ಈಡೇರುತ್ತಾ ಬಿಜೆಪಿಯೇತರ ಮೈತ್ರಿ ಕೂಟ ಕನಸು?


Team Udayavani, May 22, 2018, 6:00 AM IST

congress-jds-ssa.jpg

ಬೆಂಗಳೂರು: ರಾಜ್ಯಾಧಿಕಾರಕ್ಕಾಗಿ ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡಿದ್ದರೂ ಮುಂಬರುವ ಚುನಾವಣೆಗಳಲ್ಲಿ ಈ ಮೈತ್ರಿ ಮುಂದುವರಿಸುವ ಬಗ್ಗೆ ಜೆಡಿಎಸ್‌ನಲ್ಲಿ ಹೆಚ್ಚಿನ ಆಸಕ್ತಿ ಕಂಡುಬರುತ್ತಿಲ್ಲ. ಹೀಗಾಗಿ ಬಿಜೆಪಿಯೇತರ ಮೈತ್ರಿಕೂಟ ರಚನೆಗೆ ಆರಂಭದಲ್ಲೇ ವಿಗ್ನ ಎದುರಾಗುವಂತಾಗಿದೆ.

ಇದಕ್ಕೆ ಕಾರಣ ಕಾಂಗ್ರೆಸ್‌ ಜತೆ ಹೊಂದಾಣಿಕೆ ಮಾಡಿಕೊಂಡ ಬಳಿಕ ರಾಜ್ಯದಲ್ಲಿ ಜೆಡಿಎಸ್‌ ಅನುಭವಿಸಿದ ಸಮಸ್ಯೆಗಳು ಮತ್ತು ಪಕ್ಷ ಒಡೆದು ಹೋಗಿರುವುದು. ಹೀಗಾಗಿ ಈ ಮೈತ್ರಿಯನ್ನು ಸರ್ಕಾರದಿಂದ ಹೊರಗೆ ವಿಸ್ತರಿಸುವುದು ಬೇಡ ಎಂಬ ಅಭಿಪ್ರಾಯ ಜೆಡಿಎಸ್‌ನ ಒಂದು ವರ್ಗದಲ್ಲಿ ಕೇಳಿಬಂದಿದೆ. ಈ ವಿಚಾರವನ್ನು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರ ಗಮನಕ್ಕೂ ತರಲಾಗಿದೆ. ಮುಂದಿನ ನಿರ್ಧಾರ ದೇವೇಗೌಡ ಮತ್ತು ಕುಮಾರಸ್ವಾಮಿ ಅವರಿಗೆ ಬಿಟ್ಟಿದ್ದು ಎಂದು ಪಕ್ಷದ ಮೂಲಗಳು ತಿಳಿಸಿವೆ.

2004ರಲ್ಲಿ ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿತ್ತು. ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಜಾತ್ಯತೀತ ಪಕ್ಷಗಳು ಒಂದಾಗಬೇಕು ಎಂಬ ಕಾರಣಕ್ಕೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸೇರಿ ಸರ್ಕಾರ ರಚಿಸಿದ್ದವು. ಆದರೆ, 20 ತಿಂಗಳಲ್ಲೇ ಈ ಮೈತ್ರಿ ಮುರಿದುಬಿತ್ತು. ಕಾಂಗ್ರೆಸ್‌ ಪಕ್ಷ ಜೆಡಿಎಸ್‌ ಒಡೆಯಲು ಮುಂದಾಗಿದೆ ಎಂಬ ಕಾರಣಕ್ಕಾಗಿ ಮೈತ್ರಿ ಮುರಿದುಕೊಂಡ ಎಚ್‌.ಡಿ.ಕುಮಾರಸ್ವಾಮಿ ಬಿಜೆಪಿ ಜತೆ ಸೇರಿ ಸರ್ಕಾರ ರಚಿಸಿದ್ದರು.

