ಶಾಸಕ ಮುನಿರತ್ನ ವಿರುದ್ಧ ಮಹಿಳಾ ಕಾರ್ಪೋರೇಟರ್ಗಳ ದೂರು
Team Udayavani, Jun 6, 2017, 12:42 PM IST
ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷದಿಂದ ನಡೆದ ಕಾಮಗಾರಿಯಲ್ಲಿನ ಅಕ್ರಮಗಳ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಮೂವರು ಮಹಿಳಾ ಕಾರ್ಪೊರೇಟ್ಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದಾರೆ.
ಲಗ್ಗೆರೆ ವಾರ್ಡ್ನ ಮಂಜುಳಾ ಎನ್. ಸ್ವಾಮಿ, ಜೆ.ಪಿ. ಪಾರ್ಕ್ನ ಮಮತಾ ವಾಸುದೇವ್, ಎಚ್.ಎಂ.ಟಿ. ವಾರ್ಡ್ನ ಆಶಾ ಸುರೇಶ್ ಮೂವರೂ ಜಂಟಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ಗೆ ದೂರು ನೀಡಿದ್ದಾರೆ.
ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಮುನಿರತ್ನ ಹಾಗೂ ಅವರ ಬೆಂಬಲಿಗರು ಪಾಲಿಕೆ ಸದಸ್ಯರಾದ ನಮ್ಮ ಮೇಲೆ ನಿರಂತರ ದೌರ್ಜನ್ಯ ಮಾಡುತ್ತಿದ್ದಾರೆ. ಸ್ವತಂತ್ರವಾಗಿ ಕಾರ್ಯ ನಿರ್ವಹಿಸದಂತೆ ಬೆಂಬಲಿಗರ ಮೂಲಕ ಧಮಕಿ ಹಾಕುತ್ತಾರೆ. ನಮ್ಮ ವಾರ್ಡ್ಗಳಲ್ಲಿ ಅಕ್ರಮ ನಡೆಯುತ್ತಿರುವುದನ್ನು ಪ್ರಶ್ನಿಸಿದರೆ, ನಮ್ಮ ಕುಟುಂಬದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುತ್ತಾರೆ.
ಜನ ಪ್ರತಿನಿಧಿಗಳಾದ ನಮಗೆ ರಕ್ಷಣೆ ಇಲ್ಲದಂತಾಗಿದೆ. ಹೀಗಾಗಿ ಶಾಸಕರು ಮತ್ತು ಅವರ ಬೆಂಬಲಿಗರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಕಳೆದ ನಾಲ್ಕು ವರ್ಷದಲ್ಲಿ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ನಡೆದಿರುವ ಅಕ್ರಮ ಕಾಮಗಾರಿಗಳ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ
Development: ಭಾರತದ ಅಭಿವೃದ್ಧಿಯಲ್ಲಿ ಯುವ ಶಕ್ತಿಯ ಪ್ರಾಮುಖ್ಯತೆ
Actor Arrested: ಸ್ಯಾಂಡಲ್ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ
ಹರಗಾಪುರ ಕೇಸ್ ಗೆ ತಿರುವು: ದರೋಡೆ ಆಗಿದ್ದು 75 ಲಕ್ಷ ರೂ., ಸಿಕ್ಕಿದ್ದು ಒಂದು ಕೋಟಿ ರೂ.!
Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.