ಬೆಳಗಾವಿ ಗಡಿ ಮೀರಿದ ಪ್ರತಿಷ್ಠೆ​​​​​​​


Team Udayavani, Sep 7, 2018, 6:00 AM IST

mla-laxmi-hebbalkar-poses.jpg

ಬೆಂಗಳೂರು: ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ ರಾಜಕಾರಣ ಈಗ ಸಮ್ಮಿಶ್ರ ಸರ್ಕಾರದ ಅಸ್ತಿತ್ವಕ್ಕೆ ಕಂಟಕವಾಗುವ ಲಕ್ಷಣಗಳು ಎದ್ದು ಕಾಣುತ್ತಿವೆ. ಜಾರಕಿಹೊಳಿ ಸಹೋದರರು ಹಾಗೂ ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ್‌ ನಡುವಿನ ಸಂಘರ್ಷ ಸಮ್ಮಿಶ್ರ ಸರ್ಕಾರವನ್ನೇ ನಡುಗಿಸುವ ಸ್ಥಿತಿ ನಿರ್ಮಾಣವಾಗಿದೆ.

ಶುಕ್ರವಾರ ನಡೆಯುವ ಬೆಳಗಾವಿಯ ಪಿಎಲ್‌ಡಿ ಬ್ಯಾಂಕ್‌ ಚುನಾವಣೆಯಲ್ಲಿ ಜಯ ಯಾರ ಪರವಾಗಿರಲಿದೆ ಎನ್ನುವುದರ ಮೇಲೆ ಸಮ್ಮಿಶ್ರ ಸರ್ಕಾರದ ಭವಿಷ್ಯ ನಿಂತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಬ್ಯಾಂಕಿನ 14 ಜನ ನಿರ್ದೇಶಕರ ಪೈಕಿ ಲಕ್ಷ್ಮೀ ಹೆಬ್ಕಾಳ್ಕರ್‌ ಬಣದಲ್ಲಿ 9 ಜನರು ಜಾರಕಿಹೊಳಿ ಬಣದಲ್ಲಿ 5 ಜನರು ಹಾಗೂ ಸರ್ಕಾರದಿಂದ ಒಬ್ಬರು ನಾಮನಿರ್ದೇಶಿತ ನಿರ್ದೇಶಕರಿದ್ದಾರೆ. ಜಾರಕಿಹೊಳಿ ಪರವಾಗಿದ್ದ ಮೂರು ಜನರನ್ನು ಲಕ್ಷ್ಮೀ ಹೆಬ್ಟಾಳ್ಕರ್‌ ಕಡೆಯವರು ಅಜ್ಞಾತ ಸ್ಥಳದಲ್ಲಿ ಇರಿಸಿ, ಬ್ಯಾಂಕ್‌ ಹಿಡಿತ ಸಾಧಿಸಲು ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಲಕ್ಷ್ಮೀ ಹೆಬ್ಟಾಳ್ಕರ್‌ ಮತ್ತು ರಮೇಶ್‌ ಜಾರಕಿಹೊಳಿ ನಡುವಿನ ಗುದ್ದಾಟ ತಾರಕಕ್ಕೇರಿದ್ದು, ಇಬ್ಬರ ನಡುವೆ ಸಂಧಾನ ಏರ್ಪಡಿಸಲು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಅವರ ಮನವೊಲಿಕೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಆದರೆ, ಜಾರಕಿಹೊಳಿ ಸಹೋದರರು, ಡಿ.ಕೆ.ಶಿವಕುಮಾರ್‌ ಬೆಂಬಲದಿಂದಲೇ ಲಕ್ಷ್ಮೀ ಹೆಬ್ಟಾಳ್ಕರ್‌ ತಮ್ಮ ವಿರುದ್ಧ ಪಡೆ ಕಟ್ಟುತ್ತಿದ್ದಾರೆ ಎಂದು ಸಂಧಾನಕ್ಕೆ ನಿರಾಕರಿಸಿದ್ದಾರೆ ಎನ್ನಲಾಗಿದೆ.

