ಕಾರ್ಪೋರೇಟ್‌ ವಲಯದಂತೆ ಕೆಲಸ ಮಾಡಿ

Team Udayavani, Jun 15, 2018, 6:15 AM IST

180614kpn98.jpg

ಬೆಂಗಳೂರು: ಜನಸ್ನೇಹಿ ಆಡಳಿತ ನೀಡುವುದು ನಮ್ಮ ಗುರಿಯಾಗಿದ್ದು,ಕಾರ್ಪೋ ರೇಟ್‌ ವಲಯದ ರೀತಿ
ಚುರುಕಾಗಿ ನಮ್ಮ ಅಧಿಕಾರಿಗಳು ಕೆಲಸಮಾಡಬೇಕೆಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ಇಲಾಖಾ ಮುಖ್ಯಸ್ಥರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಗುಣಮಟ್ಟದ ಶಿಕ್ಷಣ ಹಾಗೂ ಆರೋಗ್ಯ ಸೇವೆ, ಶುದ್ಧ ಕುಡಿಯುವ ನೀರು ಪೂರೈಕೆ, ಉದ್ಯೋಗ ಸೃಷ್ಟಿ, ಸೂರಿಲ್ಲದ ಕುಟುಂಬಕ್ಕೆ ವಸತಿ ಕಲ್ಪಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ಅಧಿಕಾರಿ ವರ್ಗ ಈ ಬಗ್ಗೆ ಹೆಚ್ಚು ಗಮನ ಹರಿಸಬೇಕೆಂದು ಹೇಳಿದರು.

“ನಾನು ನಿಮ್ಮ ಮೇಲೆ ಸವಾರಿ ಮಾಡಲ್ಲ, ನಾನು ಹೇಳಿದ್ದೇ ಮಾಡಬೇಕು ಅಂತ ಹೇಳಲ್ಲ. ಆದರೆ, ಟೇಕನ್‌ ಫಾರ್‌ ಗ್ರಾಂಟೆಡ್‌ ವರ್ತನೆಯನ್ನು ನಾನು ಸಹಿಸುವುದಿಲ್ಲ. ಯಾವ ಅಧಿಕಾರಿಯೂ ಭಯ ಪಡಬೇಕಿಲ್ಲ.ಒಳ್ಳೆಯ ಕೆಲಸ ಮಾಡುವ ಅಧಿಕಾರಿಗಳನ್ನು ಯಾವುದೇ ಒತ್ತಡ ಬಂದರೂ ಬದಲಾಯಿಸುವುದಿಲ್ಲ. ಆದರೆ, ನಮ್ಮ ವಿಶ್ವಾಸ 
ದುರುಪಯೋಗಪಡಿಸಿಕೊಳ್ಳಬೇಡಿ’ ಎಂದು ಧೈರ್ಯ ನೀಡಿದರು.

ಜನತಾದರ್ಶನವನ್ನು ನಾನು ಅಧಿಕೃತವಾಗಿ ಪ್ರಾರಂಭಿಸಿಲ್ಲ. ಆದರೂ, ದಿನಕ್ಕೆ ಕನಿಷ್ಠ 1 ಸಾವಿರ ಜನ ಮನೆ, ಗೃಹ ಕಚೇರಿ ಬಳಿ ಬರುತ್ತಿದ್ದಾರೆ. ಬಂದವರಲ್ಲಿ ಹೆಚ್ಚಿನವರ ಮನವಿ ಶಿಕ್ಷಣ, ಆರೋಗ್ಯ ಸೇವೆ, ಅಂಗವಿಕಲರಿಗೆ ಸೌಲಭ್ಯ, ಉದ್ಯೋಗದ್ದಾಗಿದೆ. ತಾಲೂಕು ಮತ್ತು ಜಿಲ್ಲಾಮಟ್ಟದಲ್ಲಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಿದ್ದರೆ ಜನತೆ ಇಲ್ಲಿವರೆಗೆ ಬರುತ್ತಿರಲಿಲ್ಲ. ಜಿಲ್ಲಾಧಿಕಾರಿಗಳು ಸೇರಿ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಹೊಣೆಗಾರಿಕೆ ನಿಗದಿ ಪಡಿಸಬೇಕಿದೆ. ಮುಖ್ಯ ಕಾರ್ಯದರ್ಶಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ,ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಈ ಬಗ್ಗೆ ಕೆಳಹಂತದ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ನಿಗಾ ವಹಿಸಬೇಕು ಎಂದರು.

