ನಗರದ ಹಲವೆಡೆ ಮಹಿಳಾ ದಿನಾಚರಣೆ ಸಂಭ್ರಮ
Team Udayavani, Mar 9, 2020, 3:04 AM IST
ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ರಾಜಕೀಯ ಪಕ್ಷಗಳು, ಪೊಲೀಸ್, ರೈಲ್ವೆ ಇಲಾಖೆ ಸೇರಿದಂತೆ ವಿವಿಧ ಸಂಘ – ಸಂಸ್ಥೆಗಳಿಂದ ನಗರದ ಹಲವೆಡೆ ಭಾನುವಾರ ಮಹಿಳಾ ದಿನಾಚರಣೆ ಯನ್ನು ವಿಶೇಷವಾಗಿ ಆಚರಿಸಲಾಯಿತು.
ನೈರುತ್ಯ ರೈಲ್ವೆ ಇಲಾಖೆಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಿದರು. ಬೆಂಗಳೂರಿನಿಂದ ಮೈಸೂರಿಗೆ ತೆರಳುವ ರಾಜ -ರಾಣಿ ಎಕ್ಸ್‌ಪ್ರಸ್ ರೈಲಿನಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಸಿಬ್ಬಂದಿಯೇ ರೈಲನ್ನು ಚಲಾಯಿಸಿದರು. ಕೆ.ಆರ್.ಪುರ ಸಂಚಾರಿ ಪೊಲೀಸರು ವಾಕಥಾನ್ ನಡೆಸಿದರು.
ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಮಹಿಳಾ ಪ್ರವಾಸಿಗರನ್ನು ಪ್ರೋತ್ಸಾಹಿಸಲು ಮೈಸೂರು, ಶ್ರೀರಂಗಪಟ್ಟಣಕ್ಕೆ ಉಚಿತ ಪ್ರವಾಸ ಹಮ್ಮಿಕೊಂಡಿದ್ದು, ಕೆಎಸ್‌ಟಿಡಿಸಿ ಕಚೇರಿ ಮುಂಭಾಗ ಸಂಸದೆ ಶೋಭಾ ಕರಂದ್ಲಾಜೆ ಚಾಲನೆ ನೀಡಿದರು.
ಗ್ರೀನ್ಸ್ ಇನೊವೇಟರ್ ಸಂಸ್ಥೆ, ಸ್ತ್ರೀ ಜಾಗೃತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ಮಹಾನಗರ ಜನತಾದಳ, ರಂಗ ಪಯಣ ಸಂಸ್ಥೆಗಳಿಂದ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಬೆಂಗಳೂರು ನಗರ ಪೊಲೀಸರು ಮಹಿಳಾ ದಿನವನ್ನು ದಿನಪೂರ್ತಿ ಎಲ್ಲಾ ಠಾಣೆಗಳಲ್ಲಿ ವಿಶೇಷವಾಗಿ ಆಚರಿಸಿ ಸಂಭ್ರಮಿಸಿದರು.
ಇದರಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರನ್ನು ಒಟ್ಟುಗೂಡಿಸಿ ನಡೆಸಿದ ವಿವಿಧ ಕಾರ್ಯಕ್ರಮಗಳು ಗಮನ ಸೆಳೆದವು. ಮಹಿಳೆಯರಿಗಾಗಿ ರಂಗೋಲಿ, ಚಿತ್ರ ಬಿಡಿಸುವ, ಗಾಯನ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಪ್ರಗತಿಪರ ಸಂಘಟನೆಗಳು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳಾ ಸಾಧಕರನ್ನು ಗುರುತಿಸಿ ಸನ್ಮಾನಿಸಿದವು.
ಆದರೆ, ಬಹುತೇಕ ಸಾಮಾನ್ಯ ಕಾರ್ಮಿಕ ಮಹಿಳೆಯರು, ಗೃಹಿಣಿಯರು ಮಹಿಳಾ ದಿನದ ಪರಿವೇ ಇಲ್ಲದೆ ಎಂದಿನಂತೆ ನಿತ್ಯ ಕಾಯಕದಲ್ಲಿ ಮಗ್ನರಾಗಿದ್ದರು. ನಗರದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಜಾಗೃತಿ ಜಾಥಾ, ವಾಕಥಾನ್, ಜುಂಬಾ ನೃತ್ಯ, ಕಾನೂನು ಬಗ್ಗೆ ಅರಿವು ಮೂಡಿಸುವ ಸುರಕ್ಷಾ ಚಕ್ರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸಾವಿತ್ರಿಬಾಪುಲೆ ಅವರ ವಿಚಾರಧಾರೆ ತಿಳಿಸಿ: ಅಖೀಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಬೆಂಗಳೂರು ಜಿಲ್ಲಾ ಸಮಿತಿಯಿಂದ ನಗರದ ಯುವಿಸಿಇ ಅಲುಮ್ನಿ ಸಭಾಂಗಣದಲ್ಲಿ ಮಹಿಳಾ ದಿನವನ್ನು ಆಚರಿಸಲಾಯಿತು.
ಸಂಘಟನೆಯ ಉಪಾಧ್ಯಕ್ಷೆ ಡಾ.ಸುಧಾ ಕಾಮತ್ ಮಾತನಾಡಿ, ಇಂದಿಗೂ ಮಹಿಳೆಯರ ಸ್ಥಿತಿ ಶೋಚನೀಯವಾಗಿದೆ. ಪುರುಷ ಪ್ರಧಾನ ಧೋರಣೆಗಳು, ಅಪ್ರಜಾತಾಂತ್ರಿಕ ಮನೋಭಾವಗಳಿಂದ ಮಹಿಳಾ ಸಮುದಾಯ ತತ್ತರಿಸುತ್ತಿದೆ. ಇಂತಹ ಸಂದಿಗ್ಧ ಸಂದರ್ಭದಲ್ಲಿ ಈಶ್ವರಚಂದ್ರ ವಿದ್ಯಾಸಾಗರ್, ಸಾವಿತ್ರಿಬಾಪುಲೆ ಮುಂತಾದ ಮಹನೀಯರ ವಿಚಾರಗಳನ್ನು ಹರಡಬೇಕಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.