ಇದರ ಪರಿಣಾಮ ಜೆಡಿಎಸ್‌ ಒಡೆದು ಹೋಗಿತ್ತು. ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಸೇರಿದಂತೆ ಹಲವು ಪ್ರಮುಖರು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ್ದರು. ಇದರ ಪರಿಣಾಮ 2008 ಮತ್ತು 2013ರ ಚುನಾವಣೆಯಲ್ಲಿ ಮಾತ್ರವಲ್ಲ, ಇದುವರೆಗೂ ಜೆಡಿಎಸ್‌ ಪೂರ್ಣ ಸುಧಾರಿಸಿಕೊಳ್ಳಲು ಸಾಧ್ಯವಾಗಿಲ್ಲ. ಅಷ್ಟೇ ಅಲ್ಲ, 2006ರಲ್ಲಿ ಜೆಡಿಎಸ್‌ ತೊರೆದಿದ್ದ ಸಿದ್ದರಾಮಯ್ಯ ಮತ್ತೆ ಜೆಡಿಎಸ್‌ ಒಡೆದು ಏಳು ಮಂದಿ ಶಾಸಕರನ್ನು ತಮ್ಮೊಂದಿಗೆ ಕರೆಸಿಕೊಂಡರು. ಇದೆಲ್ಲದರ ಪರಿಣಾಮ ಎಚ್‌.ಡಿ.ದೇವೇಗೌಡ, ಎಚ್‌.ಡಿ.ಕುಮಾರಸ್ವಾಮಿ ಹೊರತಾಗಿ ಪಕ್ಷದಲ್ಲಿ ರಾಜ್ಯ ಮಟ್ಟದ ನಾಯಕರೇ ಇಲ್ಲ ಎನ್ನುವ ಸ್ಥಿತಿ ಈಗಲೂ ಇದೆ. ಅಷ್ಟೇ ಅಲ್ಲ, ಈಗಲೂ ಹಳೇ ಮೈಸೂರು ಪ್ರದೇಶ ಹೊರತಾಗಿ ಜೆಡಿಎಸ್‌ಗೆ ಸರಿಯಾದ ನೆಲೆಯೇ ಇಲ್ಲ ಎನ್ನುವಂತಾಗಿದೆ.

ಮತ್ತೆ ಜೆಡಿಎಸ್‌ ಒಡೆಯುವ ಆತಂಕ: ಈ ಹಿಂದೆ ಜನತಾ ಪರಿವಾರ ಒಟ್ಟಾಗಿದ್ದಾಗಲೂ ಅದು ಒಡೆದು ಹೋಳಾಗುವುದರಲ್ಲಿ ಪಕ್ಷದ ನಾಯಕರೊಳಗಿದ್ದ ಭಿನ್ನಮತಕ್ಕೆ ನೀರೆರೆದು ಪೋಷಿಸಿದ್ದು ಕೂಡ ಇದೇ ಕಾಂಗ್ರೆಸ್‌. ಇದರ ಪರಿಣಾಮವೇ ಭಿನ್ನಮತ ಸ್ಫೋಟಗೊಂಡು ಒಬ್ಬೊಬ್ಬರು ಒಂದೊಂದು ಕಡೆ ಎನ್ನುವಂತಾಗಿತ್ತು ಎನ್ನುವುದು ಮೊದಲಿನಿಂದಲೂ ಜನತಾ ಪರಿವಾರದಲ್ಲಿದ್ದ ಮುಖಂಡರ ಅಭಿಪ್ರಾಯ.

