ಬೇಡಿಕೆಗಳಿಗಾಗಿ ನಗರದಲ್ಲಿ ಕಾರ್ಮಿಕರ ಭಾರಿ ಪ್ರತಿಭಟನೆ


Team Udayavani, Sep 15, 2017, 11:49 AM IST

labour-union-protest.jpg

ಬೆಂಗಳೂರು: ಮಾಸಿಕ ಗೌರವ ಧನ ನಿಗದಿಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಆಹೋರಾತ್ರಿ ಧರಣಿ ನಡೆಸಿದ ಬೆನ್ನಲ್ಲೇ ಇದೀಗ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರು ಪ್ರತಿಭಟನೆ ಕೈಗೊಂಡರು. 

ಸೆಂಟರ್‌ ಆಫ್ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌ (ಸಿಐಟಿಯು) ರಾಜ್ಯ ಸಮಿತಿಯ ನೇತೃತ್ವದಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಗುರುವಾರ ಪ್ರತಿಭಟನೆ ನಡೆಸಿದ 175 ಸಂಘಟನೆಗಳ ಕಾರ್ಮಿಕರು ಕಾಲಮಿತಿಯೊಳಗೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಗಡುವು ನೀಡಿದರು. ಇದಕ್ಕೂ ಮೊದಲು ಸಾವಿರಾರು ಸಂಖ್ಯೆಯಲ್ಲಿ ಕಾರ್ಮಿಕರು ಸಿಟಿ ರೈಲು ನಿಲ್ದಾಣದಿಂದ ಫ್ರೀಡಂಪಾರ್ಕ್‌ವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದರು. 

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಕಾರ್ಮಿಕರ ಪ್ರಮುಖ ಬೇಡಿಕೆಗಳ ಪೈಕಿ ಒಂದಾದ “ಕರ್ನಾಟಕ ರಾಜ್ಯ ಕಾರ್ಮಿಕ ಸಮ್ಮೇಳನ’ ಆಯೋಜಿಸಲು ಒಪ್ಪಿಕೊಂಡು, ಆದಷ್ಟು ಬೇಗ ಅದನ್ನು ಕಾರ್ಯಾಗತಗೊಳಿಸುವ ಭರವಸೆ ನೀಡಿದ್ದಾರೆ.

ಬೇಡಿಕೆಗಳ ಬಗ್ಗೆ ಸೂಕ್ತ ಸಂದರ್ಭ ಹಾಗೂ ಸೂಕ್ತ ವೇದಿಕೆಯಲ್ಲಿ ಚರ್ಚಿಸಲಾಗುವುದು ಎಂದು ಆಶ್ವಾಸನೆ ನೀಡಿದ ಹಿನ್ನೆಲೆಯಲ್ಲಿ ಬಿಸಿಯೂಟ ಯೋಜನೆಯ ನೌಕರರು ಹೊರತುಪಡಿಸಿ ಉಳಿದ ಎಲ್ಲ ಸಂಘಟನೆಗಳ ಕಾರ್ಮಿಕರು ಸಂಜೆ ವೇಳೆಗೆ ಪ್ರತಿಭಟನೆ ಕೈ ಬಿಟ್ಟರು.

ಆದರೆ, ಕನಿಷ್ಟ ಕೂಲಿ ವ್ಯಾಪ್ತಿಗೆ ತರುವ ಬಗ್ಗೆ ಶಿಕ್ಷಣ ಸಚಿವ ತನ್ವೀರ್‌  ಅವರೊಂದಿಗೆ ಕಾರ್ಮಿಕ ಸಂಘಟನೆಗಳ ಮುಂಖಡರು ಸತತ ಎರಡು ಗಂಟೆ ಸಭೆ ನಡೆಸಿ, ಬಳಿಕ ಸಚಿವರು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ರಾತ್ರಿ 8.30ಗೆ ಸ್ಥಳಕ್ಕೆ ಆಗಮಿಸಿ, ನವೆಂಬರ್‌ನಲ್ಲಿ ನಡೆಯುವ ವಿಧಾನಸಭೆ ಅಧಿವೇಶನದೊಳಗಾಗಿ ಕನಿಷ್ಠ ವೇತನಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ಕೊಟ್ಟ ಮೇಲೆ ಬಿಸಿಯೂಟ ನೌಕರರು ಪ್ರತಿಭಟನೆ ಕೈಬಿಟ್ಟರು. 

ಎಲ್ಲ ಬೇಡಿಕೆಗಳು ಪ್ರಮುಖ: ಕಾರ್ಮಿಕರ ಎಲ್ಲ ಬೇಡಿಕೆಗಳು ನ್ಯಾಯಬದ್ಧ ಹಾಗೂ ಪ್ರಮುಖ ಬೇಡಿಕೆಗಳು. ಕೈಗಾರಿಕಾ ಶಾಂತಿ ಹಾಗೂ ಸೌಹಾರ್ದತೆ ಕಾಪಾಡಲು ಕಾರ್ಮಿಕರ ರಂಗ ಉತ್ತಮ ಅಭಿವೃದ್ಧಿ ಸಾಧಿಸಲು ಅನುವಾಗುವಂತೆ ರಾಷ್ಟ್ರಮಟ್ಟದಲ್ಲಿ ಅಸ್ತಿತ್ವದಲ್ಲಿರುವ “ಭಾರತ ಕಾರ್ಮಿಕ ಸಮ್ಮೇಳನ’ (ಐಎಲ್‌ಸಿ) ರೀತಿಯಲ್ಲಿ ರಾಜ್ಯ ಮಟ್ಟದಲ್ಲಿ ಸರ್ಕಾರ, ಮಾಲೀಕರು ಹಾಗೂ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳನ್ನೊಳಗೊಂಡ ತ್ರೀಪಕ್ಷಿಯವಾದ “ಕರ್ನಾಟಕ ರಾಜ್ಯ ಕಾರ್ಮಿಕ ಸಮ್ಮೇಳನ’ (ಕೆಎಲ್‌ಸಿ) ಪ್ರತಿ ವರ್ಷ ಆಯೋಜಿಸಬೇಕು ಎಂದು ನಮ್ಮ ಪ್ರಬಲ ಬೇಡಿಕೆ ಆಗಿತ್ತು.

ಇದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ ಒಪ್ಪಿಕೊಂಡಿದ್ದಾರೆ. ಉಳಿದ ಬೇಡಿಕೆಗಳ ಬಗ್ಗೆಯೂ ಭರವಸೆ ನೀಡಿದ್ದಾರೆ. ಬಿಸಿಯೂಟ ನೌಕರರ ಬಗ್ಗೆಯೂ ಶಿಕ್ಷಣ ಸಚಿವರಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ಈಗ ಸದ್ಯ ಪ್ರತಿಭಟನೆ ಕೈಬಿಡಲಾಗುತ್ತಿದ್ದು, ಒಂದು ವೇಳೆ ಸಕಾಲದಲ್ಲಿ ಬೇಡಿಕೆ ಈಡೇರದಿದ್ದರೆ ಮತ್ತೆ ಹೋರಾಟ ಮುಂದುವರಿಸುತ್ತೇವೆ ಎಂದು ಸಿಐಟಿಯು ರಾಜ್ಯಾಧ್ಯಕ್ಷೆ ಎಸ್‌. ವರಲಕ್ಷ್ಮೀ “ಉದಯವಾಣಿ’ಗೆ ತಿಳಿಸಿದರು. 

ಕಾರ್ಮಿಕರು ಕನಿಷ್ಟ ವೇತನ, ಗುತ್ತಿಗೆ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ, ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ, ಅಂಗನವಾಡಿ, ಬಿಸಿಯೂಟ, ಆಶಾ ಮುಂತಾದ ಸರ್ಕಾರದ ಯೋಜನೆಗಳ ನೌಕರರಿಗೆ ಕನಿಷ್ಠ ವೇತನ ವ್ಯಾಪ್ತಿಗೆ ತರುವುದು, ಜಿಲ್ಲಾ ಮಟ್ಟದಲ್ಲಿ ಕಾರ್ಮಿಕ ನ್ಯಾಯಾಲಯಗಳ ಸ್ಥಾಪನೆ, ಕಾರ್ಮಿಕ ಸಂಘಟನೆಗಳಿಗೆ ಕಡ್ಡಾಯ ಮಾನ್ಯತೆ ನೀಡಲು ಕಾನೂನು ಜಾರಿಗೆ ತರಬೇಕು. ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ತಡೆಯಬೇಕು ಹಾಗೂ ಕರ್ನಾಟಕ ರಾಜ್ಯ ಕಾರ್ಮಿಕ ಸಮ್ಮೇಳನ ಆಯೋಜಸಬೇಕು.

ತ್ರಿಪಕ್ಷೀಯ ಸಮಿತಿಗಳಲ್ಲಿ ಕೇಂದ್ರ ಕಾರ್ಮಿಕ ಸಂಘಟನೆಗಳಿಗೆ ಪ್ರಾತಿನಿಧ್ಯ ನೀಡಬೇಕು ಅನ್ನುವುದು ಕಾರ್ಮಿಕರ ಪ್ರಮುಖ ಬೇಡಿಕೆಗಳು ಆಗಿವೆ. ಇವುಗಳ ಈಡೇರಿಕೆಗೆ 2017ರ ಜ.31ರಿಂದ ಫೆ.2ರವರೆಗೆ ಕಾರ್ಮಿಕರು ಆಹೋರಾತ್ರಿ ಧರಣಿ ನಡೆಸಿದ್ದರು. ಬೇಡಿಕೆಗಳನ್ನು ಈಡೇರಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆದರೆ, ಆರು ತಿಂಗಳು ಕಳೆದರೂ, ಸರ್ಕಾರ ಯಾವುದೇ ಕ್ರಮಕೈಗೊಳ್ಳದ ಕಾರಣ ಕಾರ್ಮಿಕರು ಪುನಃ ಪ್ರತಿಭಟನೆ ನಡೆಸಿದರು. 

ಸಿಪಿಎಂ ರಾಜ್ಯ ಕಾರ್ಯದರ್ಶಿ ಜಿ.ವಿ. ಶ್ರೀರಾಮರೆಡ್ಡಿ, ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘದ ಅಧ್ಯಕ್ಷ ಮಾರುತಿ ಮಾನ್ಪಡೆ, ಸಿಐಟಿಯು ಪ್ರಧಾನ ಕಾರ್ಯದರ್ಶಿ ಮಿನಾಕ್ಷಿ ಸುಂದರಂ ಕಾರ್ಮಿಕ ಮುಖಂಡ ಕೆ. ಪ್ರಕಾಶ್‌ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. 

ಟಾಪ್ ನ್ಯೂಸ್

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

Frud

Police Nabs: 930 “ಡಿಜಿಟಲ್‌ ಅರೆಸ್ಟ್‌’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Frud

Police Nabs: 930 “ಡಿಜಿಟಲ್‌ ಅರೆಸ್ಟ್‌’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!

15-bng

Cold Weather: ಬೀದರ್‌, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?

13-bng

Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.