ಮೇಲ್ಮನೆ ಮಾತಾದ ವೈಟ್‌ ಟಾಪಿಂಗ್‌ ವರದಿ


Team Udayavani, Feb 23, 2018, 12:56 PM IST

white-toping.jpg

ವಿಧಾನ ಪರಿಷತ್ತು: ಬಿಬಿಎಂಪಿಯು ನಗರದಲ್ಲಿ ಅಭಿವೃದ್ಧಿಪಡಿಸಿರುವ ವೈಟ್‌ ಟಾಪಿಂಗ್‌ ರಸ್ತೆಯಲ್ಲಿ ಅಪಘಾತಗಳು ಹೆಚ್ಚಾಗುತ್ತಿರುವ ಬಗ್ಗೆ “ಉದಯವಾಣಿ’ ಗುರುವಾರ ಪುಟ 1 ಮತ್ತು ಪುಟ 4ರಲ್ಲಿ ಪ್ರಕಟಿಸಿದ ವರದಿ ಮೇಲ್ಮನೆಯಲ್ಲಿ ಪ್ರತಿಧ್ವನಿಸಿತು.

ಪ್ರಶ್ನೋತ್ತರ ವೇಳೆಯಲ್ಲಿ “ವೈಟ್‌ ಟಾಪಿಂಗ್‌ ರಸ್ತೆ ಅಪಘಾತಕ್ಕೆ ಹರದಾರಿ’ ಎಂಬ ಶೀರ್ಷಿಕೆಯ ವರದಿಯನ್ನು ಪ್ರಸ್ತಾಪಿಸಿದ ಬಿಜೆಪಿಯ ಹಿರಿಯ ಸದಸ್ಯ ರಾಮಚಂದ್ರಗೌಡ, ಸುಗಮ ಸಂಚಾರಕ್ಕಾಗಿ ಸರ್ಕಾರ ವೈಟ್‌ ಟಾಪಿಂಗ್‌ ವಿಧಾನದಡಿ ಅಭಿವೃದ್ಧಿಪಡಿಸಿದ ರಸ್ತೆಗಳಲ್ಲಿ ಅಪಘಾತ ಹೆಚ್ಚಾಗುತ್ತಿರುವ ಬಗ್ಗೆ ಪತ್ರಿಕಾ ವರದಿ ಉಲ್ಲೇಖೀಸಿ ಆತಂಕ ವ್ಯಕ್ತಪಡಿಸಿದರು.

ಹೊರ ವರ್ತುಲ ರಸ್ತೆಯಲ್ಲಿ ಮೂರು ಕಿ.ಮೀ ಉದ್ದದ ವೈಟ್‌ ಟಾಪಿಂಗ್‌ ರಸ್ತೆಯಲ್ಲಿ ತಿಂಗಳ ಅಂತರದಲ್ಲಿ 8 ಅಪಘಾತ ಸಂಭವಿಸಿವೆ. ಇದರಲ್ಲಿ ಮೂವರು ಮೃತಪಟ್ಟು, ಆರು ಮಂದಿ ಗಾಯಗೊಂಡಿದ್ದಾರೆ. 3 ಮಾರಣಾಂತಿಕ ಹಾಗೂ 5 ಮಾರಣಾಂತಿಕವಲ್ಲದ ಅಪಘಾತಗಳು ಸಂಭವಿಸಿವೆ ಎಂಬುದಾಗಿ ಉದಯವಾಣಿ ಪ್ರಕಟಿಸಿದ್ದ ವರದಿ ಉಲ್ಲೇಖೀಸಿದ ಅವರು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ತಾಕೀತು ಮಾಡಿದರು.

