ಮೆಟ್ರೋ ರೈಲಲ್ಲಿ ಮಹಿಳಾ ಭದ್ರತಾ ಸಿಬ್ಬಂದಿ
Team Udayavani, Dec 7, 2019, 11:08 AM IST
ಬೆಂಗಳೂರು: ಹೈದರಾಬಾದ್ ಸೇರಿ ಇತ್ತೀಚಿನ ದಿನಗಳಲ್ಲಿ ನಡೆದ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳ ಬೆನ್ನಲ್ಲೇ ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲು ಮುಂದಾಗಿರುವ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್), ರಾತ್ರಿ 10ರ ನಂತರ ಪ್ರತಿ ರೈಲಿನಲ್ಲಿ ಮಹಿಳಾ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿದೆ.
ಸಾಮಾನ್ಯವಾಗಿ “ನಮ್ಮ ಮೆಟ್ರೋ‘ದಲ್ಲಿ ಮಹಿಳೆಯರಿಗಾಗಿ ಮೀಸಲಿರುವ ಬೋಗಿಗಳಲ್ಲಿ ರಾತ್ರಿ 9.30ರ ನಂತರ ಪ್ರಯಾಣಿಕರ ಸಂಖ್ಯೆ ತುಂಬಾ ಕಡಿಮೆ. ಈ ಹಿನ್ನೆಲೆಯಲ್ಲಿ ಅಸುರಕ್ಷತೆ ಕಾಡುತ್ತದೆ. ಆದ್ದರಿಂದ ಮಹಿಳಾ ಭದ್ರತಾ ಸಿಬ್ಬಂದಿ ನಿಯೋಜಿಸುತ್ತಿದ್ದು, ಡಿ.3ರಿಂದಲೇ ಪ್ರಾಯೋಗಿಕವಾಗಿ ಈ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ನಿಗಮದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶವಂತ ಚವಾಣ್ ಸ್ಪಷ್ಟಪಡಿಸಿದ್ದಾರೆ.
ಮೆಟ್ರೋ ರೈಲಿನಲ್ಲಿ ನಿತ್ಯ ಸರಾಸರಿ 4 ಲಕ್ಷ ಜನ ಪ್ರಯಾಣಿಸುತ್ತಾರೆ. ಈ ಪೈಕಿ ಮಹಿಳಾ ಪ್ರಯಾಣಿಕರ ಪ್ರಮಾಣ ಶೇ 31 ಇದ್ದು, ಮೂರು ಬೋಗಿಗಳ ರೈಲಿನಲ್ಲಿ ಮೊದಲ ಎರಡು ಪ್ರವೇಶ ದ್ವಾರಗಳನ್ನು ಮೀಸಲಿಡಲಾಗಿದೆ. ಇನ್ನು ಆರು ಬೋಗಿಗಳ ರೈಲಿನಲ್ಲಿ ಮೊದಲ ಬೋಗಿಯನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಈ ಮಧ್ಯೆ ಮಹಿಳೆಯರಿಗಾಗಿ ಮೀಸಲಿಟ್ಟಿರುತ್ತಿದ್ದ ಬೋಗಿಗಳನ್ನು ಪ್ರವೇಶಿಸುತ್ತಿದ್ದ ಕೆಲವು ಪುರುಷರು ರಾತ್ರಿ ವೇಳೆ ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ಹಲವು ದೂರುಗಳು ಬಂದಿದ್ದವು. ಹೀಗಾಗಿ, ರಾತ್ರಿ 10ರ ನಂತರ ಪ್ರಯಾಣಿಸುವ ಎಲ್ಲ ರೈಲುಗಳಲ್ಲಿ ಮಹಿಳಾ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ ಎಂದೂ ಅವರು ಹೇಳಿದರು. ಬೋಗಿಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾದ ದೃಶ್ಯಗಳನ್ನು ನಿರಂತರವಾಗಿ ಪರಿಶೀಲಿಸಲಾಗುತ್ತದೆ. ಮುಖ್ಯವಾಗಿ ರಾತ್ರಿ ವೇಳೆ ದಾಖಲಾದ ದೃಶ್ಯಾವಳಿಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.