ಹೇಗಾದರೂ ಮಾಡಿ ಜಾರಕಿಹೊಳಿ ಸಹೋದರರನ್ನು ಸಮಾಧಾನ ಪಡಿಸಲು  ಡಿ.ಕೆ. ಶಿವಕುಮಾರ್‌, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಅಶೋಕ್‌ ಚೌಹಾಣ್‌ ಮೊರೆ ಹೋಗಿದ್ದಾರೆ ಎನ್ನಲಾಗಿದೆ. ಆದರೆ, ಅಶೋಕ್‌ ಚೌಹಾಣ್‌ ಮಾತುಗಳನ್ನೂ ರಮೇಶ್‌ ಜಾರಕಿಹೊಳಿ ನಯವಾಗಿ ತಳ್ಳಿಹಾಕಿದ್ದಾರೆ ಎನ್ನಲಾಗಿದೆ. ಅಲ್ಲದೆ, ಸ್ಥಳೀಯ ವಿಷಯ ಆಗಿದ್ದರಿಂದ ಮಧ್ಯ ಪ್ರವೇಶವೂ ಬೇಡ ಎಂದಿದ್ದಾರೆ ಎನ್ನಲಾಗಿದೆ. ಹೀಗಾಗಿ ಡಿ.ಕೆ. ಶಿವಕುಮಾರ್‌ ಕೂಡ ಜಾರಕಿಹೊಳಿ ಸಹೋದರರನ್ನು ಶಾಂತಗೊಳಿಸಲು ಅಸಹಾಯಕರಾಗಿದ್ದಾರೆ.

ಸೋತರೆ ರಾಜ್ಯಪಾಲರ ಭೇಟಿ:
ಚುನಾವಣೆಯಲ್ಲಿ ಲಕ್ಷ್ಮೀ ಹೆಬ್ಟಾಳ್ಕರ್‌ ಬಣ ಜಯಗಳಿಸಿದರೆ ಜಾರಕಿಹೊಳಿ ಸಹೋದರರು ಸೋಮವಾರದ ಹೊತ್ತಿಗೆ ತಮ್ಮೊಂದಿಗಿರುವ ಶಾಸಕರೊಂದಿಗೆ ರಾಜ್ಯಪಾಲರನ್ನು ಭೇಟಿ ಮಾಡುವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ನಡುವೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ್‌ ಅವರಿಗೆ ದೆಹಲಿಯಿಂದ ದೂರವಾಣಿ ಮೂಲಕ ಕರೆ ಮಾಡಿ, ನಿಮ್ಮ ಸಮಸ್ಯೆ ನೀವೇ ಬಗೆಹರಿಸಿಕೊಳ್ಳಿ. ನಿಮ್ಮ ಸ್ವ ಪ್ರತಿಷ್ಠೆಗೆ ಸಮ್ಮಿಶ್ರ ಸರ್ಕಾರ ಬಲಿಕೊಡಬೇಡಿ. ಕೂಡಲೇ ಸಮಸ್ಯೆ ಬಗೆ ಹರಿಸಿಕೊಳ್ಳುವತ್ತ ಗಮನ ಹರಿಸಿ. ಸರ್ಕಾರಕ್ಕೆ ಸಮಸ್ಯೆಯಾದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಖಡಕ್‌ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ರಮೇಶ ಜಾರಕಿಹೊಳಿ ಬಾಂಬ್‌
ಬೆಳಗಾವಿ:
ಕಾಂಗ್ರೆಸ್‌ ವರಿಷ್ಠರು ಕೂಡಲೇ ಮಧ್ಯ ಪ್ರವೇಶಿಸಿ ಹೆಬ್ಟಾಳ್ಕರ್‌ ಅವರನ್ನು ಹದ್ದು ಬಸ್ತಿನಲ್ಲಿಡಬೇಕು. ಇಲ್ಲದಿದ್ದರೆ ನಾವು ಅನಿವಾರ್ಯವಾಗಿ ಕಠಿಣ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಗುರುವಾರ ಎಚ್ಚರಿಕೆ ನೀಡಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು,  ಬೆಳಗಾವಿ ತಾಲೂಕಿನ ಪಿಎಲ್‌ಡಿ ಬ್ಯಾಂಕಿನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಶಾಸಕ ಸತೀಶ ಜಾರಕಿಹೊಳಿಗೆ ಅವಮಾನವಾದರೆ ಅವರು ತೆಗೆದುಕೊಳ್ಳುವ ಯಾವುದೇ ಕಠಿಣ ನಿರ್ಧಾರಕ್ಕೆ ನಾನು ಬದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೊಸ ಬಾಂಬ್‌ ಹಾಕಿದರು.

