಳೂರು: “ಇ- ಟೆಂಡರ್’ ವ್ಯವಸ್ಥೆ ಸೇರಿದಂತೆ ಇತರೆ ಅಂಶಗಳನ್ನು ಒಳಗೊಂಡ ಸಮಗ್ರ ಮರಳು ನೀತಿಯನ್ನು ವಾರದೊಳಗೆ ಅಂತಿಮಗೊಳಿಸಿ ಪ್ರಕಟಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು.
ಮರಳು ನೀತಿಯನ್ನು ಸಮಗ್ರವಾಗಿ ಜಾರಿಗೊಳಿಸುವ ಸಂಬಂಧ ವಿಧಾನಸೌಧದಲ್ಲಿ ಶುಕ್ರವಾರ ನಡೆದ ಸಂಪುಟ ಉಪ ಸಮಿತಿ ಸಭೆ ಬಳಿಕ ಪ್ರತಿಕ್ರಿಯಿಸಿದ ಪರಮೇಶ್ವರ್, ಅನ್ಯ ರಾಜ್ಯಗಳಲ್ಲಿನ ವ್ಯವಸ್ಥೆಯ ಬಗ್ಗೆಯೂ ಈಗಾಗಲೇ ಅಧಿಕಾರಿಗಳ ತಂಡ ಪ್ರವಾಸ ಕೈಗೊಂಡು ವರದಿ ನೀಡಿದ್ದು, ಅವುಗಳನ್ನು ಪರಿಶೀಲಿಸಿ ಸೂಕ್ತವಾದ ಅಂಶಗಳನ್ನು ಅಳವಡಿಸಿಕೊಳ್ಳಲಾಗುವುದು. “ಇ- ಟೆಂಡರ್’ ಸೇರಿದಂತೆ ಇತರೆ ಸುಧಾರಿತ ವ್ಯವಸ್ಥೆಯನ್ನು ಮರಳು ನೀತಿಯಲ್ಲಿ ಅಳವಡಿಸಲಾಗುವುದು ಎಂದು ಹೇಳಿದರು.
ಈ ಹಿಂದೆ ಜಾರಿಯಲ್ಲಿದ್ದ ಪಂಚಾಯ್ತಿ ವತಿಯಿಂದ ಮರಳು ಬ್ಲಾಕ್ ಹಂಚಿಕೆ, ನಂತರ ಲೋಕೋಪಯೋಗಿ ಇಲಾಖೆ ವತಿಯಿಂದ ಮರಳು ಬ್ಲಾಕ್ ಹಂಚಿಕೆ ಇತರೆ ವ್ಯವಸ್ಥೆ ಬಗ್ಗೆಯೂ ಚರ್ಚಿಸಲಾಗಿದೆ. ಮರಳು ಬ್ಲಾಕ್ ಹಂಚಿಕೆಯನ್ನು ಯಾರ ಸುಪರ್ದಿಗೆ ವಹಿಸಬೇಕು ಎಂಬ ಬಗ್ಗೆಯೂ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
“ಎಂ- ಸ್ಯಾಂಡ್’ (ಮ್ಯಾನ್ಯುಫ್ಯಾಕ್ಚರ್x ಸ್ಯಾಂಡ್) ಅಗತ್ಯತೆ, ಆಮದು ಮರಳು, ಅದರ ಸಾಧಕ- ಬಾಧಕ ಇತರೆ ಅಂಶಗಳನ್ನು ಪರಿಶೀಲಿಸಿಯೇ ನೀತಿಯಲ್ಲಿ ಅಳವಡಿಸಲಾಗುವುದು. ಒಟ್ಟಾರೆ ರಾಜ್ಯದಲ್ಲಿ ಮರಳಿನ ಅಭಾವ ತಲೆದೋರದ ರೀತಿಯಲ್ಲಿ ಸಮಗ್ರ ಅಂಶಗಳನ್ನು ಒಳಗೊಂಡ ಮರಳು ನೀತಿಯನ್ನು ವಾರದಲ್ಲಿ ಅಂತಿಮಗೊಳಿಸಿ ಪ್ರಕಟಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
MUST WATCH
ಹೊಸ ಸೇರ್ಪಡೆ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
Siddapura: ಅದೃಷ್ಟ ತಂದ ಲಾರಿ ಧರ್ಮಸ್ಥಳ ಕ್ಷೇತ್ರಕ್ಕೆ ಸಮರ್ಪಣೆ
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.