ಪ್ಲಾಸ್ಟಿಕ್ ಮರು ಬಳಕೆ ಕಾರ್ಖಾನೆಯಲ್ಲಿ ಮಹಿಳೆ ಸಾವು
Team Udayavani, Apr 3, 2022, 10:30 PM IST
ಬೆಂಗಳೂರು: ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯಂತ್ರದ ಬೆಲ್ಟ್ ಗೆ ಯುವತಿಗೆ ವೇಲ್ ಸಿಲುಕಿದ ಪರಿಣಾಮ, ಯಂತ್ರದ ಮೇಲೆ ಬಿದ್ದು ಸಾವನ್ನಪ್ಪಿರುವ ಘಟನೆ ನಾಯಂಡಹಳ್ಳಿಯಲ್ಲಿ ಜರುಗಿದೆ.
ಗಂಗೊಡನಹಳ್ಳಿ ನಿವಾಸಿ ಸಾಜಿಯಾ ಭಾನು (28) ಮೃತ ಯುವತಿ. ಸಾಜಿಯಾ ತಾಯಿ ನಝೀಮಾ ಕೊಟ್ಟ ದೂರಿನ ಆಧಾರದ ಮೇಲೆ ಚಂದ್ರಲೇಔಟ್ ಪೊಲೀಸರು ಕಾರ್ಖಾನೆ ಮಾಲೀಕ ಜಿಸಾಹಂ (31) ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ನಾಯಂಡಹಳ್ಳಿಯ ಅಜಿಜ್ ಸೈತ್ ಕೈಗಾರಿಕಾ ಪ್ರದೇಶದಲ್ಲಿರುವ ಪ್ಲಾಸ್ಟಿಕ್ ಉತ್ಪನ್ನಗಳನ್ನು ತುಂಡರಿಸಿ ಮರು ಬಳಕೆ ಮಾಡುವ ಕಾರ್ಖಾನೆಯಲ್ಲಿ ಸಾಜಿಯಾ ಕಳೆದ 2 ತಿಂಗಳಿಂದ ಕೆಲಸ ಮಾಡುತ್ತಿದ್ದರು. ಶನಿವಾರ ಸಂಜೆ 5.15ರಲ್ಲಿ ಯಂತ್ರವನ್ನು ಆಫ್ ಮಾಡಲು ಮುಂದಾದ ವೇಳೆ ಇವರು ಧರಿಸಿದ್ದ ವೇಲ್ ಯಂತ್ರದ ಬೆಲ್ಟ್ಗೆ ಸಿಲುಕಿತ್ತು. ಪರಿಣಾಮ ಯಂತ್ರದ ರಿಮ್ಗೆ ಸಾಜಿಯಾ ಭಾನು ತಲೆ ತಾಗಿ ಗಂಭೀರವಾಗಿ ಗಾಯಗೊಂಡಿದ್ದರು.
ಕೂಡಲೇ ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ನಿಮಾನ್ಸ್ಗೆ ಕರೆದುಕೊಂಡು ಹೋಗುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಕಾರ್ಖಾನೆ ಮಾಲೀಕ ಮುಂಜಾಗ್ರತೆ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ನನ್ನ ಮಗಳು ಮೃತಪಟ್ಟಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾಜಿಯಾ ತಾಯಿ ದೂರಿನಲ್ಲಿ ಉಲ್ಲೇಖೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
Karkala: ಎಸ್ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು
Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.