![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 18, 2020, 3:07 AM IST
ಬೆಂಗಳೂರು: ಚಲಿಸುತ್ತಿದ್ದ ಬಸ್‌ನಲ್ಲಿಯೇ ಮಹಿಳಾ ಪ್ರಯಾಣಿಕರೊಬ್ಬರ ಜತೆ ಅನುಚಿತವಾಗಿ ವರ್ತಿಸಿದ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕನನ್ನು ಸಂತ್ರಸ್ತೆಯ ಸಂಬಂಧಿಕರೇ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಅದರ ಬೆನ್ನಲ್ಲೇಕರ್ತವ್ಯ ಲೋಪದ ಆರೋಪದಲ್ಲಿ ಆರೋಪಿಯನ್ನು ಕೆಎಸ್‌ಆರ್‌ಟಿಸಿ ಅಮಾನತು ಮಾಡಿ ಆದೇಶಿಸಿದೆ.
ಇಸುಬು ಆಲಿ ತಲ್ಲೂರ (40) ಬಂಧಿತ ನಿರ್ವಾಹಕ. ಆರೋಪಿಯು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಿರ್ವಾಹಕನಾಗಿ ಕಾರ್ಯನಿರ್ವಹಿಸುತ್ತಿದ್ದು, ಫೆ.15ರಂದು ಬೆಂಗಳೂರಿನಿಂದ ಪುತ್ತೂರಿಗೆ ಹೋಗುವಾಗ ಯುವತಿ ಜತೆ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಸಂಬಂಧ ಆತನ ವಿರುದ್ಧ 354(ಎ) (ಲೈಂಗಿಕ ಕಿರುಕುಳ) ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಕತ್ರಿಗುಪ್ಪೆ ನಿವಾಸಿಯಾಗಿರುವ ಸಂತ್ರಸ್ತೆ, ಫೆ.15ರಂದು ಬೆಂಗಳೂರು-ಹಾಸನ-ಪುತ್ತೂರು ಮಾರ್ಗದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬೆಂಗಳೂರಿನಿಂದ ಹಾಸನಕ್ಕೆ ಹೋಗುತ್ತಿದ್ದರು. ಮಾರ್ಗ ಮಧ್ಯೆ ಆರೋಪಿ ಟಿಕೆಟ್ ಕೊಡುವ ನೆಪದಲ್ಲಿ ಸಂತ್ರಸ್ತೆ ಪಕ್ಕದಲ್ಲಿ ಕುಳಿತುಕೊಂಡು, ಆಕೆ ಜತೆ ಅನುಚಿತವಾಗಿ ವರ್ತಿಸಿದ್ದಾನೆ. ಯುವತಿ ಎಷ್ಟೇ ವಿರೋಧಿಸಿದರೂ ಆರೋಪಿ, ಆಕೆಯ ಕೈಹಿಡಿದು ಅಸಭ್ಯವಾಗಿ ನಡೆದುಕೊಂಡಿದ್ದಾನೆ. ಅದರಿಂದ ಬೇಸತ್ತ ಸಂತ್ರಸ್ತೆ ಆತನಿಗೆ ತಿಳಿಯದಂತೆ ತನ್ನ ಮೊಬೈಲ್‌ನಿಂದ ಘಟನೆಯನ್ನು ಚಿತ್ರೀಕರಿಸಿಕೊಂಡಿದ್ದಾರೆ.
ಕಪಾಳಮೋಕ್ಷ: ಕೆಲ ಹೊತ್ತಿನ ಬಳಿಕ ಯುವತಿ ವಿಡಿಯೋ ಚಿತ್ರೀಕರಣ ಮಾಡುತ್ತಿರುವುದನ್ನು ಗಮನಿಸಿದ ಆರೋಪಿ, ಸಂತ್ರಸ್ತೆಯಿಂದ ಮೊಬೈಲ್ ಕಸಿದುಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಯುವತಿ ಆರೋಪಿ ಇಸುಬು ಅಲಿಗೆ ಕಪಾಳಮೋಕ್ಷ ಮಾಡಿ, ಬೆಳ್ಳೂರು ಕ್ರಾಸ್ ಬಳಿ ಇಳಿದು ಮತ್ತೂಂದು ಬಸ್‌ನಲ್ಲಿ ಹಾಸನಕ್ಕೆ ತೆರಳಿದ್ದಾರೆ. ಈ ವೇಳೆ ಬಸ್‌ನ ಫೋಟೋ ತೆಗೆದುಕೊಂಡ ಯುವತಿ, ಫೋಟೋ ಹಾಗೂ ಆರೋಪಿಯ ವರ್ತನೆಯ ವಿಡಿಯೋವನ್ನು ಸಂಬಂಧಿಕ ಯುವಕ ಹಾಗೂ ತಮ್ಮ ಪೋಷಕರಿಗೆ ಕಳುಹಿಸಿ ಅಳಲು ತೋಡಿಕೊಂಡಿದ್ದರು ಎಂದು ಪೊಲೀಸರು ಹೇಳಿದರು.
