ಕೊಳಗೇರಿ ಮಕ್ಕಳಿಗಾಗಿ ಮನೆ ಬಾಗಿಲಿಗೆ ಬಸ್ ಶಾಲೆ
Team Udayavani, Sep 13, 2022, 12:28 PM IST
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊಳಗೇರಿಯ ಅಂಗನವಾಡಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡುವ ಫ್ರೀ ಥಿಂಕಿಂಗ್ ಫೌಂಡೇಷನ್, ಬಿಬಿಎಂಪಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಭಾಗಿತ್ವದಲ್ಲಿ ವಂಡರ್ ಆನ್ ವ್ಹೀಲ್ಸ್ (ಮನೆ ಬಾಗಿಲಿಗೆ ಶಾಲೆ) ವಾಹನಕ್ಕೆ ಸೋಮವಾರ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಚಾಲನೆ ನೀಡಿದರು.
ಬಿಬಿಎಂಪಿ ವತಿಯಿಂದ ತನ್ನ ಎಲ್ಲ ವಲಯಗಳಲ್ಲೂ 10 ಬಸ್‌ಗಳಲ್ಲಿ ಸ್ಕೂಲ್ ಆನ್ ವ್ಹೀಲ್ ವಾಹನಗಳ ಮೂಲಕ ಶಾಲೆಗಳಿಂದ ಹೊರಗುಳಿದ ಮಕ್ಕಳಿಗೆ ಶಿಕ್ಷಣ ನಿಡಲಾಗುತ್ತಿದೆ. ಅದರ ಜತೆಗೆ ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಮಾಂಟೆಸ್ಸರಿ ಮಕ್ಕಳಿಗಾಗಿ ಮೇ 25ರಂದು ವಂಡರ್ ಆನ್ ವ್ಹೀಲ್ ಬಸ್ ಸೇವೆ ಆರಂಭಿಸಲಾಗಿತ್ತು. ಅದರ ಜತೆಗೆ ಇದೀಗ ಪೂರ್ವ ವಲಯದಲ್ಲೂ ವಂಡರ್ ಆನ್ ವ್ಹೀಲ್ ವಾಹನ ಸೇವೆಗೆ ಚಾಲನೆ ನೀಡಲಾಗಿದ್ದು, ಕೊಳಗೇರಿಯಲ್ಲಿ ವಾಸಿಸುವ 2.5ರಿಂದ 6 ವರ್ಷದ ಮಕ್ಕಳು ವಾಹನಗಳಲ್ಲಿ ಬಂದು ಕಲಿಕೆ ಮಾಡಬಹುದಾಗಿದೆ.
ವಂಡರ್ ಆನ್ ವ್ಹೀಲ್ ವಾಹನದಲ್ಲಿ ಕಲಿಕಾ ಸಾಮಗ್ರಿಗಳು, ಇಬ್ಬರು ಶಿಕ್ಷಕರು, ಒಬ್ಬ ಗ್ರೂಪ್ ಡಿ ನೌಕರ, ಬಿಳಿ ಹಲಗೆ, ಮಕ್ಕಳನ್ನು ಆಕರ್ಷಿಸುವ ಚಿತ್ರಗಳು, ಕುಡಿಯುವ ನೀರು ಸೇರಿ ಇನ್ನಿತರ ಮೂಲಸೌಲಭ್ಯಗಳು ಇರಲಿವೆ. ಬಿಬಿಎಂಪಿ ವಿಶೇಷ ಆಯುಕ್ತ ಡಾ. ರಾಮ್‌ಪ್ರಸಾತ್ ಮನೋಹರ್, ಶಿಕ್ಷಣ ವಿಭಾಗದ ಸಹಾಯಕ ಆಯುಕ್ತ ಉಮೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕ ಉಷಾ, ಫ್ರೀ ಥಿಂಕಿಂಗ್ ಫೌಂಡೇಷನ್ ಸಂಸ್ಥೆಯ ಮುಖ್ಯಸ್ಥ ಸುನೋಜ್ ಫಿಲಿಪ್ ಇತರರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.