ಬಾಲ ಕಾರ್ಮಿಕರ ಸಂಖ್ಯೆಯ ಸ್ಪಷ್ಟ ಮಾಹಿತಿಯೇ ಇಲ್ಲ!
Team Udayavani, Jun 12, 2017, 12:17 PM IST
ಬೆಂಗಳೂರು: ಇಂದು ವಿಶ್ವ ಬಾಲ ಕಾರ್ಮಿಕ ದಿನ. ಕರ್ನಾಟಕವನ್ನು ಬಾಲ ಕಾರ್ಮಿಕ ಪದ್ಧತಿ ಮುಕ್ತ ರಾಜ್ಯವನ್ನಾಗಿ ಮಾಡಲು ಸರ್ಕಾರ ದಶಕದ ಹಿಂದೆಯೇ ಗುರಿ ಇಟ್ಟುಕೊಂಡಿತ್ತು. 2012ಕ್ಕೆ ರಾಜ್ಯವನ್ನು ಬಾಲ ಕಾರ್ಮಿಕ ಪದ್ಧತಿ ಮುಕ್ತವನ್ನಾಗಿ ಮಾಡುವುದಾಗಿ ಸರ್ಕಾರ ಅಧಿಕೃತ ಘೋಷಣೆ ಮಾಡಿತ್ತು. ಆದರೆ ಈವರೆಗೆ ಸರ್ಕಾರದ ಗುರಿ ಈಡೇರಿಲ್ಲ.
ಅಷ್ಟೇ ಅಲ್ಲ, ಕರ್ನಾಟಕದಲ್ಲಿ ಬಾಲ ಕಾರ್ಮಿಕರ ಸಂಖ್ಯೆ ಎಷ್ಟಿದೆ ಎಂಬ ಬಗ್ಗೆ ನಿಖರ ಮಾಹಿತಿಯೇ ಇಲ್ಲ. 2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ 2.49 ಲಕ್ಷ ಬಾಲ ಕಾರ್ಮಿಕರಿದ್ದಾರೆ. ಆದರೆ, 2011-12ರಲ್ಲಿ ಕಾರ್ಮಿಕ ಇಲಾಖೆ ನಡೆಸಿದ ಸಮೀಕ್ಷೆ ಪ್ರಕಾರ ಬಾಲ ಕಾರ್ಮಿಕರ ಸಂಖ್ಯೆ 51 ಸಾವಿರ ಇತ್ತು. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಕೆಲಸ ಮಾಡುತ್ತಿರುವ ಸಂಘ-ಸಂಸ್ಥೆಗಳು ರಾಜ್ಯದಲ್ಲಿ ಸುಮಾರು 3 ಲಕ್ಷ ಬಾಲ ಕಾರ್ಮಿಕರಿದ್ದಾರೆ ಎಂದು ಹೇಳುತ್ತವೆ.
ಆಶ್ಚರ್ಯದ ಸಂಗತಿ ಎಂದರೆ ಕಾರ್ಮಿಕ ಇಲಾಖೆ ಅಧಿಕಾರಿಗಳ ಪ್ರಕಾರ ರಾಜ್ಯದಲ್ಲಿ ಬಾಲಕಾರ್ಮಿಕರು ಇರುವುದೇ 3 ರಿಂದ 4 ಸಾವಿರ. ರಾಜ್ಯದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರದ ಬಾಲ ಕಾರ್ಮಿಕ ಯೋಜನೆಗಳು ಜಾರಿಯಲ್ಲಿವೆ. ಬಾಲ ಕಾರ್ಮಿಕ ಪದ್ಧತಿಯಿಂದ ಬಿಡುಗಡೆಗೊಂಡ ಮಕ್ಕಳಿಗೆ ಪುನರ್ವಸತಿ ಮತ್ತು ಕಲಿಕಾ ಸೌಲಭ್ಯ ಕಲ್ಪಿಸಲು ರಾಜ್ಯದ 17 ಜಿಲ್ಲೆಗಳಲ್ಲಿ ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಅದೇ ರೀತಿ 13 ಜಿಲ್ಲೆಗಳಲ್ಲಿ ರಾಜ್ಯ ಬಾಲ ಕಾರ್ಮಿಕ ಯೋಜನೆ ಜಾರಿಯಲ್ಲಿದೆ. ಅದರ ಜತೆಗೆ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಆದರೆ, ಇವುಗಳ ಪ್ರಗತಿ ಅಷ್ಟಕ್ಕಷ್ಟೇ.