ಪ್ರಸ್ತುತ ರಾಜ್ಯದಲ್ಲಿ ಜೆಡಿಎಸ್‌ ಸರ್ಕಾರ ರಚಿಸಲು ಕಾಂಗ್ರೆಸ್‌ ಬೇಷರತ್‌ ಬೆಂಬಲ ಘೋಷಿಸಿದೆಯಾದರೂ ಅದರ ಹಿಂದೆ ಕಾಂಗ್ರೆಸ್‌ ಮುಕ್ತ ಭಾರತ ನಿರ್ಮಾಣ ಮಾಡುವ ಬಿಜೆಪಿಯ ಘೋಷಣೆಯನ್ನು ಹತ್ತಿಕ್ಕುವ ಪ್ರಯತ್ನವಿದೆ. ಇದರ ಅರ್ಥ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಪಕ್ಷವನ್ನು ಬಲಗೊಳಿಸುವುದು. ಆಗ ಮತ್ತೆ ಜೆಡಿಎಸ್‌ ಒಡೆಯುವ ಪ್ರಯತ್ನಕ್ಕೆ ಕೈಹಾಕುವ ಸಾಧ್ಯತೆ ಇದೆ. ಏಕೆಂದರೆ, 2006ರಲ್ಲಿ ಜೆಡಿಎಸ್‌ ಒಡೆದು ಕಾಂಗ್ರೆಸ್‌ಗೆ ಹೋದ ಸಿದ್ದರಾಮಯ್ಯ ಅವರೇ ಆ ಪಕ್ಷದ ಮುಂಚೂಣಿ ನಾಯಕರಲ್ಲಿ ಒಬ್ಬರಾಗಿದ್ದು, ಕಾಂಗ್ರೆಸ್‌ ಹೈಕಮಾಂಡ್‌ ಜತೆಗೂ ಒಳ್ಳೆಯ ಸಂಬಂಧ ಹೊಂದಿದ್ದಾರೆ. ಹೀಗಾಗಿ ಕಾಂಗ್ರೆಸ್‌ ಜತೆಗಿನ ಮೈತ್ರಿಯನ್ನು ಸರ್ಕಾರ ರಚನೆಗಷ್ಟೇ ಸೀಮಿತಗೊಳಿಸಬೇಕು. ಯಾವುದೇ ಕಾರಣಕ್ಕೂ ಚುನಾವಣಾ ಹೊಂದಾಣಿಕೆ ಬೇಡ ಎಂದು ಒಂದು ಗುಂಪು ಪಕ್ಷದ ಹಿರಿಯ ನಾಯಕರ ಮುಂದೆ ಬಲವಾಗಿ ವಾದಿಸುತ್ತಿದೆ ಎಂದು ಮೂಲಗಳು ಹೇಳಿವೆ.

ಕಾರಣವೇನು?
– ಕಾಂಗ್ರೆಸ್‌ ಜತೆ ಹೊಂದಾಣಿಕೆ ಮಾಡಿಕೊಂಡ ಬಳಿಕ ರಾಜ್ಯದಲ್ಲಿ ಜೆಡಿಎಸ್‌ ಅನುಭವಿಸಿದ ಸಮಸ್ಯೆಗಳು
ಮತ್ತು ಪಕ್ಷ ಒಡೆದು ಹೋಗಿರುವುದು.

– 2004ರಲ್ಲಿ ಕಾಂಗ್ರೆಸ್‌ ಪಕ್ಷ ಜೆಡಿಎಸ್‌ ಒಡೆಯಲು ಮುಂದಾಗಿದೆ ಎಂಬ ಕಾರಣಕ್ಕೆ ಮೈತ್ರಿ ಮುರಿದುಕೊಂಡ ಕುಮಾರಸ್ವಾಮಿ ಬಿಜೆಪಿ ಜತೆ ಸೇರಿ ಸರ್ಕಾರ ರಚಿಸಿದ್ದರು

– ಈ ಹಿಂದೆ ಜನತಾ ಪರಿವಾರ ಒಟ್ಟಾಗಿದ್ದಾಗಲೂ ಅದು ಒಡೆದು ಹೋಳಾಗುವುದರಲ್ಲಿ ಪಕ್ಷದ ನಾಯಕರೊಳಗಿದ್ದ ಭಿನ್ನಮತಕ್ಕೆ ನೀರೆರೆದು ಪೋಷಿಸಿದ್ದು ಇದೇ ಕಾಂಗ್ರೆಸ್‌ ಎಂಬ ಅಭಿಪ್ರಾಯ  ಜೆಡಿಎಸ್‌ ಸರ್ಕಾರ ರಚಿಸಲು ಕಾಂಗ್ರೆಸ್‌ ಬೆಂಬಲ ಘೋಷಿಸಿದೆಯಾದರೂ ಅದರ ಹಿಂದೆ ಕಾಂಗ್ರೆಸ್‌ ಮುಕ್ತ ಭಾರತ ನಿರ್ಮಾಣ ಮಾಡುವ ಬಿಜೆಪಿಯ ಘೋಷಣೆಯನ್ನು ಹತ್ತಿಕ್ಕುವ ಪ್ರಯತ್ನವಿದೆ. ಇದರ ಅರ್ಥ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಪಕ್ಷವನ್ನು ಬಲಗೊಳಿಸುವುದು.

– ಪ್ರದೀಪ್‌ ಕುಮಾರ್‌ ಎಂ.

ಟಾಪ್ ನ್ಯೂಸ್

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.