ಕೇಂದ್ರದ ಅನುದಾನ ಎಲ್ಲಿಗೆ ಸೇರುತ್ತಿದೆ?


Team Udayavani, Aug 13, 2017, 6:45 AM IST

12BNP-(18).jpg

ಬೆಂಗಳೂರು: ಪ್ರತಿ ಹದಿನೈದು ದಿನಕ್ಕೆ ಒಂದರಂತೆ 106 ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಆದರೆ, ಕರ್ನಾಟಕದ ಜನರಿಗೆ ಅದರ ಫ‌ಲಾನುಭವ ಸಿಗುತ್ತಿಲ್ಲ. ಕಾರಣ ಇಲ್ಲೊಂದು ಭ್ರಷ್ಟ ಹಾಗೂ ನಾಚಿಕೆಗೇಡಿನ ಸರ್ಕಾರದ ಇದೆ. ಎಷ್ಟು ನಾಚಿಗೆ ಗೇಡು ಎಂದರೆ, ಇಲ್ಲಿನ ಸಚಿವರೊಬ್ಬರ ಮನೆ ಮೇಲೆ ದಾಳಿಯಾಗಿ ದೊಡ್ಡ ಸುದ್ದಿಯಾದರೂ, ರಾಜೀನಾಮೆ ಪಡೆಯದಷ್ಟು ನಾಚಿಕೆಗೇಡಿನ ಸರ್ಕಾರ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು.

ರಾಜ್ಯ ಬಿಜೆಪಿ ವತಿಯಿಂದ ಶನಿವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಂಡಿದ್ದ ಚಿಂತನಾಶೀಲರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ನನ್ನ ರಾಜಕೀಯ ಜೀವನದಲ್ಲಿ ಕಂಡಂತಹ ಅತ್ಯಂತ ಭ್ರಷ್ಟ ಹಾಗೂ ನಾಚಿಕೆಗೇಡಿನ ಸರ್ಕಾರ ಎಂದು ಆರೋಪಿಸಿದರು. 

ನಾನಂತೂ ಲೆಕ್ಕ ಕೇಳದೇ ಬಿಡುವುದಿಲ್ಲ: “13ನೇ ಹಣಕಾಸು ಆಯೋಗದಿಂದ ಕರ್ನಾಟಕಕ್ಕೆ 5 ವರ್ಷದಲ್ಲಿ 61,691 ಕೋಟಿ ರೂ. ನೀಡಿದೆ. 14ನೇ ವೇತನ ಆಯೋಗದ ಎನ್‌ಡಿಎ ಅವಧಿಯಲ್ಲಿ 1,86,925 ಕೋಟಿ ಅನುದಾನ ನೀಡಲಾಗಿದೆ. ಹಾಗೆಯೇ ವಿವಿಧ ಯೋಜನೆಯಡಿಯಲ್ಲಿ ಒಟ್ಟಾರೆಯಾಗಿ ಯುಪಿಎ ಅವಧಿಯಲ್ಲಿ ರಾಜ್ಯಕ್ಕೆ 88,583 ಕೋಟಿ ಅನುದಾನ ಹಾಗೂ ನಮ್ಮ ಸರ್ಕಾರದಿಂದ ಮೂರು ವರ್ಷದಲ್ಲಿ 2,19,506 ಕೋಟಿ ನೀಡಲಾಗಿದೆ. ಅಂದರೆ, ಕೇಂದ್ರ ಅನುದಾನದ ಪ್ರಮಾಣದಲ್ಲಿ ಎರಡೂವರೆ ಪಟ್ಟು ಹೆಚ್ಚಾಗಿದೆ. ಈ ದುಡ್ಡು ಎಲ್ಲಿ ಹೋಗುತ್ತಿದೆ ಎಂಬುದು ತಿಳಿಯುತ್ತಿಲ್ಲ.

