ಅಡಿಪಾಯ ತೆಗೆಯುವಾಗ ಅವಾಂತರ: ವಾಲಿದ ಕಟ್ಟಡ


Team Udayavani, Jan 24, 2019, 6:36 AM IST

adhipaya.jpg

ಬೆಂಗಳೂರು: ಶೆಡ್‌ ನಿರ್ಮಿಸಲು ಆಳವಾದ ಅಡಿಪಾಯ ತೆಗೆದಿದ್ದರಿಂದ ನಿವೇಶನ ಸುತ್ತಲಿನ ಮೂರು ಕಟ್ಟಡಗಳು ವಾಲಿರುವ ಘಟನೆ ಬುಧವಾರ ಆರ್‌.ಟಿ.ನಗರದ ಚಾಮುಂಡಿನಗರದಲ್ಲಿ ನಡೆಸಿದ್ದು, ಆತಂಕಗೊಂಡ ನಿವಾಸಿಗಳು ಮನೆ ಖಾಲಿ ಮಾಡಿದ್ದಾರೆ.

ಚಾಮುಂಡಿನಗರದ ನೀಲಕಂಠೇಶ್ವರ ದೇವಸ್ಥಾನ ಬಳಿ ಮೌಲ ಎಂಬುವವರಿಗೆ ಸೇರಿದ ಕಟ್ಟಡದ ಪಕ್ಕದ ನಿವೇಶನದಲ್ಲಿ ಶೆಡ್‌ ನಿರ್ಮಿಸಲು ಮನೆ  ಪಕ್ಕದಲ್ಲಿ ಆಳವಾಗಿ ಪಾಯ ಅಗೆಯಲಾಗಿದೆ. ಬುಧವಾರ ನುಸುಕಿನಲ್ಲಿ ಪಾಯ ಮಣ್ಣು ಕುಸಿದ ಪರಿಣಾಮ ಪಕ್ಕದಲ್ಲಿರುವ ಕಟ್ಟಡಗಳು ವಾಲಿಕೊಂಡಿದೆ. ಇದರಿಂದ ಭಯಗೊಂಡ ಮನೆಯಲ್ಲಿದ್ದವರು ಕೂಡಲೇ ಹೊರಗೆ ಬಂದಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಬಾಡಿಗೆದಾರರು ವಿಷಯವನ್ನು ಕೂಡಲೇ ಕಟ್ಟಡ ಮಾಲೀಕ ಮೌಲ ಅವರಿಗೆ ತಿಳಿಸಿದ್ದಾರೆ. ಜತೆಗೆ ಸ್ಥಳೀಯರಿಂದ ವಿಷಯ ತಿಳಿದ ಕೂಡಲೇ ಪಾಲಿಕೆಯ ಅಧಿಕಾರಿಗಳು, ಪೊಲೀಸ್‌ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು, ಸುರಕ್ಷತಾ ದೃಷ್ಟಿಯಿಂದ ನಿವಾಸಿಗಳನ್ನು ಖಾಲಿ ಮಾಡಿಸಿದ್ದು, ಕಟ್ಟಡ ಇನ್ನಷ್ಟು ವಾಲದಂತೆ ಪಾಯಗೆ ಮಣ್ಣು ತುಂಬಲಾಗಿದೆ. 

ಕಟ್ಟಡ ತೆರವಿಗೆ ನೋಟಿಸ್‌: ವಾಲಿದ ಕಟ್ಟಡ ಪರಿಶೀಲಿಸಿದ ಪಾಲಿಕೆಯ ಅಧಿಕಾರಿಗಳು ಕಟ್ಟಡ ನಿರ್ಮಿಸಿ ಹಲವು ವರ್ಷಗಳಾಗಿದೆ. ಹೀಗಾಗಿ ದುರಸ್ತಿಪಡಿಸಿದರೂ ಮುಂದೆ ಅನಾಹುತಗಳು ಎದುರಾಗುವ ಸಾಧ್ಯತೆಯಿದೆ. ಹೀಗಾಗಿ ಕಟ್ಟಡ ನೆಲಸಮಗೊಳಿಸುವಂತೆ ಮನೆಯ ಮಾಲೀಕ ಮೌಲ ಅವರಿಗೆ ನೋಟಿಸ್‌ ನೀಡಿದ್ದಾರೆ. ಅದಕ್ಕೊಪ್ಪಿರುವ ಮನೆಯ ಮಾಲೀಕ ಬುಧವಾರದಿಂದಲೇ ಕಟ್ಟಡ ತೆರವು ಕಾರ್ಯಾಚರಣೆಗೆ ಮುಂದಾಗಿದ್ದಾರೆ.

ಪಾಯ ತೆಗೆದವರಿಗೆ ನೋಟಿಸ್‌: ಪಾಯ ತೆಗೆದು ಕಟ್ಟಡ ವಾಲುವುದಕ್ಕೆ ಕಾರಣವಾಗಿರುವ ನಿವೇಶನ ಮಾಲೀಕ ಇಲಿಯಾಸ್‌ ಪಾಷಾ ಅವರಿಗೆ ಅಧಿಕಾರಿಗಳು ನೋಟಿಸ್‌ ಜಾರಿಗೊಳಿಸಿದ್ದಾರೆ. ಪಾಯ ಅಗೆಯಲು ಪಾಲಿಕೆಯಿಂದ ಅನುಮತಿ ಪಡೆದಿರುವ ಪತ್ರವನ್ನು ಸಲ್ಲಿಸುವಂತೆ ಹಾಗೂ ನಿವೇಶನಕ್ಕೆ ಸಂಬಂಧಿಸಿದ ದಾಖಲೆಗಳನ್ನು ನೀಡುವಂತೆ ನೋಟಿಸ್‌ನಲ್ಲಿ ತಿಳಿಸಿದ್ದಾರೆ. ಒಂದೊಮ್ಮೆ ಅನುಮತಿ ಪಡೆಯದಿದ್ದರೆ ನಿವೇಶನ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.