ಸಾರಾ ಗೋವಿಂದು ಆಯ್ಕೆಯಲ್ಲಿ ಲೋಪವೇನು?
Team Udayavani, Dec 23, 2017, 11:46 AM IST
ಬೆಂಗಳೂರು: ಕನ್ನಡದ ನಾಡು ನುಡಿಗಾಗಿ ಹೋರಾಟ ನಡೆಸುತ್ತಿರುವ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸಾರಾ ಗೋವಿಂದು ಅವರನ್ನು ಅನೇಕಲ್ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದರಲ್ಲಿ ತಪ್ಪೇನಿದೆ ಎಂದು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಂ.ತಿಮ್ಮಯ್ಯ ಪ್ರಶ್ನಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಾಹಿತ್ಯ ಕ್ಷೇತ್ರದಲ್ಲಿ ಇಲ್ಲದವರು ಕನ್ನಡ ಸಾಹಿತ್ಯ ಪರಿಷತ್ ಅನ್ನು ಹುಟ್ಟು ಹಾಕಿದ್ದಾರೆ. ಸಾಹಿತಿಗಳಲ್ಲದವರೂ ಕನ್ನಡವನ್ನು ಪೋಷಿಸುತ್ತಿದ್ದಾರೆ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವ ಹಾಗೆ ನಾಡಿಗಾಗಿ ಸೇವೆ ಸಲ್ಲಿಸಿದ ಎಲ್ಲರೂ ಸಮೇಳನಾಧ್ಯಕ್ಷರಾಗಲು ಅರ್ಹರು ಎಂದರು.
ಕನ್ನಡಪರ ಕಳಕಳಿವುಳ್ಳ ಸಾರಾ ಗೋವಿಂದು ವರನಟ ಡಾ.ರಾಜ್‌ಕುಮಾರ್ ಅವರನ್ನು ಗೋಕಾಕ್ ಚಳುವಳಿಗೆ ಕರೆತಂದರು. ಗಾಲಿ ಮತ್ತು ಅಚ್ಚು ಕಾರ್ಖಾನೆಯಲ್ಲಿ ಕನ್ನಡಗರಿಗೆ ಅನ್ಯಾಯ ವಾದಾಗ ಹೋರಾಟ ನಡೆಸಿ ಕನ್ನಡಿಗರಿಗೆ ಉದ್ಯೋಗ ದೊರಕುವಂತೆ ಮಾಡಿದರು. ಇಂತವರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗುವುದರಲ್ಲಿ ತಪ್ಪೇನಿದೆ ಎಂದರು.
ಸಾರಾ ಗೋವಿಂದು ಅವರನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಮಾಡಿರುವುದಕ್ಕೆ ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟ ಬೆಂಬಲಿಸುತ್ತದೆ. ಅಲ್ಲದೆ ಮುನಿಸಿಕೊಂಡವರ ಮನಸೆಳೆಯುವ ಪ್ರಯತ್ನ ನಡೆಯಲಿದೆ ಎಂದು ಹೇಳಿದರು. ಡಿಸೆಂಬರ್ 24 ರಿಂದ ಎರಡು ದಿನಗಳ ಕಾಲ ಅನೇಕಲ್ ತಾಲೂಕಿನ ಚಂದಾಪುರದಲ್ಲಿ ನಡೆಯಲಿರುವ ಬೆಂಗಳೂರು ನಗರಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲಾ ರೀತಿಯ ತಯಾರಿ ನಡೆದಿದೆ ಎಂದು ಒಕ್ಕೂಟದ ಕಾರ್ಯಾಧ್ಯಕ್ಷ ಸಿದ್ಧಯ್ಯ ತಿಳಿಸಿದರು.
24, 25ರಂದು ನಗರ ಕನ್ನಡ ಸಾಹಿತ್ಯ ಸಮ್ಮೇಳನ
ಬೆಂಗಳೂರು: ಆನೇಕಲ್ ತಾಲೂಕಿನ ಚಂದಾಪುರದಲ್ಲಿ ಡಿ.24 ಹಾಗೂ 25ರಂದು ಬೆಂಗಳೂರು ನಗರ 12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ನಗರ ಕಸಾಪ ಅಧ್ಯಕ್ಷ ಮಾಯಣ್ಣ ತಿಳಿಸಿದ್ದಾರೆ. ಕನ್ನಡ ಚಳವಳಿ ಹೋರಾಟಗಾರ,ಚಿತ್ರ ನಿರ್ಮಾಪಕ ಸಾ.ರಾ ಗೋವಿಂದು ಸಮ್ಮೇ ಳನದ ಸರ್ವಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದು, ಎರಡೂ ದಿನಗಳ ಕಾಲ ಕನ್ನಡ ವಿಚಾರಗಳಿಗೆ ಸಂಬಂಧಿಸಿ ದಂತೆ ಉಪನ್ಯಾಸ, ಸಂಗೀತ, ವಿದ್ಯಾರ್ಥಿ, ಯುವ ಹಾಗೂ ಹಿರಿಯರ ಕವಿಗೋಷ್ಠಿಗಳು ಜರುಗಲಿವೆ.
ಭಾನುವಾರ ಬೆಳಗ್ಗೆ 7ಗಂಟೆ ಸುಮಾರಿಗೆ ಡಾ. ರಾಜ್‌ಕುಮಾರ್ ಸ್ಮಾರಕದ ಬಳಿ ಡಾ.ರಾಜ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಜಯಕರ್ನಾಟಕ ಸಂಸ್ಥಾಪಕ ಅಧ್ಯಕ್ಷ ಮುತ್ತಪ್ಪ ರೈ ಸಮ್ಮೇಳನದ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಬಳಿಕ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಹಾಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರೊಂದಿಗೆ ಸಮ್ಮೇಳನದ ಮೆರವಣಿಗೆ ವಾಹನಗಳು ನಾಯಂಡ ಹಳ್ಳಿ ಮಾರ್ಗದ ಮೂಲಕ ಬೊಮ್ಮ ಸಂದ್ರದ ಬಿಟಿಎಲ್ ಕಾಲೇಜು ತಲುಪಲಿವೆ. ಅಲ್ಲಿಂದ ಸಮ್ಮೇಳನಾಧ್ಯಕ್ಷರು ಆಸೀನರಾದ ಸಾರೋಟಿನ ಮೆರವಣಿಗೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
Bengaluru: ಅಪರಾಧ, ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಡಿಜಿಪಿ ಸೂಚನೆ
MUST WATCH
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.