ಬ್ಯಾಂಕಿನ ಚುನಾವಣೆ ವಿಚಾರದಲ್ಲಿ ಸರ್ಕಾರಕ್ಕೆ ಎಚ್ಚರಿಕೆ ಕೊಡುವಂತಹ ಮೂರ್ಖರು ನಾವಲ್ಲ. ಆದರೆ ಹೆಬ್ಟಾಳ್ಕರ್‌ ಅವರನ್ನು ಹದ್ದುಬಸ್ತಿನಲ್ಲಿಡಲು ಪಕ್ಷದ ಹೈಕಮಾಂಡ್‌ ಸೂಕ್ತ ಕ್ರಮ ಕೈಗೊಳ್ಳಬೇಕು. ಪಿಎಲ್‌ಡಿ ಬ್ಯಾಂಕ್‌ ಚುನಾವಣೆಯಲ್ಲಿ ಒಂಬತ್ತು ಜನ ನಿರ್ದೇಶಕರು ನಮ್ಮ ಜೊತೆ ಇದ್ದರು. ಆದರೆ ಹೆಬ್ಟಾಳ್ಕರ್‌ ಇದರಲ್ಲಿ ಪ್ರವೇಶ ಮಾಡಿ ಮೂವರನ್ನು ಕುದುರೆ ವ್ಯಾಪಾರ ಮಾಡಿ ಖರೀದಿಸಿದ್ದಾರೆ. ಇದರಲ್ಲಿ ಕೆಟ್ಟ ರಾಜಕಾರಣ ಮಾಡಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.

ಅಘಾತ ತಂದಿದೆ:
ನಮಗೆ 90 ಕೋಟಿ ಕೊಡಲಾಗಿದೆ ಎಂದು ಶಾಸಕಿ ಹೆಬ್ಟಾಳ್ಕರ್‌ ಹೇಳಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದ್ದು, ಇದರಿಂದ ಅಚ್ಚರಿ ಹಾಗೂ ಆಘಾತ ಉಂಟಾಗಿದೆ. ಶಾಸಕರು ಈ ರೀತಿ ಮಾತನಾಡುವುದು ಸರಿಯಲ್ಲ. ಅವರು ಈ ಮಟ್ಟಕ್ಕೆ ಇಳಿಯುತ್ತಾರೆ ಎಂದು ನಾನು ಊಹೆ ಮಾಡಿರಲಿಲ್ಲ. ಅವರು ಜಾರಕಿಹೊಳಿ ಕುಟುಂಬದವರಿಗೆ ಅಷ್ಟೊಂದು ಸಾಲ ಕೊಡುತ್ತಾರೆಯೇ? ಆಕೆ ನಮ್ಮ ಕುಟುಂಬಕ್ಕೆ ಹಣ ನೀಡುವ ಅವಶ್ಯಕತೆಯೂ ಇಲ್ಲ ಎಂದು ಕಿಡಿ ಕಾರಿದರು.

ಜಾರಕಿಹೊಳಿ ಕುಟುಂಬದ್ದೇ ಆಶ್ರಯ: ಹೆಬ್ಟಾಳ್ಕರ್‌ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ಮಾಡಿದವರು ಸತೀಶ ಜಾರಕಿಹೊಳಿ. ಆಗ ನಾನು ಇದಕ್ಕೆ ಒಪ್ಪಿಗೆ ನೀಡಿರಲಿಲ್ಲ. ಇದು ಅವರಿಗೆ ನೆನಪಿರಲಿಕ್ಕಿಲ್ಲ. ಅವರು ಜಾರಕಿಹೊಳಿ ಕುಟುಂಬದ ಅಶ್ರಯದಿಂದಲೇ ರಾಜಕೀಯವಾಗಿ ಬೆಳೆದಿದ್ದಾರೆ. ಇದೀಗ ನಮ್ಮ ವಿರುದ್ಧವೇ ಜಾತಿ ಮುಂದಿಟ್ಟುಕೊಂಡು  ಟೀಕೆ ಮಾಡುತ್ತಿರುವದು ಸರಿಯಲ್ಲ. ಹೈಕಮಾಂಡ್‌ ಇದಕ್ಕೆ ಕಡಿವಾಣ ಹಾಕದೇ ಇದ್ದರೆ ನಾವು ಉಗ್ರ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದರು.