ಮೈಮೇಲಿನ ಬಟ್ಟೆ ಹರಿದಿದೆ: “ಮೈಮೇಲಿನ ಬಟ್ಟೆ ಹರಿದಿದೆ, ಟೈಲರ್‌ ಬಳಿ ಬಟ್ಟೆ ಹೊಲಿಸಲು ಹೋಗುತ್ತಿದ್ದೇವೆ’ ಎಂಬಂತಾಗಿದೆ ಬಿಬಿಎಂಪಿ ಕಾರ್ಯ ನಿರ್ವಹಣೆ. ರಸ್ತೆಗಳೆಲ್ಲಾ ಗುಂಡಿಬಿದ್ದು ಹಾಳಾಗಿರುವಾಗ ವೈಟ್‌ ಟಾಪಿಂಗ್‌ ಅಡಿ ಅಭಿವೃದ್ಧಿಪಡಿಸುವ ಅಗತ್ಯವಿದೆಯೇ. ಒಂದೆಡೆ ವೈಟ್‌ ಟಾಪಿಂಗ್‌ ರಸ್ತೆಯಲ್ಲಿ ಅಪಘಾತ ಹೆಚ್ಚಾಗುತ್ತಿದ್ದರೆ ಇನ್ನೊಂದೆಡೆ ಸುಸ್ಥಿತಿಯ ಉತ್ತಮ ರಸ್ತೆಯನ್ನು ವೈಟ್‌ ಟಾಪಿಂಗ್‌ನಡಿ ಅಭಿವೃದ್ಧಿಪಡಿಸಲು ಮುಂದಾಗಿರುವುದು ಸರಿಯಲ್ಲ ಎಂದು ಹೇಳಿದರು.

15 ದಿನದಲ್ಲಿ ಗುಂಡಿ ಮುಚ್ಚುವಿರಾ?: “ನನ್ನ ಅವಧಿಯಲ್ಲಿ 10,000 ಮದುವೆಗಳಿಗೆ ಹಾಜರಾಗಿದ್ದು, ನಗರದ ರಸ್ತೆಗಳ ಸ್ಥಿತಿಗತಿಯ ಸಂಪೂರ್ಣ ಅರಿವಿದೆ. ಪ್ರಮುಖ ಸಂಪರ್ಕ ರಸ್ತೆಗಳು, ಬಿಎಂಟಿಸಿ ಬಸ್‌ ಸಂಚರಿಸುವ ಮಾರ್ಗಗಳು ಗುಂಡಿಮಯವಾಗಿವೆ. ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಕೂಡಲೇ ರಸ್ತೆ ದುರಸ್ತಿಪಡಿಸಲು ಸಂಬಂಧಪಟ್ಟ ಗುತ್ತಿಗೆದಾರರಿಗೆ ಸೂಚಿಸಬೇಕು. ಹೆಚ್ಚುವರಿ ಹಣ ನೀಡಿಯಾದರೂ ದುರಸ್ತಿ ಮಾಡಿಸಬೇಕು. 15 ದಿನದಲ್ಲಿ ರಸ್ತೆ ಗುಂಡಿ ಮುಚ್ಚುವಿರಾ?’ ಎಂದು ರಾಮಚಂದ್ರಗೌಡ ಪ್ರಶ್ನಿಸಿದರು.

ದಾಖಲೆ ಮಳೆಯಿಂದ ಹಿನ್ನಡೆ: ಇದಕ್ಕೆ ಉತ್ತರಿಸಿದ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌, “ನಗರದಲ್ಲಿ 14,000 ಕಿ.ಮೀ ಉದ್ದದ ರಸ್ತೆಗಳಿವೆ. ಮುಖ್ಯಮಂತ್ರಿಗಳ ನಗರೋತ್ಥಾನದಡಿ 2016-17 ಹಾಗೂ 2017-18ನೇ ಸಾಲಿನಲ್ಲಿ 2,300 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕೈಗೊಳ್ಳಬೇಕಿತ್ತು. ಮಳೆಗಾಲಕ್ಕೂ ಮುನ್ನ ಕೆಲಸ ಆರಂಭಕ್ಕೆ ಸಿದ್ಧತೆ ನಡೆಸಿತ್ತು. ಆದರೆ ದಾಖಲೆ ಮಳೆಯಾಗಿದ್ದರಿಂದ ಹಿನ್ನಡೆಯಾಯಿತು.

