ಗುಜರಾತ್ ಫಲಿತಾಂಶದಿಂದ ರಾಜ್ಯ ರಾಜಕೀಯದಲ್ಲೇನಾಗಬಹುದು?
Team Udayavani, Dec 18, 2017, 6:25 AM IST
ಬೆಂಗಳೂರು: ಸೋಮವಾರ ಹೊರಬೀಳಲಿರುವ ಗುಜರಾತ್ ವಿಧಾನಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜ್ಯಕಾರಣದಲ್ಲೂ ಸಾಕಷ್ಟು ಬದಲಾವಣೆ ತರಲಿದ್ದು, ಪಕ್ಷಾಂತರ ಪರ್ವಕ್ಕೆ ವೇದಿಕೆ ಸಿದ್ಧವಾಗಲಿದೆ. ಈ ನಿಟ್ಟಿನಲ್ಲಿ ರಾಜ್ಯದ ಮೂರು ಪ್ರಮುಖ ಪಕ್ಷಗಳ ಮೇಲೆ ಫಲಿತಾಂಶ ಯಾವ ರೀತಿಯ ಪರಿಣಾಮ ಬೀರಬಹುದು ಎಂಬ ಬಗ್ಗೆ ಸಣ್ಣ ಮಾಹಿತಿ ಇಲ್ಲಿದೆ.
ಬಿಜೆಪಿ ಗೆದ್ದರೆ
ಕಾಂಗ್ರೆಸ್‌ಗೆ ಆಡಳಿತ ವಿರೋಧಿ ಅಲೆ ಇನ್ನಷ್ಟು ತೀವ್ರವಾಗಬಹುದು. ಬಿಜೆಪಿಯಿಂದ ಕೆಲವು ಶಾಸಕರು ಬರುವ ನಿರೀಕ್ಷೆ ಹುಸಿಯಾಗಿ ಪಕ್ಷ ತ್ಯಜಿಸುವ ಶಾಸಕರನ್ನು ಉಳಿಸಿಕೊಳ್ಳಲು ಹೆಣಗಾಡಬೇಕು.
ಬಿಜೆಪಿಗೆ ಕಾಂಗ್ರೆಸ್ ಆಡಳಿತ ವಿರೋಧಿ ಅಲೆ ಜತೆಗೆ ಪಕ್ಷದ ಪರ ಅಲೆ ರೂಪಿಸಿ ಶಕ್ತಿ ಹೆಚ್ಚಿಸಿಕೊಳ್ಳಬಹುದು. ಅನ್ಯ ಪಕ್ಷಗಳಿಂದ ಶಾಸಕರು ಸೇರಿದಂತೆ ಸ್ಥಳೀಯ ಮುಖಂಡರನ್ನು ಸೆಳೆದುಕೊಳ್ಳಬಹುದು.
ಜೆಡಿಎಸ್‌ಗೆ ರಾಜ್ಯದಲ್ಲಿ ತನ್ನ ಬಲ ಹೆಚ್ಚಿಸಿಕೊಳ್ಳುವುದು ಕಷ್ಟಸಾಧ್ಯ ಎನ್ನುವ ವಾತಾವರಣದ ಜತೆಗೆ ಬಿಜೆಪಿಯ ಕದ ತಟ್ಟುತ್ತಿರುವ ಶಾಸಕರನ್ನು ಕಾಪಾಡಿಕೊಳ್ಳಲು ಕಸರತ್ತು ಮಾಡಬೇಕಾಗುತ್ತದೆ.
ಕಾಂಗ್ರೆಸ್ ಗೆದ್ದರೆ
ಕಾಂಗ್ರೆಸ್‌ಗೆ ಕೇಂದ್ರ ಸರ್ಕಾರದ ವೈಫಲ್ಯ ಹೇಳುತ್ತಾ ಆಡಳಿತ ವಿರೋಧಿ ಅಲೆಯಿಂದ ಪಾರಾಗುವುದರ ಜತೆಗೆ ಪಕ್ಷ ತ್ಯಜಿಸಲು ಮುಂದಾಗಿರುವ ಶಾಸಕರನ್ನು ಉಳಿಸಿಕೊಳ್ಳಲು ಅನುಕೂಲವಾಗುತ್ತದೆ.
ಬಿಜೆಪಿಗೆ ಕಾಂಗ್ರೆಸ್, ಜೆಡಿಎಸ್‌ನಿಂದ ಬರುವ ಶಾಸಕರ ಸಂಖ್ಯೆ ಕಡಿಮೆಯಾಗಲಿದೆ. ರಾಜ್ಯದಲ್ಲಿ ಅಧಿಕಾರದ ಗದ್ದುಗೆಗೇರುವ ಕನಸು ಈಡೇರಿಸಲು ಪ್ರಯತ್ನ ತೀವ್ರಗೊಳಿಸಬೇಕು.
ಜೆಡಿಎಸ್‌ನಲ್ಲಿ ಅಂತಹ ಬದಲಾವಣೆಗಳಾಗುವುದಿಲ್ಲ. ಬಿಜೆಪಿ ಕದ ತಟ್ಟುತ್ತಿರುವ ಶಾಸಕರು ಕಾಂಗ್ರೆಸ್‌ನತ್ತ ಮುಖ ಮಾಡಿದರೆ ಆಗ ಅವರನ್ನು ಉಳಿಸಿಕೊಳ್ಳಲು ಒದ್ದಾಡಬೇಕಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.