ಕೂಲಿ ಅರಸಿ ನಗರಕ್ಕೆ ಬಂದಿದ್ದ ದಂಪತಿಯ ಪುತ್ರಿ ಕಾರಿಗೆ ಬಲಿ
Team Udayavani, Feb 26, 2017, 11:39 AM IST
ಬೆಂಗಳೂರು: ಜಾಲಹಳ್ಳಿ ಠಾಣೆ ವ್ಯಾಪ್ತಿಗಳಲ್ಲಿ ಶುಕ್ರವಾರ ಮಧ್ಯಾಹ್ನನ ನಡೆದ ಅಪಘಾತದಲ್ಲಿ ವರ್ಷದ ಬಾಲಕಿ ಸೇರಿದಂತೆ ಮೂವರು ಮೃತಪಟ್ಟಿದೆ. ಕವಿತಾ ಸಾವಿಗೀಡಾದ ಬಾಲಕಿ. ಹೆಸರುಘಟ್ಟ ಸಮೀಪದ ಪುಟ್ಟಸ್ವಾಮಿ ಲೇಔಟ್‌ನಲ್ಲಿ ಕಾರು ಹರಿದು ಮೂರು ವರ್ಷದ ಬಾಲಕಿ ಕವಿತಾ ಮೃತಪಟ್ಟಿದ್ದಾಳೆ.
ಕವಿತಾ, ಯಾದಗಿರಿ ಮೂಲದ ಅಶೋಕ್ ಹಾಗೂ ರೇಣುಕಾ ದಂಪತಿಯ ಪುತ್ರಿ. ಅಶೋಕ್ ದಂಪತಿ ಒಂದೂವರೆ ತಿಂಗಳ ಹಿಂದೆ ಕೆಲಸ ಅರಸಿ ನಗರಕ್ಕೆ ಬಂದಿತ್ತು. ಪುಟ್ಟಸ್ವಾಮಿ ಲೇಔಟ್‌ನಲ್ಲಿನ ನಿರ್ಮಾಣ ಹಂತದ ಕಟ್ಟಡದಲ್ಲಿ ದಂಪತಿ ಕೆಲಸಕ್ಕಿದ್ದರು. ಶನಿವಾರ ಮಗುವನ್ನು ಆಟವಾಡಲು ಬಿಟ್ಟು ದಂಪತಿ ಕೆಲಸದಲ್ಲಿ ತೊಡಗಿದ್ದರು.
ಮಧ್ಯಾಹ್ನ 1.30ರ ಸುಮಾರಿಗೆ ಕವಿತಾ ಕಟ್ಟಡದ ಮುಂದೆ ಆಟವಾಡುತ್ತಿದ್ದಳು. ಅದೇ ವೇಳೆ ನಿರ್ಮಾಣ ಹಂತದ ಕಟ್ಟಡದ ಮಾಲೀಕ ರಾಮಚಂದ್ರ ಅವರು ಅಲ್ಲಿಯೇ ಇದ್ದ ಮರದ ಕೆಳಗೆ ಕಾರು ನಿಲ್ಲಿಸುವ ಸಲುವಾಗಿ ವಾಹನವನ್ನು ಹಿಮ್ಮುಖವಾಗಿ ಚಲಾಯಿಸಿದ್ದಾರೆ.
ಈ ವೇಳೆ ಹಿಂದೆ ಇದ್ದ ಬಾಲಕಿ ಮೇಲೆ ಕಾರು ಹರಿದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ಅದೇ ಕಾರಿನಲ್ಲಿ ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ದಾರಿಮಧ್ಯೆ ಮೃತಪಟ್ಟಿದ್ದಾಳೆ. ಘಟನೆ ಸಂಬಂಧ ನಿರ್ಲಕ್ಷ್ಯ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ರಾಮಚಂದ್ರ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಾಲಹಳ್ಳಿ ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.