ನಗರದಲ್ಲಿ ವರ್ಷಕ್ಕೆ 900 ಮಿ.ಮೀ. ಮಳೆಯಾಗುತ್ತದೆ. ಆದರೆ ಕಳೆದ ಬಾರಿ ಎರಡು ತಿಂಗಳಲ್ಲಿ 700 ಮಿ.ಮೀ ಮಳೆಯಾಯಿತು. ಇದರಿಂದ ರಸ್ತೆಗಳು ಹಾಳಾದವು. ಇದೀಗ ರಸ್ತೆ ಅಭಿವೃದ್ಧಿ ಸಮರೋಪಾದಿಯಲ್ಲಿ ನಡೆದಿದೆ. ವೈಟ್‌ ಟಾಪಿಂಗ್‌ ರಸ್ತೆ 35ರಿಂದ 40 ವರ್ಷ ಬಾಳಿಕೆ ಬರುತ್ತದೆ. ಸಂಚಾರ ದಟ್ಟಣೆ ನಡುವೆ ಕೆಲಸ ಮಾಡಬೇಕಿರುವುದರಿಂದ ತುಸು ವಿಳಂಬವಾಗಿದೆ,’ ಎಂದು ತಿಳಿಸಿದರು.

ಜಾಗರೂಕರಾಗಿ ಚಾಲನೆ ಮಾಡಿ: “ವೈಟ್‌ ಟಾಪಿಂಗ್‌ನಡಿ ರಸ್ತೆ ಉತ್ತಮವಾಗಿದೆ ಎಂಬ ಕಾರಣಕ್ಕೆ ವೇಗವಾಗಿ ವಾಹನ ಚಾಲನೆ ಮಾಡದೆ ಜಾಗರೂಕತೆಯಿಂದ ಚಾಲನೆ ಮಾಡಬೇಕು. ರಸ್ತೆ ಚೆನ್ನಾಗಿದೆ ಎಂಬ ಕಾರಣಕ್ಕೆ ಅಪಘಾತ ಉಂಟಾಗುವುದು ವಿಪರ್ಯಾಸ. ವಿದೇಶಗಳಲ್ಲಿ ಸೂಕ್ತ ತರಬೇತಿ ನಂತರವಷ್ಟೇ ಚಾಲನಾ ಪರವಾನಗಿ ನೀಡಲಾಗುತ್ತದೆ. ನಮ್ಮಲ್ಲಿ ಉದಾರತೆಯಿಂದ ಚಾಲನಾ ಪರವಾನಗಿ ನೀಡಲಾಗುತ್ತದೆ. ವಾಹನ ಚಾಲನೆ ವೇಳೆ ಎಚ್ಚರ ವಹಿಸುವುದು ಮುಖ್ಯ,’ ಎಂದು ಸಚಿವ ಜಾರ್ಜ್‌ ಹೇಳಿದರು.

ನನ್ನ ಕಾಲದಲ್ಲೂ ಇತ್ತು- ನಿಮ್ಮ ಕಾಲದಲ್ಲೂ ಇದೆ: “ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಪಾದಚಾರಿ ಮಾರ್ಗ, ರಸ್ತೆಗಳಲ್ಲಿ ಹರಡುವುದರಿಂದ ಮಳೆ ಸುರಿದಾಗ ಅನಾಹುತಗಳು ಸಂಭವಿಸುತ್ತಿವೆ. ಇದನ್ನು ತಡೆಗಟ್ಟಬೇಕಾದ ಎಂಜಿನಿಯರ್‌ಗಳು ಕಲೆಕ್ಷನ್‌ ಮಾಡಿಕೊಂಡು ಹೋಗುತ್ತಾರೆ. ನನ್ನ ಕಾಲದಲ್ಲೂ ಈ ಸಮಸ್ಯೆ ಇತ್ತು. ನಿಮ್ಮ ಕಾಲದಲ್ಲೂ ಇದೆ,” ಎಂದು ಬಿಜೆಪಿಯ ರಾಮಚಂದ್ರಗೌಡ ಹೇಳಿದರು. ಇದಕ್ಕೆ ಸಚಿವ ಕೆ.ಜೆ.ಜಾರ್ಜ್‌ ಪ್ರತಿಕ್ರಿಯಿಸಿ, “ಹಿಂದೆಲ್ಲಾ ಎಂಜಿನಿಯರ್‌ಗಳು ಎಲ್ಲ ಜವಾಬ್ದಾರಿ ನಿರ್ವಹಿಸುತ್ತಿದ್ದರು. ಇದೀಗ ಎಲ್ಲ ಕೆಲಸವನ್ನು ಹೊರ ಗುತ್ತಿಗೆ ನೀಡಲಾಗಿದೆ. ಇಷ್ಟಾದರೂ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವುದಿಲ್ಲ,’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.