ಪತಿಯ ಕುತ್ತಿಗೆಯ ಮೇಲೆ ಕಾಲಿಟ್ಟು ಕೊಂದ ಪತ್ನಿ!
Team Udayavani, Apr 13, 2021, 9:12 AM IST
ಬೆಂಗಳೂರು: ಪತ್ನಿಯೇ ಪತಿಯ ಕುತ್ತಿಗೆ ಮೇಲೆ ಕಾಲಿಟ್ಟು ಹತ್ಯೆಗೈದಿರುವ ಘಟನೆ ಜೆ.ಜೆ. ನಗರ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ. ಓಬಳೇಶ್ ಕಾಲೋನಿ ನಿವಾಸಿ ಮೋಹನ್ (41) ಮೃತರು. ಪತ್ನಿ ಪದ್ಮಾ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಮೋಹನ್ ಮತ್ತು ಪದ್ಮಾ ಬಿಬಿಎಂಪಿ ಪೌರ ಕಾರ್ಮಿಕರಾಗಿದ್ದು, ಮೋಹನ್ ಕಸದ ಆಟೋ ಚಾಲಕನಾಗಿದ್ದಾನೆ. 2004ರಲ್ಲಿ ಮೋಹನ್, ಪದ್ಮಾ ಮದುವೆಯಾಗಿದ್ದು, ದಂಪತಿಗೆ ಮೂವರು ಗಂಡು ಮಕ್ಕಳಿದ್ದಾರೆ. ಮೋಹನ್‌ಗೆ ಮದ್ಯ ಸೇವನೆ ಚಟವಿತ್ತು. ಜತೆಗೆ ಇತ್ತೀಚೆಗೆ ಆನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಆರು ತಿಂಗಳ ಹಿಂದೆ ಕುಡಿತದ ಚಟ ಬಿಡಿಸುವ ಪುರ್ನವಸತಿ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಅಲ್ಲಿಂದ ಬಂದ ಕೆಲ ದಿನ ಗಳ ಕಾಲ ಮೋಹನ್ ಮದ್ಯದಿಂದ ದೂರವಿದ್ದರು. ಅನಂತರ ಮತ್ತೆ ಕುಡಿಯಲು ಆರಂಭಿಸಿದ್ದರು. ಅದೇ ವಿಚಾರಕ್ಕೆ ದಂಪತಿ ನಡುವೆ ಗಲಾಟೆಯಾಗಿದೆ.
ಇದನ್ನೂ ಓದಿ:ಜಾರಕಿಹೊಳಿ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್:ಸಿಡಿ ಲೇಡಿಯ ಮತ್ತೊಂದು ವಿಡಿಯೋ, ರಮೇಶ್ ಗೆ ಸಂಕಷ್ಟ
ಮದ್ಯದ ವಿಚಾರಕ್ಕೆ ಜಗಳ, ಕೊಲೆ ಭಾನುವಾರ ಮಧ್ಯಾಹ್ನ ಮೋಹನ್ ಕಂಠಪೂರ್ತಿ ಮದ್ಯ ಸೇವಿಸಿ ಮನೆಗೆ ಬಂದು, ಪತ್ನಿ ಜತೆ ಜಗಳವಾಡಿದ್ದಾನೆ. ಈ ವೇಳೆ ಕುಡಿಯಲು ಹಣ ಕೊಡುವಂತೆ ಪತ್ನಿಗೆ ಒತ್ತಾಯಿಸಿದ್ದರು. ಅದರಿಂದ ಆಕ್ರೋಶಗೊಂಡ ಪತ್ನಿ ಹಣ ಕೊಡುವುದಿಲ್ಲ. ಎಳನೀರು ತರುವಂತೆ ಪತಿಗೆ ಹೇಳಿದ್ದಾರೆ. ಆಗ ಮತ್ತೂಮ್ಮೆ ಇಬ್ಬರ ನಡುವೆ ಜಗಳ ನಡೆದಿತ್ತು.
ಅನಂತರ ಮಧ್ಯಾಹ್ನ 3.15ರ ಸುಮಾರಿಗೆ ಮತ್ತೆ ಮೋಹನ್ ಪತ್ನಿ ಜತೆ ಅದೇ ವಿಚಾರವಾಗಿ ಜಗಳವಾಡಿದ್ದು, ಹಲ್ಲೆ ನಡೆಸಲು ಬಂದ ಪತಿಯನ್ನು ಪದ್ಮಾ ಪಕ್ಕಕ್ಕೆ ತಳ್ಳಿದ್ದಾಳೆ. ಈ ವೇಳೆ ಕೆಳಗೆ ಬಿದ್ದ ಮೋಹನ್ ಕುತ್ತಿಗೆ ಮೇಲೆ ಕಾಲಿಟ್ಟು ತುಳಿದಿದ್ದಾರೆ. ಆಗ ಅಸ್ವಸ್ಥಗೊಂಡ ಮೋಹನ್‌ನನ್ನು ಆಕೆಯೇ ಸ್ಥಳೀಯರ ನೆರವಿನೊಂದಿಗೆ ಸಮೀಪದ ಆಸ್ಪತ್ರೆಗೆ ಕರೆ ದೊಯ್ದು, ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್‌ಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.
ಇದನ್ನೂ ಓದಿ: ಲಾಕ್‌ಡೌನ್ ಮದ್ದಲ್ಲ : ಪರೀಕ್ಷೆ, ಲಸಿಕೆ ಹೆಚ್ಚಿಸಿ: ತಜ್ಞರು, ವೈದ್ಯರ ಸಲಹೆ
ಸೋಮವಾರ ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ ಸಂಬಂಧಿಕರೊಬ್ಬರು ದೂರು ನೀಡಿದ್ದು, ಜೆ.ಜೆ. ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಪದ್ಮಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯಾಂಶ ತಿಳಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.