ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ತೆರೆಯಲು ಸ್ವಾಗತ

Team Udayavani, Jan 13, 2019, 6:27 AM IST

sarkari.jpg

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಇಂಗ್ಲಿಷ್‌ ಮಾಧ್ಯಮ ಆರಂಭಿಸುವ ಸರ್ಕಾರದ ತೀರ್ಮಾನವನ್ನು ಪ್ರಗತಿಪರ ಸಂಘಟನೆಗಳ ಒಕ್ಕೂಟ ಸ್ವಾಗತಿಸಿದೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಲೇಖಕ ನಟರಾಜ್‌ ಹುಳಿಯಾರ್‌ ಮಾತನಾಡಿ, ಈಗಾಗಲೇ ರಾಜ್ಯದ ಅರ್ಧ ಭಾಗಕ್ಕಿಂತ ಹೆಚ್ಚು ಮಕ್ಕಳು ಇಂಗ್ಲಿಷ್‌ ಮಾಧ್ಯಮದಲ್ಲಿ ಕಲಿಯುತ್ತಿದ್ದಾರೆ. ಆರ್ಥಿಕವಾಗಿ ಹಿಂದುಳಿದವರು ಹಾಗೂ ಹಳ್ಳಿಗಾಡಿನ ಮಕ್ಕಳು ಕನ್ನಡ ಮಾಧ್ಯಮದಲ್ಲಿ ಕಲಿಯುತ್ತಿದ್ದಾರೆ.

ಇದು ಶೈಕ್ಷಣಿಕ ವಲಯದಲ್ಲಿ ಅಸಮತೋಲನ ಉಂಟು ಮಾಡುತ್ತಿದೆ. ಈ ಅಸಮತೋಲನ ನಿವಾರಿಸಲು ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಕನ್ನಡ ಪರಿಸರಕ್ಕೆ ಪೂರಕವಾಗುವಂತೆ ಇಂಗ್ಲಿಷ್‌ ಮಾಧ್ಯಮ ಜಾರಿಗೊಳಿಸಲು ಮುಂದಾಗಿರುವುದು ಸೂಕ್ತವಾಗಿದೆ ಎಂದು ಹೇಳಿದರು.

ಮೊದಲ ಹಂತವಾಗಿ ಪ್ರತಿ ಹೋಬಳಿಗೆ ಒಂದರಂತೆ ಸರ್ಕಾರಿ ಇಂಗ್ಲಿಷ್‌ ಮಾಧ್ಯಮದ ಶಾಲೆಗಳನ್ನು ಆರಂಭಿಸಬೇಕು. ಈಗಾಗಲೇ ಆರಂಭಿಸಿರುವ ಹಿರಿಯ ಪ್ರಾಥಮಿಕ ಮಟ್ಟದ ಕುವೆಂಪು ಮಾದರಿ ಶಾಲೆಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಇಂಗ್ಲಿಷ್‌ ಮಾಧ್ಯಮದ ಜಾರಿಯಿಂದ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೆಳೆಯಬಹುದು ಎಂದು ತಿಳಿಸಿದರು.

ಸರ್ಕಾರಿ ಶಾಲೆಗಳಲ್ಲಿ ಈಗ ಕಲಿಸುತ್ತಿರುವ ಇಂಗ್ಲಿಷ್‌ ಭಾಷಾ ಕಲಿಕೆಯ ಮಟ್ಟವನ್ನು ಇನ್ನಷ್ಟು ಕ್ರಮಬದ್ಧಗೊಳಿಸಿ ಉತ್ತಮಪಡಿಸಬೇಕಿದೆ. ಆ ಕಾರಣಕ್ಕಾಗಿ ಕನ್ನಡ ಹಾಗೂ ಇಂಗ್ಲಿಷ್‌ ಎರಡು ಭಾಷೆಗಳನ್ನು ಸಮರ್ಥವಾಗಿ ಬೋಧಿಸಬಲ್ಲ ಶಿಕ್ಷಕ ಶಿಕ್ಷಕಿಯರ ತರಬೇತಿಗೆ ಪ್ರತಿವರ್ಷ ಇನ್ನಷ್ಟು ಹೆಚ್ಚಿನ ಅವಧಿ ಮೀಸಲಿಡಬೇಕಿದೆ ಎಂದು ಹೇಳಿದರು.

ಆರ್‌ಟಿಇ ಕಾಯ್ದೆಯ ಪ್ರಕಾರ ಖಾಸಗಿ ಶಾಲೆಗಳಿಗೆ ವೆಚ್ಚ ಮಾಡುತ್ತಿರುವ ಅನುದಾನಕ್ಕೆ ಸಮಾನವಾದ ಅನುದಾನವನ್ನು ಸರ್ಕಾರಿ ಶಾಲೆಗಳ ಕಟ್ಟಡ, ಪೀಠೊಪಕರಣ ಕಲಿಕೆಯಲ್ಲಿ ದೃಶ್ಯ- ಶ್ರವಣ ಮಾಧ್ಯಮಗಳ ಹೆಚ್ಚಿನ ಬಳಕೆಗಾಗಿ ಮೀಸಲಿಡಬೇಕು ಎಂದರು. ದಲಿತ ಸಂಘ ಸಮಿತಿಯ ಸಂಚಾಲಕ ಮಾವಳ್ಳಿ ಶಂಕರ್‌, ಪ್ರಜಾ ಪರಿವರ್ತನ ವೇದಿಕೆಯ ಬಿ.ಗೋಪಾಲ್‌, ಸಮತಾ ಸೈನಿಕ ದಳದ ಚನ್ನಕೃಷ್ಣಪ್ಪ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

Jagan Mohan Reddy

Adani ವಿದ್ಯುತ್‌ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್‌ ರೆಡ್ಡಿ

ACT

Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

4

Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.