ಗುಂಡಿಮುಕ್ತ ರಸ್ತೆಗೆ ವೈಟ್‌ ಟಾಪಿಂಗ್‌ ಶುರು


Team Udayavani, Nov 6, 2017, 11:55 AM IST

white-Topping-3.jpg

ಬೆಂಗಳೂರು: ರಸ್ತೆಗುಂಡಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಬಿಬಿಎಂಪಿ ನಗರದ ಪ್ರಮುಖ ರಸ್ತೆಗಳಲ್ಲಿ ವೈಟ್‌ ಟಾಪಿಂಗ್‌ ಕಾಮಗಾರಿ ಆರಂಭಿಸಿದ್ದು, ಇದರ ಪರಿಣಾಮ ಸುತ್ತಮುತ್ತಲಿನ ಭಾಗಗಳಲ್ಲಿ ತೀವ್ರ ಸಂಚಾರ ದಟ್ಟಣೆ ಉಂಟಾಗಿ ಸವಾರರು ತೊಂದರೆ ಅನುಭವಿಸುವಂತಾಗಿದೆ.

ನಗರದ 93.47 ಕಿಲೋ ಮೀಟರ್‌ ಉದ್ದದ ರಸ್ತೆಗಳಲ್ಲಿ 972.69 ಕೋಟಿ ರೂ. ವೆಚ್ಚದಲ್ಲಿ ವೈಟ್‌ಟಾಪಿಂಗ್‌ ಕಾಮಗಾರಿ ನಡೆಸಲಾಗುತ್ತಿದೆ. ಮೊದಲ ಹಂತವಾಗಿ ನಗರದ ಐದು ಪ್ರಮುಖ ರಸ್ತೆಗಳಲ್ಲಿ ಕಾಮಗಾರಿ ಆರಂಭಿಸಲು ಮುಂದಾಗಿರುವ ಅಧಿಕಾರಿಗಳು ಈಗಾಗಲೇ ಸಂಚಾರ ಪೊಲೀಸರಿಂದ ಕಾಮಗಾರಿಗೆ ಅನುಮತಿ ಪಡೆದುಕೊಂಡಿದ್ದಾರೆ. 

ಅದರಂತೆ ಮೈಸೂರು ರಸ್ತೆಯ ನಾಯಂಡಹಳ್ಳಿ, ಹೊಸೂರು ರಸ್ತೆಯ ಲಸ್ಕರ್‌ ರಸ್ತೆ ಹಾಗೂ ನಾಗಾವರ ಹೊರವರ್ತುಲ ರಸ್ತೆಯ ಹೆಣ್ಣೂರು ಜಂಕ್ಷನ್‌ ಬಳಿ ಪಾಲಿಕೆಯಿಂದ ವೈಟ್‌ ಟಾಪಿಂಗ್‌ ಕಾಮಗಾರಿ ಆರಂಭಿಸಲಾಗಿದೆ. ಪರಿಣಾಮ ಈ ಭಾಗದ ರಸ್ತೆಗಳಲ್ಲಿ ತೀವ್ರ ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ಸಂಚಾರ ಪೊಲೀಸರು ದಟ್ಟಣೆ ನಿವಾರಣೆಗೆ ಹರಸಾಹಸ ಪಡಬೇಕಾಗಿದೆ.

ಇದರೊಂದಿಗೆ ಸಿ.ವಿ.ರಾಮನ್‌ ರಸ್ತೆ ಹಾಗೂ ಕೋರಮಂಗಲದ 28ನೇ ಮುಖ್ಯರಸ್ತೆಯಲ್ಲಿ ಕಾಮಗಾರಿ ಆರಂಭಿಸಲು ಸಂಚಾರ ಪೊಲೀಸರು ಅನುಮತಿ ನೀಡಿದ್ದಾರೆ. ಆ ಹಿನ್ನೆಲೆಯಲ್ಲಿ ಕಾಮಗಾರಿಗೆ ಅಗತ್ಯ ಸಿದ್ಧತೆಗಳನ್ನು ನಡೆಸಲು ಅಧಿಕಾರಿಗಳು ಮುಂದಾಗಿದ್ದು, ಶೀಘ್ರದಲ್ಲಿಯೇ ನಗರದ ಐದು ರಸ್ತೆಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಈಗಾಗಲೇ ಹೆಣ್ಣೂರು ಜಂಕ್ಷನ್‌ ಬಳಿ ಸುಮಾರು 300 ಮೀಟರ್‌ ರಸ್ತೆಗೆ ಕಾಂಕ್ರಿಟ್‌ ಹಾಕಲಾಗಿದ್ದು, ಉಳಿದ ರಸ್ತೆಯ ಡಾಂಬರೀಕರಣ ತೆರವುಗೊಳಿಸಲಾಗುತ್ತಿದೆ. ಅದೇ ರೀತಿ ಲಸ್ಕರ್‌ ರಸ್ತೆ ಹಾಗೂ ಮೈಸೂರು ರಸ್ತೆಗಳಲ್ಲಿಯೂ ಬ್ಯಾರಿಕೇಡ್‌ ಅಳವಡಿಸಿ ಡಾಂಬರು ತೆಗೆಯುವ ಕೆಲಸ ನಡೆಯುತ್ತಿದೆ. ಬ್ಯಾರಿಕೇಡ್‌ಗಳನ್ನು ಅಳವಡಿಕೆ ಮಾಡಿರುವುದರಿಂದ ಈ ಎಲ್ಲ ಮಾರ್ಗಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದೆ. 

ಟಾಪ್ ನ್ಯೂಸ್

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

5

Bajpe: ಕೆಂಜಾರು ಹಾಸ್ಟೆಲ್‌  ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ

4

Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು

3

Kinnigoli: ಈಗಲೇ ಕುಡಿಯುವ ನೀರಿನ ಸಮಸ್ಯೆ; ಒಂದೇ ವಾರದಲ್ಲಿ ನಾಲ್ಕು ಬೋರ್‌ವೆಲ್‌

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

2(1

Sullia: ಜಾಕ್‌ವೆಲ್‌ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.