ಬಡಪಾಯಿ ಡಿ-ಗ್ರೂಪ್ ನೌಕರರ ಮೇಲೆ ಪ್ರಯೋಗವೇಕೆ? ಮಂತ್ರಿಗಳು ಲಸಿಕೆ ಪಡೆದು ಮಾದರಿಯಾಗಲಿ:ಖಾದರ್
Team Udayavani, Jan 16, 2021, 3:21 PM IST
ಬೆಂಗಳೂರು: ಲಸಿಕೆ ಬಂದಿರುವುದು ಸಂತೋಷ, ಬಡಪಾಯಿ ಡಿ ಗ್ರೂಪ್ ನೌಕರರ ಮೇಲೆ ಲಸಿಕೆಗೆ ಪ್ರಯೋಗ ಮಾಡುವ ಮೊದಲು ಆಡಂಬರದಿಂದ ಉದ್ಘಾಟನೆ ಮಾಡುವ ಮಂತ್ರಿಗಳು ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಮೊದಲ ಲಸಿಕೆ ಪಡೆದು ಮಾದರಿ ಆಗಲಿ ಎಂದು ಶಾಸಕ ಯುಟಿ ಖಾದರ್ ತಿಳಿಸಿದ್ದಾರೆ.
ಕೋವಿಡ್ ಲಸಿಕೆ ವಿತರಣೆಗೆ ದೇಶಾದ್ಯಂತ ಇಂದು ಚಾಲನೆ ದೊರೆತ ಬೆನ್ನಲ್ಲೆ ಟ್ವೀಟ್ ಮಾಡಿದ ಖಾದರ್, ಬಡಪಾಯಿ ಡಿ ಗ್ರೂಪ್ ನೌಕರರ ಮೇಲೆ ಲಸಿಕೆ ಪ್ರಯೋಗ ಮಾಡುವುದಕ್ಕಿಂತ ಆಡಂಬರದಿಂದ ಉದ್ಘಾಟನೆ ಮಾಡುವ ಮಂತ್ರಿಗಳು, ಅಧಿಕಾರಿಗಳು ಲಸಿಕೆ ಪಡೆಯಲಿ ಎಂದು ಒತ್ತಾಯಿಸಿದ್ದಾರೆ.
ಲಸಿಕೆಯ ಪರಿಣಾಮಕಾರಿತ್ವವನ್ನು ಕಾಂಗ್ರೆಸ್ ಪ್ರಶ್ನಿಸಿದ್ದು, ಏತಕ್ಕಾಗಿ ಯಾವುದೇ ಸರ್ಕಾರಿ ಅಧಿಕಾರಿಗಳು ಅಥವಾ ಮಂತ್ರಿಗಳು ಲಸಿಕೆ ಪಡೆಯಲು ಮುಂದಾಗಿಲ್ಲ ಎಂದು ಟ್ವೀಟ್ ಮೂಲಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಲಸಿಕೆ ಬಂದಿರುವುದು ಸಂತೋಷ.ಬಡಪಾಯಿ ಡಿ ಗ್ರೂಪ್ ನೌಕರರ ಮೇಲೆ ಲಸಿಕೆಗೆ ಪ್ರಯೋಗ ಮಾಡುವ ಮೊದಲು ಆಡಂಬರದಿಂದ ಉದ್ಘಾಟನೆ ಮಾಡುವ ಮಂತ್ರಿಗಳು ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಮೊದಲ ಲಸಿಕೆ ಪಡೆದು ಮಾದರಿ ಆಗಲಿ ಎಂಬುದು ಜನರ ಪರವಾಗಿ ನನ್ನ ವಿನಂತಿ. @BSYBJP @KotasBJP @AngaraSBJP #People‘s #safety #is #govt #responsibility.
— UT Khadér (@utkhader) January 16, 2021
ಇದನ್ನೂ ಓದಿ: ಅಡ್ಡಪರಿಣಾಮ ಆಗಲಿಲ್ಲ, ಆರೋಗ್ಯವಾಗಿದ್ದೇವೆ: ಕೋವಿಶೀಲ್ಡ್ ಲಸಿಕೆ ಪಡೆದವರ ಅನುಭವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಪ್ರೋತ್ಸಾಹ ಧನ: ಸಚಿವ ಶಿವಾನಂದ ಪಾಟೀಲ್
Congress; ಸುರ್ಜೇವಾಲ ವಿರುದ್ಧ ಸಚಿವರಿಂದಲೇ ದೂರು?: ಸತೀಶ್ ಜಾರಕಿಹೊಳಿ ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.