ಸಹಾಯ ಮಾಡಿದ್ದೇನೆ: 2007-08 ರಲ್ಲಿ ಯಾರು ಗಾಡ್‌ಫಾದರ್‌ ಇದ್ದರೋ  ಗೊತ್ತಿಲ್ಲ.  ಅವರ ತಂದೆಗೆ ಆರೋಗ್ಯ ಸರಿ ಇಲ್ಲದಿದ್ದಾಗ ಹಣಕಾಸು ಸಹಾಯ ಮಾಡಿದ್ದೇನೆ. ಅವರ ಸಹೋದರ ಹಾಗೂ ಮಗನಿಗೆ ಸಾಕಷ್ಟು ಸಹಾಯ ಮಾಡಿದ್ದೇನೆ. ಆದರೆ ನಮ್ಮ ಮೇಲೆ ಈಗ ದ್ವೇಷದ ರಾಜಕಾರಣ ಮಾಡುತ್ತಿರುವುದು ಒಳ್ಳೆಯದಲ್ಲ. ಅವರಿಗೆ ಕಾನೂನಿನ ಅರಿವಿಲ್ಲ. ಉಪಕಾರ ಮಾಡಿದ್ದನ್ನು ಯಾರ ಮುಂದೆಯೂ ಹೇಳಬಾರದು. ಆದರೆ ಅನಿವಾರ್ಯವಾಗಿ ನಾನು ಸಹಾಯ ಮಾಡಿದ್ದನ್ನು ಹೇಳಬೇಕಾಗಿದೆ ಎಂದರು.

ಕೀಳು ರಾಜಕಾರಣ: ಲಕ್ಷ್ಮೀ ಹೆಬ್ಟಾಳ್ಕರ್‌ ಹಠಕ್ಕೆ ಬಿದ್ದು ಪಿಎಲ್‌ಡಿ ಬ್ಯಾಂಕಿನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ನಡೆಸುತ್ತಿದ್ದಾರೆ. ಈ ವಿಚಾರವನ್ನು ಇಷ್ಟೊಂದು ದೊಡ್ಡದಾಗಿ ಮಾಡುತ್ತಾಳೆ ಎಂಬ ಕಲ್ಪನೆಯೂ ನಮಗಿರಲಿಲ್ಲ. ಇಂತಹ ದರ್ಪದ ರಾಜಕಾರಣವನ್ನು ಜಿಲ್ಲೆಯಲ್ಲಿ ಇದುವರೆಗೆ ಯಾರೂ ಮಾಡಿರಲಿಲ್ಲ. ಆದರೆ ಹೆಬ್ಟಾಳ್ಕರ್‌ ಅವರು ಕೀಳು ರಾಜಕಾರಣ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.

ಸಿದ್ದರಾಮಯ್ಯ ಸರಕಾರದಲ್ಲಿ ಲಕ್ಷ್ಮೀ ಹೆಬ್ಟಾಳ್ಕರ್‌ಗೆ ದೆಹಲಿ ತೋರಿಸಿದ್ದು ನಾನು. ನನ್ನನ್ನು ಸಚಿವರನ್ನಾಗಿ ಯಾರು ಮಾಡಿದ್ದಾರೆ ಎಂಬುದು ಖಾನಾಪುರ ಶಾಸಕರಿಗೆ ಗೊತ್ತಿದೆ  ಕೇಳಿ.  ಡಿ.ಕೆ. ಶಿವಕುಮಾರ ನನ್ನ ಸ್ನೇಹಿತ. ಅವರು ಮಂತ್ರಿಯಾಗಲು ನಾನೇ ಸಹಾಯ ಮಾಡಿದ್ದೆ ಎಂದು ರಮೇಶ ಜಾರಕಿಹೊಳಿ ಹೇಳಿದರು.

ರಾಜಕೀಯದಲ್ಲಿ ಏಳು-ಬೀಳು ಸಹಜ. ಇವೆಲ್ಲವನ್ನೂ ಮೆಟ್ಟಿ ನಿಂತಾಗಲೇ ನಾಯಕನಾಗಲು ಸಾಧ್ಯ.
– ಲಕ್ಷ್ಮೀ ಹೆಬ್ಟಾಳ್ಕರ್‌, ಶಾಸಕಿ

ಟಾಪ್ ನ್ಯೂಸ್

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.