ಕಾಕೋಳು ಸುತ್ತ ಚಿರತೆ ಚಿಂತೆ!

Team Udayavani, Nov 10, 2017, 11:31 AM IST

cheetah.jpg

ಯಲಹಂಕ: ಸಮೀಪದ ಕಾಕೋಳು ಗ್ರಾಮದ ಸುತ್ತಮುತ್ತ ಚಿರತೆಯೊಂದು ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದೆ. ಬೆಂಗಳೂರು ಉತ್ತರ ತಾಲೂಕು ಹೆಸರಘಟ್ಟ ಸಮೀಪದ ಬ್ಯಾತ, ಸೊಣ್ಣೇನಹಳ್ಳಿ ಹೆಸರಘಟ್ಟ ಸೀಡ್ಸ್‌ ಫಾರಂ, ಡ್ಯಾನೀಷ್‌ ಫಾರಂ, ಹೆಸರಘಟ್ಟ ಕೆರೆ ಸುತ್ತಮುತ್ತ ಚಿರತೆ ಸಂಚರಿಸುತ್ತಿದ್ದು, 2 ಮೇಕೆ, ಮೂರು ಹಸುಗಳನ್ನು ಕೊಂದು ತಿಂದಿದೆ.

ಚಿರತೆ ಕಾಣಿಸಿಕೊಂಡ ಬಗ್ಗೆ 20 ದಿನಗಳ ಹಿಂದೆ ಅರಣ್ಯ ಇಲಾಖೆ ಹಾಗೂ ಸೊಣ್ಣೇನಹಳ್ಳಿ ಗ್ರಾ.ಪಂಗೆ ದೂರು ನೀಡಿದ್ದರೂ ಚಿರತೆ ಹಿಡಿಯಲು ಕ್ರಮ ಕೈಗೊಂಡಿಲ್ಲ. ಪರಿಣಾಮ ಗ್ರಾಮದ ಕೃಷ್ಣಪ್ಪಮತ್ತು ರತ್ನಮ್ಮ ಎಂಬುವವರ ತಲಾ ಒಂದು ಹಸು ಮತ್ತು ಮದ್ದೂರಮ್ಮ ಎಂಬುವವರ ಮೇಕೆಗಳು ಚಿರತೆಗೆ ಆಹಾರವಾಗಿವೆ.

ಮನುಷ್ಯನನ್ನೇ ತಿನ್ಬೇಕು: “ವಾರದ ಹಿಂದೆ ದನಗಳನ್ನು ಮೇಯಿಸಲು ಹೋದಾಗ ರಾಸುಗಳು ಇದ್ದಕ್ಕಿದ್ದಂತೆ ಬೆದರಿ ಓಡತೊಡಗಿದವು. ಅಂದು ದನಗಳೆಲ್ಲ ಹೆದರಿ ಮಧ್ಯಾಹ್ನ ಮೂರು ಗಂಟೆಗೇ ಮನೆಗೆ ಬಂದವು. ಅಂದೇ ನಮಗೆ ಅನುಮಾನ ಬಂದಿತ್ತು. ಮೂರು ದಿನಗಳ ಹಿಂದೆ ಚಿರತೆ ನಮ್ಮ ಹಸುವಿನ ಮೇಲೆ ದಾಳಿ ಮಾಡಿ, ಅದರ ಕುತ್ತಿಗೆಗೆ ಬಾಯಿ ಹಾಕಿತ್ತು. ಅಷ್ಟರಲ್ಲೇ ಹಸು ತಪ್ಪಿಸಿಕೊಂಡು ಬಂದಿದೆ.

ಅದರ ಕತ್ತಿನಿಂದ ರಕ್ತ ಸುರಿಯುತ್ತಿದ್ದರಿಂದ ಕೂಡಲೆ ಚಿಕಿತ್ಸೆ ಕೊಡಿಸಿದ್ದೇವೆ. ಕಳೆದ ವರ್ಷ ಕಾಣಿಸಿಕೊಂಡಿದ್ದ ಚಿರತೆ ಎರಡು ಹಸುಗಳನ್ನು ತಿಂದಿತ್ತು. ಈ ಬಾರಿ ದೂರು ನೀಡಿದರೂ ಅರಣ್ಯ ಇಲಾಖೆಯವರು ಕ್ರಮ ತೆಗೆದುಕೊಂಡಿಲ್ಲ. ಚಿರತೆ ಮನುಷ್ಯರನ್ನು ಕೊಂದ ನಂತರವೇ ಅವರು ಕ್ರಮಕ್ಕೆ ಮುಂದಾಗುತ್ತಾರೇನೋ ಕಾದುಬೋಡಬೇಕು,’ ಎಂದು ಗ್ರಾಮದ ನಿವಾಸಿ ಹನುಮಂತರಾಯಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“15ದಿನಗಳ ಹಿಂದೆ ಈ ಭಾಗದಲ್ಲಿ ಚಿರತೆ ಕಾಣಿಸಿಕೊಂಡ ಬಗ್ಗೆ ಸ್ಥಳೀಯರು ದೂರು ನೀಡಿದ್ದಾರೆ. ಈ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದು, ಮೇಲಾಧಿಕಾರಿಗಳು ಪರಿಶೀಲನೆ ನಡೆಸಿ ಕ್ರಮತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ಪ್ರಸ್ತುತ ಸ್ಥಳದಲ್ಲೇ ಮೊಕ್ಕಾಂ ಹೂಡಿ ಪರಿಶೀಲನೆ ನಡೆಸುತ್ತಿದ್ದೇವೆ,’ ಎಂದು ಅರಣ್ಯ ರಕ್ಷಕರಾದ ಚಂದ್ರಪ್ಪತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಪ್ರಾದೇಶಿಕ ಅರಣ್ಯ ವಿಭಾಗದ ಅರಣ್ಯ ರಕ್ಷಕ ಚಿದಾನಂದ್‌, “ಹೆಸರಘಟ್ಟ ವ್ಯಾಪ್ತಿಯ ಡ್ಯಾನೀಶ್‌ ಫಾರಂ ಬಳಿ ಚಿರತೆ ಕಾಣಿಸಿಕೊಂಡಿತ್ತು ಎಂದು ಗ್ರಾಮಸ್ಥರು ದೂರು ನೀಡಿದ್ದಾರೆ. ಅಲ್ಲದೆ ಮೊಬೈಲ್‌ನಲ್ಲಿ ತೆಗೆದ ಚಿತ್ರವನ್ನೂ ಕಳಿಸಿದ್ದಾರೆ.

ಶುಕ್ರವಾರ ಆಯ್ದ ಸ್ಥಗಳಲ್ಲಿ ಚಿರತೆ ಹಿಡಿಯುವ ಬೋನು ಇರಿಸಲಾಗುವುದು. ಚಿರ‌ತೆ ಹಿಡಿಯಲು ಅರಣ್ಯ ಇಲಾಖೆಯ ವನ್ಯ ಜೀವಿ ಸಂರಕ್ಷಣಾ ವಿಭಾಗದ ಅನುಮತಿ ಕೋರಿ ಪತ್ರ ಬರೆದಿದ್ದು, ಒಪ್ಪಿಗೆ ದೊರೆತ ತಕ್ಷಣ ಚಿರತೆ ಹಿಡಿಯುವುದಾಗಿ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.