ಸಿದ್ದರಾಮಯ್ಯ ಇದರ ಬಗ್ಗೆ ಲೆಕ್ಕ ನೀಡಬೇಕು. ಇಲ್ಲಿನ ಜನರು ಮೂಕ ಪ್ರೇಕ್ಷಕರಾಗಿ ಕೂರಬಾರದು. ನೀವು ಕೇಳಿಲ್ಲ ಅಂದರೆ, ನಾನೇ ಬಂದು ಕೇಳುತ್ತೇನೆ. ನಾನು ಬಿಡುವವನಲ್ಲ” ಎಂದು ಎಚ್ಚರಿಕೆ ನೀಡಿದರು. ಬಿಜೆಪಿ ನಾಯಕರು, ಹಿರಿಯ ಸಂಶೋಧಕ ಡಾ. ಎಂ. ಚಿದಾನಂದ ಮೂರ್ತಿ, ಮಾಜಿ ರಾಜ್ಯಪಾಲ ನ್ಯಾ. ಎಂ. ರಾಮಾಜೋಯಿಸ್‌, ಸಾಹಿತಿ ಡಾ. ಸುಮತೀಂದ್ರ ನಾಡಿಗ, ಶಿಕ್ಷಣ ತಜ್ಞ ಕೃ. ನರಹರಿ, ಎಫ್ಕೆಸಿಸಿಐ ಮಾಜಿ ಅಧ್ಯಕ್ಷ ಸಂಪತ್‌ರಾಮನ್‌, ಹೃದ್ರೋಗ ತಜ್ಞೆ ಡಾ. ವಿಜಯಲಕ್ಷ್ಮೀ ಬಾಳೆಕುಂದ್ರಿ, ಚಲನಚಿತ್ರ ನಿರ್ದೇಶಕ ಟಿ.ಎಸ್‌. ನಾಗಾಭರಣ, ವೈದ್ಯರಾದ ಡಾ.ದೇವಿ ಪ್ರಸಾದ್‌ ಶೆಟ್ಟಿ, ಡಾ.ಭುಜಂಗ ಶೆಟ್ಟಿ ಸೇರಿ ವಿವಿಧ ಸಂಸ್ಥೆಯ ಮುಖ್ಯಸ್ಥರು, ಸಾಹಿತಿಗಳು, ಶಿಕ್ಷಣ ತಜ್ಞರು, ಆಡಳಿತಾಧಿಕಾರಿಗಳು ಸಾಹಿತಿಗಳು ಸಭೆಯಲ್ಲಿದ್ದರು.

ಟಾಪ್ ನ್ಯೂಸ್

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

KSRtc-1

New Way: ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ “ತ್ರಿವಳಿ ಸೂತ್ರ’

High-Court

Criminal Case: 44 ವರ್ಷದ ಹಿಂದಿನ ಪ್ರಕರಣ ವಿಲೇವಾರಿಗೊಳಿಸಿದ ಹೈಕೋರ್ಟ್‌

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

12-udupi

Udupi: ಅಯ್ಯಪ್ಪ ಮಾಲಾಧಾರಿ ಭಕ್ತರಿಂದ ದಾಂಧಲೆ: ದೂರು

Priyank-Kharghe

ರಾಷ್ಟ್ರಮಟ್ಟದಲ್ಲೂ ಪ್ರತಿಭಟಿಸಲಿ, ಬಿಜೆಪಿಯವರೇ ಮೂಗು ಕೊಯ್ಯಿಸಿಕೊಳ್ತಾರೆ: ಪ್ರಿಯಾಂಕ್‌

Will Rohit retire after the Sydney Test?

Rohit Sharma; ಸಿಡ್ನಿ ಟೆಸ್ಟ್‌  ಬಳಿಕ ರೋಹಿತ್‌ ವಿದಾಯ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KSRtc-1

New Way: ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ “ತ್ರಿವಳಿ ಸೂತ್ರ’

High-Court

Criminal Case: 44 ವರ್ಷದ ಹಿಂದಿನ ಪ್ರಕರಣ ವಿಲೇವಾರಿಗೊಳಿಸಿದ ಹೈಕೋರ್ಟ್‌

Priyank-Kharghe

ರಾಷ್ಟ್ರಮಟ್ಟದಲ್ಲೂ ಪ್ರತಿಭಟಿಸಲಿ, ಬಿಜೆಪಿಯವರೇ ಮೂಗು ಕೊಯ್ಯಿಸಿಕೊಳ್ತಾರೆ: ಪ್ರಿಯಾಂಕ್‌

vidhana-Soudha

Officers Promotion: ಹೊಸ ವರ್ಷಕ್ಕೆ 153 ಅಧಿಕಾರಿಗಳಿಗೆ ಭಡ್ತಿ ಭಾಗ್ಯ

Nikhil-JDS

New Office Bearers: ಜೆಡಿಎಸ್‌ಗೆ ಹೊಸ ರಾಜ್ಯಾಧ್ಯಕ್ಷ ಜತೆಗೆ ಮೂರು ಕಾರ್ಯಾಧ್ಯಕ್ಷ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

KSRtc-1

New Way: ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ “ತ್ರಿವಳಿ ಸೂತ್ರ’

High-Court

Criminal Case: 44 ವರ್ಷದ ಹಿಂದಿನ ಪ್ರಕರಣ ವಿಲೇವಾರಿಗೊಳಿಸಿದ ಹೈಕೋರ್ಟ್‌

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

12-udupi

Udupi: ಅಯ್ಯಪ್ಪ ಮಾಲಾಧಾರಿ ಭಕ್ತರಿಂದ ದಾಂಧಲೆ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.