ವರ್ಷದೊಳಗೆ ಶೌಚಾಲಯ ಕಡ್ಡಾಯ
Team Udayavani, Apr 8, 2017, 12:47 PM IST
ಹುಣಸೂರು: ತಾಲೂಕಿನ ಎಲ್ಲಾ ಗ್ರಾಮ ಪಂಚಾಯ್ತಿಗಳು ಸಮರ್ಪಕ ಕುಡಿಯುವ ನೀರು ಪೂರೈಕೆ, ಎನ್‌ಆರ್‌ಇಜಿ ಯೋಜನೆಯಡಿ ಇಂಗುಗುಂಡಿ ನಿರ್ಮಿಸಲು, ಶೌಚಾಲಯ ಗುರಿ ಸಾಧಿಸಲು ಹೆಚ್ಚಿನ ಒತ್ತು ನೀಡಬೇಕು ಎಂದು ಜಿಲ್ಲಾ ಪಂಚಾಯ್ತಿ ಸಿಇಒ ಶಿವಶಂಕರ್ ತಾಕೀತು ಮಾಡಿದರು.
ತಾಲೂಕಿನ ಗಾವಡಗೆರೆ, ಮುಳ್ಳೂರು, ಗುರುಪುರ, ದೊಡ್ಡಹೆಜೂjರು, ಕಟ್ಟೆ ಮಳಲವಾಡಿ, ಹಿರಿಕ್ಯಾತನಹಳ್ಳಿ ಗ್ರಾಪಂಗಳ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಶೌಚಾಲಯ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ, ವಿವಿಧ ಯೋಜನೆಗಳ ಮನೆ ನಿರ್ಮಾಣ ಹಾಗೂ ಉದ್ಯೋಗ ಖಾತರಿ ಯೋಜನೆ ಕಾಮಗಾರಿ ಪರಿಶೀಲನೆ ನಡೆಸಿದರು.
ಜೊತೆಗೆ ತಾಪಂ, ಜಿಪಂ ಅಭಿವೃದ್ಧಿ ಕೆಲಸಗಳ ಬಗ್ಗೆ ಪರಾಮರ್ಶೆ ನಡೆಸಿದ ಅವರು, ಈ ವರ್ಷದೊಳಗೆ ಎಲ್ಲಾ ಕುಟುಂಬಗಳು ಕಡ್ಡಾಯವಾಗಿ ಶೌಚಾಲಯ ಹೊಂದುವಂತೆ ಹಾಗೂ ಉದ್ಯೋಗ ಖಾತರಿ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು. ಮುಖ್ಯವಾಗಿ ಕುಡಿಯುವ ನೀರಿಗೆ ಎಲ್ಲೂ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು.
ನಿಗದಿತ ಸಮಯದೊಳಗೆ ಸರ್ಕಾರದ ಹಣವನ್ನು ಖರ್ಚು ಮಾಡಬೇಕು ಎಂದು ತಾಪಂ ಇಒ ಕಷ್ಣಕುಮಾರ್ ಹಾಗೂ ಇತರೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
500 ಇಂಗು ಗುಂಡಿ ಕಡ್ಡಾಯ: ಬರ ಕಾಣಿಸಿಕೊಂಡಿರುವುದರಿಂದ ಗ್ರಾಮದ ಕೃಷಿ ಕಾರ್ಮಿಕರಿಗೆ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ನೀಡಬೇಕು, ಈ ಬಾರಿ ತಾಲೂಕಿನಲ್ಲಿ ನರೇಗಾ ಯೋಜನೆಯಡಿ ರೈತರ ಜಮೀನುಗಳಲ್ಲಿ ಕನಿಷ್ಠ 500 ಇಂಗು ಗುಂಡಿಗಳನ್ನು ನಿರ್ಮಿಸಬೇಕೆಂದು ಪಿಡಿಒಗಳಿಗೆ ಆದೇಶಿಸಿದರು.
ಕೆ.ಎಂ.ವಾಡಿಗೆ ಸೌಲಭ್ಯ: ಕಟ್ಟೆಮಳಲಧಿವಾಡಿಯಲ್ಲಿ ನಿವೇಶನ ರಹಿತರಿಗಾಗಿ ರಚಿಸುತ್ತಿರುವ ನಿವೇಶನ ಕಾಮಗಾರಿಯನ್ನು ತಿಂಗಳೊಳಗೆ ಮುಗಿಸುವ ಜೊತೆಗೆ ಕುಡಿಯುವ ನೀರು, ಸ್ವತ್ಛತೆ, ಶೌಚಾಲಯ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಪಿಡಿಒ ರಾಮಣ್ಣರಿಗೆ ಆದೇಶಿಸಿದರು.
ಗಿರಿಜನ ಪುನರ್ವಸತಿ ಕೇಂದ್ರಕ್ಕೆ ಭೇಟಿ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿಗೊಂಡಿರುವ ನಾಗಾಪುರ 2,3,4,5 ಮತ್ತು 6ನೇ ಗಿರಿಜನ ಕೇಂದ್ರಗಳಿಗೆ ಭೇಟಿ ನೀಡಿದ ಸಿಇಒ, ಜೇನುಕುರುಬ ಕುಟುಂಬಗಳಿಗೆ ನಿರ್ಮಿಸುತ್ತಿರುವ ಮನೆಗಳ ನಿರ್ಮಾಣ ವೀಕ್ಷಿಸಿ, ಆದಿವಾಸಿಗಳ ಸಂಸ್ಕೃತಿ, ಅವರ ಆಶಯದಂತೆ ಕೇರಳ ಮಾದರಿಯಲ್ಲಿ ಮನೆಗಳನ್ನು ನಿರ್ಮಿಸಿಕೊಡುವ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ ಎಂದರು.
ತಾಲೂಕಿನಲ್ಲಿ ನಿರ್ಮಿಸುತ್ತಿರುವ 21 ಅಂಗನವಾಡಿ ಕಟ್ಟಡಗಳು ಶೀಘ್ರ ಪೂರ್ಣಗೊಳ್ಳುವಂತೆ ನೋಡಿಕೊಳ್ಳಬೇಕೆಂದು ಸಿಡಿಪಿಒ ನವೀನ್ ಕುಮಾರ್ ಹಾಗೂ ಸಂಬಂಧಿಸಿದ ಎಂಜಿನಿಯರ್‌ಗಳಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
VijayHazareTrophy: ಪಡಿಕ್ಕಲ್ ಶತಕ; ಬರೋಡಾ ವಿರುದ್ದ ಗೆದ್ದು ಸೆಮಿ ಪ್ರವೇಶಿಸಿದ ಕರ್ನಾಟಕ
Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ
Tulu Film: ʼಮಿಡಲ್ ಕ್ಲಾಸ್ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು
TEENAGE: ಹುಚ್ಚುಕೋಡಿ ಮನಸ್ಸಿಗೂ ಕಡಿವಾಣ ಬೇಕಿದೆ
Ashram: ಹಿರಿಯ ಜೀವಗಳ ಶುಭಾಶೀರ್ವಾದ -ಸಾರ್ಥಕ ಭಾವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.