ಜಮೀನು ಹುಡುಕಿ: ರಾಜ್ಯದಲ್ಲಿ ವಸತಿ ಸಮಸ್ಯೆ ಹೆಚ್ಚಾಗಿದ್ದು, ಬೆಂಗಳೂರಿನಲ್ಲಿ 2 ಲಕ್ಷ ಹಾಗೂ ರಾಜ್ಯದ ಇತರೆಡೆ 3 ಲಕ್ಷ ಮನೆ ನಿರ್ಮಿಸಬೇಕಾಗಿದೆ. ಇದಕ್ಕಾಗಿ ಜಮೀನು ಅಗತ್ಯ. ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸರ್ಕಾರಿ ಜಮೀನು ಎಲ್ಲೆಲ್ಲಿದೆ ಎಂಬುದರ ಬಗ್ಗೆ ತಕ್ಷಣ ಜಿಲ್ಲಾಧಿ ಕಾರಿಗಳು ಮಾಹಿತಿ ಸಂಗ್ರಹಿಸಿ ವರದಿ ನೀಡಲು ಸೂಚನೆ ನೀಡಿ ಎಂದು ತಿಳಿಸಿದರು.

ನಿರುದ್ಯೋಗ ನಿವಾರಣೆ ವಿಚಾರದಲ್ಲಿ ಜಿಲ್ಲಾಮಟ್ಟದಲ್ಲಿ ಉದ್ಯೋಗ ಸಮಿತಿ ರಚಿಸಿ.ಕೈಗಾರಿಕೆ, ಕಾರ್ಖಾನೆ ಮಾಲೀಕರ ಜತೆ ಮಾತನಾಡಿ. ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು, ಉದ್ಯೋಗ ಮತ್ತು ತರ ಬೇತಿ ಇಲಾಖೆ ಅಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಆ ಸಮಿತಿಯಲ್ಲಿ ಇರಲಿ. ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಜಿಲ್ಲಾ,
ವಿಭಾಗವಾರು, ರಾಜ್ಯ ಮಟ್ಟದಲ್ಲಿ ಉದ್ಯೋಗ ಮೇಳ ಮಾಡಲಾಗಿದೆ. ಆದರೆ,ಎಷ್ಟು ಜನಕ್ಕೆ ಉದ್ಯೋಗ ಸಿಕ್ಕಿದೆ ಎಂಬುದರ ಮಾಹಿತಿ ಇಲ್ಲ ಎಂದರು.

ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿಯಿಂದಲೇ ಶಿಕ್ಷಣ 
ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿಯಿಂದಲೇ ಶಿಕ್ಷಣ ನೀಡಲು ಕ್ರಮ ಕೈಗೊಳ್ಳಲಾಗುವುದು. ಸರ್ಕಾರವೇ ಎಲ್‌ಕೆಜಿ ಶಿಕ್ಷಣ ನೀಡಿದರೆ ಬಡ, ಮಧ್ಯಮ ವರ್ಗದವರು ಸರ್ಕಾರಿ ಶಾಲೆಗಳತ್ತಲೇ ಬರುತ್ತಾರೆ. ಕನ್ನಡ ಉಳಿಸುವುದರ ಜತೆಗೆ ಮಕ್ಕಳಿಗೆ ಇಂಗ್ಲೀಷ್‌ನ್ನು ಕಲಿಸಲಾಗುವುದು ಎಂದು ಮುಖ್ಯಮಂತ್ರಿ ಸಭೆಯಲ್ಲಿ ತಿಳಿಸಿದರು.