ಕೇಂದ್ರ ಸರ್ಕಾರವು 1986ರ ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆಗೆ 2016ರಲ್ಲಿ ತಿದ್ದುಪಡಿ ತಂದಿದೆ. ಈ ತಿದ್ದುಪಡಿ ಕಾಯ್ದೆ ಪ್ರಕಾರ 14 ವರ್ಷದ ಕೆಳಗಿನ ಮಕ್ಕಳು ಉದ್ಯೋಗದ ಉದ್ದೇಶದಿಂದ ಕೆಲಸ ಮಾಡುವಂತಿಲ್ಲ. ಆದರೆ, ಶಾಲೆಗೆ ರಜೆ ಇರುವಾಗ, ಶಾಲೆಗೆ ಹೋಗುವ ಮೊದಲು ಹಾಗೂ ಬಂದ ಬಳಿಕ ಶಿಕ್ಷಣದ ಹಕ್ಕಿಗೆ ತೊಂದರೆ ಆಗದಂತೆ ಕೌಟುಂಬಿಕ ಉದ್ದಿಮೆಗಳು, ರಿಯಾಲಿಟಿ ಶೋ, ಸಿನಿಮಾಗಳಲ್ಲಿ ಕಲಾವಿದರಾಗಿ ದುಡಿಯಲು ಕಾಯ್ದೆಯಲ್ಲಿ ಅವಕಾಶವಿದೆ. ಇದು ಬಾಲ ಕಾರ್ಮಿಕ ಪದ್ಧತಿ ನಿಷೇಧ, ನಿರ್ಮೂಲನ ವಿಚಾರದಲ್ಲಿ ಗೊಂದಲಗಳನ್ನು ನಿರ್ಮಾಣ ಮಾಡಿದೆ. ಹೀಗಾಗಿ ತಿದ್ದುಪಡಿ ಕಾಯ್ದೆಯನ್ನು ಪರಮರ್ಶಿಸುವ ಅವಶ್ಯಕತೆ ಇದೆ.
ಶಿಕ್ಷೆ ಆಗಿದ್ದು 15
ಪ್ರಕರಣಗಳಲ್ಲಿ ಮಾತ್ರ
ಹದಿನಾಲ್ಕು ವರ್ಷದೊಳಗಿನ ಮಕ್ಕಳನ್ನು ಕಾರ್ಮಿಕರ ರೀತಿಯಲ್ಲಿ ದುಡಿಸಿಕೊಳ್ಳುವ ಸಂಸ್ಥೆ ಮತ್ತು ವ್ಯಕ್ತಿಗಳ ಮೇಲೆ ಕಾನೂನು ರೀತಿ ಕ್ರಮಗಳನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು ಆಗಾಗ ದಾಳಿ ಮತ್ತು ತಪಾಸಣೆ ನಡೆಸುವ ಮೂಲಕ ಕೈಗೊಳ್ಳುತ್ತಾರೆ. ಅದರಂತೆ 2017ರ ಸೆಪ್ಟಂಬರ್‌ವರೆಗೆ 17, 497 ತಪಾಸಣೆಗಳನ್ನು ನಡೆಸಲಾಗಿದ್ದು, 96 ಪ್ರಕರಣಗಳಲ್ಲಿ ಮೊಕದ್ದಮೆ ದಾಖಲಿಸಲಾಗಿದೆ. ಇದರಲ್ಲಿ 15 ಪ್ರಕರಣಗಳಲ್ಲಿ ಮಾತ್ರ ಶಿಕ್ಷೆ ಆಗಿದೆ. ಉಳಿದಂತೆ 2,672 ಬಾಲಕಾರ್ಮಿಕರನ್ನು ರಕ್ಷಿಸಿ, ತಪ್ಪಿತಸ್ಥರಿಂದ .70 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ.
ರಾಜ್ಯದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರಂತರವಾಗಿ ಹೆಚ್ಚುತ್ತಲೇ ಇದೆ. ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗುತ್ತಿಲ್ಲ. ಉತ್ತರ ಕರ್ನಾಟಕ ಭಾಗದಲ್ಲಿ ಬಾಲ ಕಾರ್ಮಿಕರ ಸಂಖ್ಯೆ ಹೆಚ್ಚಾಗಿದ್ದು, ಹೆಣ್ಣು ಮಕ್ಕಳು ಇದರಲ್ಲಿ ತೊಡಗಿಸಿಕೊಂಡಿರುವುದು ಅನೇಕ ಅಪಾಯಗಳಿಗೆ ಆಹ್ವಾನ ನೀಡುತ್ತದೆ. ಬಾಲಕಾರ್ಮಿಕ ಪದ್ಧತಿ ನಿಷೇಧ ಅನ್ನುವುದು ಘೋಷಣೆಯಾಗದೇ ಬದ್ಧತೆ ಆಗಿರಬೇಕು.
– ಲಕ್ಷ್ಮೀಪ್ರಸನ್ನ,
ಸಂಯೋಜಕ “ಅಪ್ಸಾ’ ಸಂಸೆ
– ರಫೀಕ್ ಅಹ್ಮದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.