ಹಿಡಿದು ಪೊಲೀಸರಿಗೊಪ್ಪಿಸಿದರು: ಫೆ.15ರಂದು ಬೆಂಗಳೂರಿನಿಂದ ಪುತ್ತೂರಿಗೆ ಹೋಗಿದ್ದ ಬಸ್ ಫೆ.16ರಂದು ರಾತ್ರಿ ವಾಪಸ್ ಬಂದಿದೆ. ಅಷ್ಟರಲ್ಲಿ ಸಂತ್ರಸ್ತೆಯಿಂದ ಬಸ್‌ನ ಮಾಹಿತಿ ಪಡೆದುಕೊಂಡಿದ್ದ ಸಂಬಂಧಿಕರು ಯಶವಂತಪುರ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದರು. ಬಸ್ ಬರುತ್ತಿದ್ದಂತೆ ನಿರ್ವಾಹಕನನ್ನು ತಡೆದು ಘಟನೆ ಬಗ್ಗೆ ಪ್ರಶ್ನಿಸಿದ್ದಾರೆ. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ.
ಒಂದು ಹಂತದಲ್ಲಿ ಸಂತ್ರಸ್ತೆ ಕಡೆಯವರು ಆರೋಪಿಯನ್ನು ಥಳಿಸಿ ಸಮೀಪದ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ತಡರಾತ್ರಿ ಹಾಸನದಿಂದ ವಾಪಸ್ ಬಂದ ಸಂತ್ರಸ್ತೆ, ಆರೋಪಿಯ ಕೃತ್ಯದ ವಿಡಿಯೋ ಹಾಗೂ ಇತರೆ ದಾಖಲೆಗಳನ್ನು ಪೊಲೀಸರಿಗೆ ಸಲ್ಲಿಸಿ ಪ್ರಕರಣ ದಾಖಲಿಸಿದರು. ಈ ಸಂಬಂಧ ಇದೀಗ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಹೇಳಿದರು.
ವಿಡಿಯೋ ವೈರಲ್: ಸಂತ್ರಸ್ತೆ ಚಿತ್ರೀಕರಿಸಿಕೊಂಡಿದ್ದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಎಲ್ಲೆಡೆ ಆಕ್ರೋಶವ್ಯಕ್ತವಾಗಿದೆ. ತಪ್ಪಿತಸ್ಥ ನಿರ್ವಾಹನಕ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂಬ ಒತ್ತಾಯ ಹೆಚ್ಚಾಗಿತ್ತು. ಈ ಬೆನ್ನಲ್ಲೇ ಆರೋಪಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಇದು ಇಸಬು ಅಲಿಯ ಮೊದಲ ಕೃತ್ಯವಲ್ಲ!: ಆರೋಪಿ ಇಸುಬು ಆಲಿ ತಲ್ಲೂರ ವಿರುದ್ಧ ಈ ರೀತಿಯ ಆರೋಪ ಕೇಳಿಬಂದಿರುವುದು ಇದೇ ಮೊದಲಲ್ಲ ಎಂಬುದು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ. ಈ ಹಿಂದೆ ಪುತ್ತೂರಿನಲ್ಲಿಯೂ ಇದೇ ರೀತಿಯ ಕೃತ್ಯ ಎಸಗಿದ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿತ್ತು. ಹೀಗಾಗಿ ಅಲ್ಲಿನ ಸ್ಥಳೀಯ ಪೊಲೀಸರಿಂದ ಮಾಹಿತಿ ಕೇಳಲಾಗುವುದು ಎಂದು ಪೊಲೀಸರು ಹೇಳಿದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.