ಆರ್‌ಟಿಇ ಕಾಯ್ದೆಯಡಿ ಬಡವರ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಸೀಟು ಲಭ್ಯವಾಗುತ್ತಿಲ್ಲ. ಕ್ಷೇತ್ರ ಶಿಕ್ಷಣಾಧಿಕಾರಿಗಳು, ಡಿಡಿಪಿಐಗಳು ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಜತೆ ಶಾಮೀಲಾಗಿದ್ದಾರೆ. ಬಡವರಿಂದ ಶಾಲೆಗಳು ಬೇರೆ ಬೇರೆ ಹೆಸರಿನಲ್ಲಿ ಹಣ ಪಡೆಯುತ್ತಿವೆ. ಹೀಗಾದರೆ ಹೇಗೆ ಎಂದು ಪ್ರಶ್ನಿಸಿದರು. 

ಸಾರ್ವಜನಿಕರ ದೂರಿನ ಮೇರೆಗೆ ಬೆಂಗಳೂರು ಉತ್ತರ ವಿಭಾಗದ ಡಿಡಿಪಿಐಯನ್ನು ಅಮಾನತು ಮಾಡಿದ್ದೇನೆ. ಬಡ ಮಕ್ಕಳ ಶಿಕ್ಷಣಕ್ಕೆ ಸಂಚಕಾರ ತರುವವರನ್ನು ನಾನು ಸುಮ್ಮನೆ ಬಿಡುವುದಿಲ್ಲ. ಖಾಸಗಿ ಶಾಲೆಗಳ ಕಡೆ ಶಾಮೀಲಾದರೆ ಕಠಿಣ ಕ್ರಮ ಕೈಗೊಳ್ಳುತ್ತೇನೆಂದು ಎಚ್ಚರಿಕೆ ನೀಡಿದರು.

ಡಿಕೆಶಿ ಕರೆ ಮಾಡಿಲ್ಲ: ಎಂಜಿನಿಯರ್‌ಗಳ ವರ್ಗಾವಣೆ ವಿಚಾರದಲ್ಲಿ ಡಿ.ಕೆ.ಶಿವಕುಮಾರ್‌ ಅಸಮಾಧಾನ
ಗೊಂಡಿರುವುದು ನನಗೆ ಗೊತ್ತಿಲ್ಲ. ನನಗೆ ಅವರು ಕರೆ ಮಾಡಿಯೂ ಹೇಳಿಲ್ಲ. ಚುನಾವಣೆ ಸಂದರ್ಭದಲ್ಲಿ ಅಧಿಕಾರಿಗಳ ವರ್ಗಾವಣೆಯಾಗಿತ್ತು. ಇದೀಗ ಮತ್ತೆ ಹಳೆಯ ಸ್ಥಾನಗಳಿಗೆ ನಿಯೋಜಿಸಲಾಗಿದೆ ಅಷ್ಟೆ. ಇನ್‌ಫೋಸಿಸ್‌ ಸಂಸ್ಥಾಪಕ ಎನ್‌.ಆರ್‌.ನಾರಾಯಣಮೂರ್ತಿ ಅವರಿಗೆ ಸರ್ಕಾರದಿಂದ ಯಾವುದೇ ಹುದ್ದೆ ನೀಡುವ ಪ್ರಸ್ತಾವನೆಯಿಲ್ಲ. ಅವರ ಸಲಹೆ-ಸೂಚನೆ ಮಾರ್ಗದರ್ಶನ ಪಡೆಯಲಾಗುವುದು.ರಾಜ್ಯದ ಅಭಿವೃದ್ಧಿ ಕುರಿತು ಅವರ ಜತೆ ಸಮಾಲೋಚನೆ ನಡೆಸಿದ್ದೇನೆ ಎಂದರು.

ಟಾಪ್ ನ್ಯೂಸ್

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

3(1

Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.