Bangalore: ಗರ್ಭಿಣಿಗೆ ಮಹಿಳೆಯರು ಒದ್ದು ಹೊಟ್ಟೆಯಲ್ಲೇ ಮಗು ಸಾವು
Team Udayavani, Feb 20, 2024, 2:27 PM IST
ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ಜಗಳ ತೆಗೆದ ಇಬ್ಬರು ಮಹಿಳೆಯರು ನನ್ನ ಹೊಟ್ಟೆಗೆ ಒದ್ದು ಹಲ್ಲೆ ಮಾಡಿದ್ದು, ಅದರಿಂದಾಗಿ ಹೊಟ್ಟೆಯಲ್ಲಿಯೇ ಮಗು ಮೃತಪಟ್ಟಿದೆ ಎಂದು ಆರೋಪಿಸಿ ಮಹಿಳೆಯೊಬ್ಬರು ಗೋವಿಂದರಾಜ ನಗರ ಠಾಣೆಗೆ ದೂರು ನೀಡಿದ್ದಾರೆ.
ಈ ಸಂಬಂಧ ಸುಬ್ಬಣ್ಣ ಗಾರ್ಡನ್ ನಿವಾಸಿ 32 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ಮಂಡ್ಯ ಬಿರಿಯಾನಿ ಸೆಂಟರ್ ಮಾಲೀಕರಾದ ಪದ್ಮಮ್ಮ ಹಾಗೂ ಕಾವ್ಯಾ ಎಂಬವರ ವಿರುದ್ಧ ಎಫ್ ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.
ದೂರುದಾರ ಮಹಿಳೆಯ ಪತಿ ಶ್ರೀಸಾಯಿ ಬೈಕ್ ಪಾಯಿಂಟ್ ಎಂಬ ಗ್ಯಾರೇಜ್ ನಡೆಸುತ್ತಿದ್ದು, ಪಕ್ಕದಲ್ಲೇ ಆರೋಪಿಗಳು ಮಂಡ್ಯ ಬಿರಿಯಾನಿ ಸೆಂಟರ್ ಹೋಟೆಲ್ ನಡೆಸುತ್ತಿದ್ದಾರೆ. 2024ರ ಫೆ.11ರಂದು ಬೆಳಗ್ಗೆ ಕ್ಷುಲ್ಲಕ ವಿಚಾರಕ್ಕೆ ದೂರುದಾರ ಮಹಿಳೆ ಮತ್ತು ಆಕೆಯ ಪತಿ ಜತೆ ಜಗಳವಾಗಿದೆ. ಬಳಿಕ ಘಟನೆ ಠಾಣೆ ಮೇಟ್ಟಿಲೇರಿತ್ತು. ಪೊಲೀಸರೇ ಇಬ್ಬರಿಗೂ ಸಮಾಧಾನ ಮಾಡಿ ಕಳುಹಿಸಿದ್ದರು. ಅದೇ ದಿನ ಬೆಳಗ್ಗೆ 11 ಗಂಟೆಗೆ ಪದ್ಮಮ್ಮ ಮತ್ತು ಕಾವ್ಯಾ ದೂರುದಾರ ಮಹಿಳೆ ಮನೆಗೆ ಹೋಗುವಾಗ ಅಡ್ಡಗಟ್ಟಿ ಮತ್ತೆ ಜಗಳ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಮಹಿಳೆ ಮೇಲೆ ಹಲ್ಲೆ ಮಾಡಿದ್ದ ಆರೋಪಿಗಳು, ಆಕೆ ಹೊಟ್ಟೆಗೆ ಒದ್ದಿದ್ದರು. ಕುಸಿದು ಬಿದ್ದಿದ್ದ ಮಹಿಳೆಯನ್ನು ಸಂಬಂಧಿಕರು ಹಾಗೂ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಫೆ. 14ರಂದು ಹೊಟ್ಟೆ ನೋವು ಹೆಚ್ಚಾಗಿತ್ತು. ಹೆರಿಗೆ ಮಾಡಿದ್ದ ವೈದ್ಯರು, ಹೊಟ್ಟೆ ಯಲ್ಲಿಯೇ ಮಗು ಮೃತಪಟ್ಟಿದ್ದಾಗಿ ದೃಢ ಪಡಿಸಿದ್ದಾರೆ. ಹೀಗಾಗಿ ಪದ್ಮಮ್ಮ , ಕಾವ್ಯಾ ತನ್ನ ಹೊಟ್ಟೆಗೆ ಒದಿದ್ದರಿಂದಲೇ ಮಗು ಮೃತಪಟ್ಟಿದೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.