ಬೆಳಗಾವಿಯಿಂದ ಬೆಂಗಳೂರಿಗೆ ಮಹಿಳಾ ಸೈಕಲ್ ರ್ಯಾಲಿ 5ರಿಂದ
Team Udayavani, Dec 3, 2018, 12:02 PM IST
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸೈಕ್ಲಥಾನ್ ಹಾಗೂ ಕೆಎಸ್ಆರ್ಪಿ ಜಂಟಿ ಸಹಯೋಗದಲ್ಲಿ ರಾಜ್ಯ ಪೊಲೀಸ್ ಇಲಾಖೆ ಡಿ.5ರಿಂದ ಡಿ.12ರವರೆಗೆ ಬೆಳಗಾವಿಯಿಂದ ಬೆಂಗಳೂರಿನವರೆಗೆ “ಮಹಿಳಾ ಸೈಕಲ್ ರ್ಯಾಲಿ’ ಆಯೋಜಿಸಿದೆ.
ಈ ಕುರಿತು ಭಾನುವಾರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಕೆಎಸ್ಆರ್ಪಿ ಎಡಿಜಿಪಿ ಭಾಸ್ಕರ್ ರಾವ್, ಮಹಿಳಾ ಸಬಲೀಕರಣ, ಮಹಿಳಾ ಶಿಕ್ಷಣ, ಸ್ವತ್ಛ ಭಾರತ್, ವೃûಾರೋಹಣ, ಬಾಲ್ಯ ವಿವಾಹ ಪದ್ಧತಿಯಿಂದಾಗುವ ದುಷ್ಪರಿಣಾಮಗಳ ಕುರಿತ ಜಾಗೃತಿ, ಮಹಿಳಾ ನೈರ್ಮಲೀಕರಣ ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಇತರೆ ಕಾರ್ಯಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸೈಕಲ್ ರ್ಯಾಲಿ ಆಯೋಜಿಸಲಾಗಿದೆ ಎಂದು ತಿಳಿಸಿದರು.
ರ್ಯಾಲಿಯಲ್ಲಿ 45 ಮಹಿಳಾ ಪೊಲೀಸ್ಪೇದೆಗಳು, 11 ಮಹಿಳಾ ಪೊಲೀಸ್ ಅಧಿಕಾರಿಗಳು, 4 ಮಂದಿ ಐಪಿಎಸ್ ಅಧಿಕಾರಿಗಳು ಮತ್ತು 40 ಮಂದಿ ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಭಾಗವಹಿಸಲಿದ್ದಾರೆ. ಡಿ. 5ರಂದು ಬೆಳಗಾವಿಯಿಂದ ಈ ಸೈಕಲ್ ರ್ಯಾಲಿ ಆರಂಭವಾಗಲಿದೆ. ಪ್ರತಿದಿನ 100 ಕಿ.ಮೀ ವರೆಗೆ ರ್ಯಾಲಿ ಸಾಗಲಿದ್ದು, ಒಟ್ಟು 540 ಕಿ.ಮೀ ವ್ಯಾಪ್ತಿಯಷ್ಟು ಸೈಕಲ್ ರ್ಯಾಲಿ ಮಾರ್ಗ ಮಧ್ಯೆ ಸಿಗುವ ಸರ್ಕಾರಿ ಮಹಿಳಾ ಕಾಲೇಜು ಮತ್ತು ಐಟಿಐ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಲಿದ್ದು ಜಾಗೃತಿ ಮೂಡಿಸಲಿದ್ದಾರೆ ಎಂದು ಹೇಳಿದರು.
ಏಳು ದಿನಗಳ ರ್ಯಾಲಿಯಲ್ಲಿ ಬೆಳಗಾವಿಯಿಂದ ಹೊರಟ ರ್ಯಾಲಿ ಡಿ.6ರಂದು ಹುಬ್ಬಳ್ಳಿಗೆ ತಲುಪಲಿದೆ. ಅಲ್ಲಿಂದ ರಾಣೆ ಬೆನ್ನೂರಿಗೆ, ಡಿ.7ರಂದು ರಾಣೆಬೆನ್ನೂರಿನಿಂದ ಚಿತ್ರದುರ್ಗಕ್ಕೆ ತೆರಳಲಿದೆ. ಡಿ.8ರಂದು ಚಿತ್ರದುರ್ಗದಿಂದ ತುಮಕೂರಿಗೆ ಬಂದು ಡಿ.9ರಂದು ತುಮಕೂರಿನಿಂದ ಬೆಂಗಳೂರಿನಲ್ಲಿ ವಿಧಾನಸೌಧದ ಬಳಿ ರ್ಯಾಲಿ ಸಮಾರೋಪಗೊಳ್ಳಲಿದೆ ಎಂದು ಅವರು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
Actor Darshan: ಮೈಸೂರಿಗೆ ತೆರಳಲು ದರ್ಶನ್ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Editorial: ಗಿಫ್ಟ್ ಡೀಡ್: ಸುಪ್ರೀಂಕೋರ್ಟ್ನಿಂದ ಕಣ್ತೆರೆಸುವ ತೀರ್ಪು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ
ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್ಗಳ ದರವೂ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.